Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಜಿಲ್ಲೆಯಲ್ಲಿ ಜು.16ರಿಂದ...

ಶಿವಮೊಗ್ಗ ಜಿಲ್ಲೆಯಲ್ಲಿ ಜು.16ರಿಂದ ಭಾಗಶಃ ಲಾಕ್‌ಡೌನ್

ಅಪರಾಹ್ನ 2ರವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ15 July 2020 2:56 PM IST
share
ಶಿವಮೊಗ್ಗ ಜಿಲ್ಲೆಯಲ್ಲಿ ಜು.16ರಿಂದ ಭಾಗಶಃ ಲಾಕ್‌ಡೌನ್

ಶಿವಮೊಗ್ಗ, ಜು.15: ಕರೋನಾ ನಿಯಂತ್ರಣದ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಮುಂದಿನ ಆದೇಶದವರೆಗೆ ಅಪರಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಈ ತೀರ್ಮಾನ ಪ್ರಕಟಿಸಿದರು.

ಪೆಟ್ರೋಲ್ ಬಂಕ್‌ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಅಪರಾಹ್ನ 2 ಗಂಟೆಯವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಒದಗಿಸುವುದು ಮಾಲಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಹಬ್ಬ ಹರಿದಿನಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಮಾಲೋಚನಾ ಸಭೆ: ಇದಕ್ಕೂ ಮೊದಲು ನಡೆದ ಸಮಾಲೋಚನಾ ಸಭೆಯಲ್ಲಿ ಚೇಂಬರ್ ಆಫ್ ಕಾಮರ್ಸ್, ಲಾರಿ ಮಾಲಕರ ಸಂಘ, ಅಟೋ ಕಾಂಪ್ಲೆಕ್ಸ್ ಸಂಘ, ಸಗಟು ತರಕಾರಿ ವ್ಯಾಪಾರಿಗಳ ಸಂಘ, ಮಾಚೇನಹಳ್ಳಿ ಕೈಗಾರಿಕಾ ವಸಾಹತು  ಸಂಘ, ವಿಶ್ವೇಶ್ವರಯ್ಯ ಸಣ್ಣ ಕೈಗಾರಿಕೆಗಳ ಸಂಘ, ಬಸ್ ಮಾಲಕರ ಸಂಘ, ಜವಳಿ ವರ್ತಕರ ಸಂಘ, ರಿಕ್ಷಾ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X