Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೂತ್ ಮಟ್ಟದ ಕಾರ್ಯಪಡೆ ರಚನೆ,...

ಬೂತ್ ಮಟ್ಟದ ಕಾರ್ಯಪಡೆ ರಚನೆ, ತರಬೇತಿ-ಸಮೀಕ್ಷೆಗೆ ಕಾಲಮಿತಿ ನಿಗದಿ: ಸಚಿವ ಡಾ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ15 July 2020 11:33 PM IST
share
ಬೂತ್ ಮಟ್ಟದ ಕಾರ್ಯಪಡೆ ರಚನೆ, ತರಬೇತಿ-ಸಮೀಕ್ಷೆಗೆ ಕಾಲಮಿತಿ ನಿಗದಿ: ಸಚಿವ ಡಾ.ಸುಧಾಕರ್

ಬೆಂಗಳೂರು, ಜು. 15: ರಾಜಧಾನಿ ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿದ್ದು, ಅದರ ಅನ್ವಯ ಕಾರ್ಯನಿರ್ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ವಲಯವಾರು ಉಸ್ತುವಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬುಧವಾರ ನಗರದಲ್ಲಿ ವಲಯವಾರು ಉಸ್ತುವಾರಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಚರ್ಚಿಸಿ ಮಾಹಿತಿ ಪಡೆದ ಬಳಿಕ ಮಾತನಾಡಿದ ಅವರು, ನಿರ್ದಿಷ್ಟ ಹೊಣೆಗಾರಿಕೆ ವಹಿಸಿಕೊಂಡಿರುವ ಅಧಿಕಾರಿಗಳು ಇತರೆ ಸಹೋದ್ಯೋಗಿಗಳ ಜತೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಲಾಕ್‍ಡೌನ್ ಅವಧಿ ಮುಕ್ತಾಯಗೊಳ್ಳುವ ಮುನ್ನ ಬೂತ್ ಮಟ್ಟದಲ್ಲಿ ಸಮಿತಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಬೇಕು. ಅದಕ್ಕಾಗಿ ಸಮಿತಿಗಳ ರಚನೆ, ತರಬೇತಿ ಪ್ರಕ್ರಿಯೆ ಒಂದೆರಡು ದಿನಗಳಲ್ಲಿ ಮುಗಿಸಬೇಕು. ಆ ನಂತರ ಸಮಿತಿ ಸದಸ್ಯರು ತಮಗೆ ನಿಗದಿಗೊಳಿಸಿರುವ ಬೂತ್‍ಗಳಲ್ಲಿ ಮನೆ-ಮನೆ ಸಮೀಕ್ಷೆ ನಡೆಸಬೇಕು ಎಂದು ಡಾ.ಸುಧಾಕರ್ ನಿರ್ದೇಶನ ನೀಡಿದರು.

ಮನೆ-ಮನೆ ಸಮೀಕ್ಷೆ ವೇಳೆ ಐಎಲ್‍ಐ ಮತ್ತು ಪ್ರಕರಣಗಳ ತಪಾಸಣೆ ನಡೆಸಿ ರೋಗ ಲಕ್ಷಣ ಆಧರಿಸಿ ಅವರನ್ನು ಹೋಮ್ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಮತ್ತು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಸಮಿತಿ ಸದಸ್ಯರಿಗೆ ಮಾರ್ಗಸೂಚಿ ಬಗ್ಗೆ ತರಬೇತಿ ಸಮಯದಲ್ಲೇ ಮನವರಿಕೆ ಮಾಡಿಕೊಡಬೇಕು. ಅವರಿಗೆ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಯಂತ್ರಗಳನ್ನು ಒದಗಿಸಬೇಕು. ಆಂಬ್ಯುಲೆನ್ಸ್ ಒದಗಿಸುವುದು ಸಮಿತಿ ಜವಾಬ್ದಾರಿ ಆಗಬೇಕು. ಸಂಪರ್ಕಿತರ ಪತ್ತೆ ಕಾರ್ಯವೂ ಮರು ಆರಂಭ ಆಗಬೇಕು ಎಂದು ಅವರು ತಿಳಿಸಿದರು.

ವಲಯವಾರು ಉಸ್ತುವಾರಿ ಅಧಿಕಾರಿಗಳು ಪ್ರತಿದಿನ ಈ ಎಲ್ಲ ಕೆಲಸಗಳ ಮೇಲೆ ನಿಗಾವಹಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಜತೆಗೆ ತಮ್ಮ ವ್ಯಾಪ್ತಿಗೆ ಸೇರಿರುವ ಲ್ಯಾಬ್‍ಗಳ ಪರೀಕ್ಷೆ ಮತ್ತು ಕಾರ್ಯನಿರ್ವಹಣೆ ಮೇಲೂ ನಿಗಾ ಇಡಬೇಕು. ಒಂದು ವಾರದೊಳಗೆ ಯಾವುದೇ ಸ್ಯಾಂಪಲ್ ಬಾಕಿ ಇಲ್ಲದಂತೆ ನೋಡಿಕೊಳ್ಳಬೇಕು. ಇದರ ಸಮನ್ವಯವನ್ನು ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.

`ಕೊಳಚೆ ಪ್ರದೇಶ ಮತ್ತು ಹೋಮ್ ಕ್ವಾರಂಟೈನ್ ಸೌಲಭ್ಯಗಳಿಲ್ಲದ ಜನವಸತಿ ಪ್ರದೇಶಗಳಲ್ಲಿ ಕೊರೋನ ಸೋಂಕು ಪಾಸಿಟಿವ್ ಆದವರನ್ನು ಸರಕಾರಿ ವ್ಯವಸ್ಥೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡುವ ಕೆಲಸ ಆಗಬೇಕು. ಇದಕ್ಕಾಗಿ ಮುಂಬೈ ಧಾರಾವಿ ಕೊಳಗೇರಿಯಲ್ಲಿ ಅಳವಡಿಸಿಕೊಂಡಿರುವ ಮಾದರಿ ವ್ಯವಸ್ಥೆ ರೂಪಿಸಿಕೊಳ್ಳಬೇಕು. ವಲಯವಾರು ಅಗತ್ಯ ವಿರುವ ವಾಹನ ಮತ್ತು ಸಿಬ್ಬಂದಿ ಕೊರತೆಯನ್ನು ಬಿಬಿಎಂಪಿ ಆಯುಕ್ತರು ನಿರ್ವಹಿಸಬೇಕು. ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಕೊರತೆ ನಿವಾರಿಸುವ ಕೆಲಸವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ನೋಡಿಕೊಳ್ಳಬೇಕು'

-ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X