Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲು...

ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲು ಮೆಡಿಕಲ್ ಕಾಲೇಜು, ಖಾಸಗಿ ಸಂಸ್ಥೆಗಳಿಗೆ ಸಚಿವ ಸುಧಾಕರ್ ಸೂಚನೆ

ಹತ್ತು- ಹದಿನೈದು ದಿನಗಳಲ್ಲಿ ದಿನಕ್ಕೆ ಒಂದು ಸಾವಿರ ಗುರಿ ಮುಟ್ಟಲು ತಾಕೀತು

ವಾರ್ತಾಭಾರತಿವಾರ್ತಾಭಾರತಿ15 July 2020 11:36 PM IST
share
ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲು ಮೆಡಿಕಲ್ ಕಾಲೇಜು, ಖಾಸಗಿ ಸಂಸ್ಥೆಗಳಿಗೆ ಸಚಿವ ಸುಧಾಕರ್ ಸೂಚನೆ

ಬೆಂಗಳೂರು, ಜು.15:  ಕೋವಿಡ್ ಸೋಂಕಿನ ಪರೀಕ್ಷೆಗಳ ವಿಷಯದಲ್ಲಿ ನಿರ್ಲಕ್ಷ್ಯ ತೋರಿಸುವ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದು, ಮುಂದಿನ ಹತ್ತು-ಹದಿನೈದು ದಿನಗಳಲ್ಲಿ ಪ್ರತಿ ದಿನ 500-1000 ಟೆಸ್ಟ್ ಗಳನ್ನು ನಡೆಸುವ ಗುರಿ ತಲುಪಬೇಕು. ಈ ವಿಷಯದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದರು.

ನಗರದಲ್ಲಿ ಖಾಸಗಿ ಸಂಸ್ಥೆಗಳು ಮೆಡಿಕಲ್ ಕಾಲೇಜು ಮುಖ್ಯಸ್ಥರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಸರಕಾರ ಕಳೆದ ನಾಲ್ಕು ತಿಂಗಳಿಂದ ಅನೇಕ ಸೂಚನೆಗಳನ್ನು ನೀಡಿದೆ. ಲ್ಯಾಬ್ ಸ್ಥಾಪನೆಗೆ ಅಗತ್ಯ ವಿರುವ ನೆರವು ನೀಡಲಾಗಿದೆ. ಸಿಬ್ಬಂದಿಗೆ ನಿಮ್ಹಾನ್ಸ್ ಮೂಲಕ ತರಬೇತಿ ನೀಡಲಾಗಿದೆ. ಇಷ್ಟರ ಮೇಲೂ ಸರಕಾರದ ಜತೆ ಕೈಜೋಡಿಸದ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

ಮೆಡಿಕಲ್ ಕಾಲೇಜುಗಳಲ್ಲಿ ಪ್ರಯೋಗಾಲಯ ಸ್ಥಾಪನೆ ಮಾಡುವುದು ಕಡ್ಡಾಯ. ಎಂಸಿಐ ನಿಂದ ಸ್ಪಷ್ಟ ನಿದರ್ಶನಗಳಿವೆ. ಆದರೂ ಕೆಲವರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇನ್ನೂ ಇಂತಹ ಮೀನಾಮೇಷ ವರ್ತನೆಯನ್ನು ಸಹಿಸುವುದಿಲ್ಲ ಎಂದು ಸುಧಾಕರ್ ಹೇಳಿದರು.

ರಾಜ್ಯದಲ್ಲಿ ಸೋಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಟೆಸ್ಟ್ ಫಲಿತಾಂಶ ವಾರಗಳ ವರೆಗೆ ಬರುತ್ತಿಲ್ಲ ಎಂಬ ದೂರುಗಳಿವೆ. ಇನ್ನು ಮುಂದೆ 24 ರಿಂದ 30 ತಾಸಿನಲ್ಲಿ ವರದಿ ಕೈಸೇರಬೇಕು. ಆ ಉದ್ದೇಶದಿಂದ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ಇದರ ಉಸ್ತುವಾರಿಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಕೊಪ್ಪಳ ಆಸ್ಪತ್ರೆಯಲ್ಲಿ ಕನಿಷ್ಠ ಸಿಬ್ಬಂದಿ ಇಟ್ಟುಕೊಂಡು ಒಂದು ಸಾವಿರದ ಇನ್ನೂರು ಟೆಸ್ಟ್ ಗಳನ್ನು ಮಾಡಿ ರಾಜ್ಯಕ್ಕೆ ಮಾದರಿಯಾಗಿದೆ. ಉಳಿದ ಸಂಸ್ಥೆಗಳು ಈ ಗುರಿ ತಲುಪಬೇಕು. ಅದಕ್ಕಾಗಿ ಅಗತ್ಯ ಇರುವ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಬೇಕು ಎಂದು ಸುಧಾಕರ್ ತಿಳಿಸಿದರು.

ಪ್ರತಿದಿನ ಮಾಡುವ ಟೆಸ್ಟ್ ಮತ್ತು ಬಾಕಿ ಉಳಿದ ಸ್ಯಾಂಪಲ್ ವಿವರಗಳನ್ನು ರಾಜ್ಯದ ಡ್ಯಾಶ್ ಬೋರ್ಡ್‍ನಲ್ಲಿ ಸಿಗುವಂತೆ ಎಲ್ಲರೂ ಮಾಹಿತಿ ಒದಗಿಸಬೇಕು. ಇದಕ್ಕಾಗಿಯೇ ಡಾಟಾ ಆಪರೇಟರ್ ಗಳನ್ನು ನೇಮಕ ಮಾಡಬೇಕು. ಇನ್ನು ಮುಂದೆ ನೆಪಗಳನ್ನು ಹೇಳುವಂತಿಲ್ಲ ಎಂದು ಅವರು ಸೂಚಿಸಿದರು.

ರೋಗ ಲಕ್ಷಣ ಇದ್ದವರು ಮತ್ತು ಇಲ್ಲದವರ ಸ್ಯಾಂಪಲ್ ಗಳನ್ನು ಸರಕಾರ ನೀಡಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ಟೆಸ್ಟ್ ಮಾಡಬೇಕು. ಚೌಕಾಸಿ ಪ್ರಶ್ನೆಯಿಲ್ಲ. ಮೆಡಿಕಲ್ ಕಾಲೇಜು ಹೊರತು ಪಡಿಸಿ ಇರುವ ಖಾಸಗಿ ಪ್ರಯೋಗಾಲಯಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಾಮರ್ಶೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಪ್ರಯೋಗಾಲಯ ಸ್ಥಾಪನೆ, ಸಿಬ್ಬಂದಿ ತರಬೇತಿ ಹಾಗೂ ನಾನಾ ಸಂಸ್ಥೆಗಳ ಅಕ್ರಡೇಶನ್ ಕೊಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿತ್ತಿರುವ ನಿಮ್ಹಾನ್ಸ್ ನ ಡಾ.ರವಿ ಅವರನ್ನು ಸುಧಾಕರ್ ಇದೇ ವೇಳೆ ಅಭಿನಂದಿಸಿದರು. ಮುಂದಿನ ಹತ್ತು ದಿನಗಳಲ್ಲಿ ಬಾಕಿ ಇರುವ 25 ರಿಂದ 30 ಪ್ರಯೋಗಾಲಯ ಗಳನ್ನು ಸ್ಥಾಪಿಸಿ ಟೆಸ್ಟ್ ಗಳ ವಿಷಯದಲ್ಲಿ ಗೊಂದಲ ಉದ್ಭವಿಸದಂತೆ ನೋಡಿಕೊಳ್ಳಬೇಕು ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ  ಅವರು ತಾಕೀತು ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X