Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬ್ಯಾಡಗಿ ಮೆಣಸಿನಕಾಯಿ ಗುಣಮಟ್ಟ...

ಬ್ಯಾಡಗಿ ಮೆಣಸಿನಕಾಯಿ ಗುಣಮಟ್ಟ ಪರೀಕ್ಷೆಗೆ ಲ್ಯಾಬ್: ಸಚಿವ ಎಸ್.ಟಿ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ15 July 2020 11:52 PM IST
share
ಬ್ಯಾಡಗಿ ಮೆಣಸಿನಕಾಯಿ ಗುಣಮಟ್ಟ ಪರೀಕ್ಷೆಗೆ ಲ್ಯಾಬ್: ಸಚಿವ ಎಸ್.ಟಿ.ಸೋಮಶೇಖರ್

ಹಾವೇರಿ, ಜು. 15: ರಾಜ್ಯವಷ್ಟೇ ಅಲ್ಲದೆ, ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಬ್ಯಾಡಗಿ ಮೆಣಸಿನಕಾಯಿಗೆ ಅದರದ್ದೇ ಆದ ವಿಶೇಷತೆ ಇದೆ. ಇದಕ್ಕೆ ಇನ್ನಷ್ಟು ಮನ್ನಣೆ ಸಿಗುವುದರ ಜೊತೆಗೆ ರೈತರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗುಣಮಟ್ಟ ಪರಿಶೀಲನೆಗೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಒಂದು ಪ್ರಯೋಗಾಲಯ(ಲ್ಯಾಬೋರೇಟರಿ)ವನ್ನು ಮಂಜೂರು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಬುಧವಾರ ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬ್ಯಾಡಗಿ ಮೆಣಸಿನಕಾಯಿ ಪರೀಕ್ಷೆಗೆಂದು ಲ್ಯಾಬೋರೇಟರಿಯನ್ನು ಮಾಡುವುದರಿಂದ ಮೆಣಸಿನಕಾಯಿ ಗುಣಮಟ್ಟವನ್ನು ಇಲ್ಲಿಯೇ ಪರೀಕ್ಷಿಸಲು ಅನುಕೂಲವಾಗಲಿದೆ. ಇದು ರೈತರ ಹಿತದೃಷ್ಟಿಯಿಂದ ಸಹಕಾರಿ. ಇನ್ನು ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯ ಮೂಲ ಸೌಲಭ್ಯಕ್ಕೆ ಈಗಾಗಲೇ 10ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದರು.

800 ಸಿಬ್ಬಂದಿ ನೇಮಕ: ರಾಜ್ಯದಲ್ಲಿ ಎಪಿಎಂಸಿ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ಇದಕ್ಕಾಗಿ ರಾಜ್ಯಾದ್ಯಂತ ಸುಮಾರು 800 ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುವುದು ಎಂದು ಸೋಮಶೇಖರ್ ಇದೇ ವೇಳೆ ಮಾಹಿತಿ ನೀಡಿದರು.

ನಮ್ಮ ಬೆಳೆ ನಮ್ಮ ಹಕ್ಕು ಅಧಿಕಾರ: ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೇ ಅನುಕೂಲವಾಗಿದೆ. ಇದು ಕೇಂದ್ರ ಸರಕಾರ ಉತ್ತಮ ಯೋಜನೆ. ರೈತ ತಾನು ಬೆಳೆದ ಬೆಳೆಯನ್ನು ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡುವ ಮುಕ್ತ ಹಕ್ಕನ್ನು ಹೊಂದಿದ್ದು, ಸ್ಪರ್ಧಾತ್ಮಕ ಬೆಲೆಗೆ ಮಾರಾಟ ಮಾಡಬಹುದಾಗಿದೆ. ಈ ಮೂಲಕ ನಮ್ಮ ಬೆಳೆ ನಮ್ಮ ಹಕ್ಕು ಎಂಬುದು ರೈತರ ಮಂತ್ರವಾಗಿದೆ. ಅವರ ಬೆಳೆಗಳಿಗೆ ಅವರೇ ಬೆಲೆಯನ್ನು ನಿರ್ಧರಿಸುವ ಕಾಲ ಈಗ ಬಂದಿದೆ ಎಂದರು.

ಅವರಲ್ಲೇ ಹೊಂದಾಣಿಕೆ ಇಲ್ಲ: `ಸಚಿವ ಸಂಪುಟದಲ್ಲಿ ಹೊಂದಾಣಿಕೆ ಇಲ್ಲ' ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ವಾಸ್ತವದಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಹೊಂದಾಣಿಕೆ ಇಲ್ಲ. ನಮ್ಮ ಪಕ್ಷದ ಬಗ್ಗೆ ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ನಾವೆಲ್ಲರೂ ಸಿಎಂ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಪ್ರಚಾರಕ್ಕಾಗಿ ಜನರ ಗಮನ ಬೇರೆ ಕಡೆ ಸೆಳೆಯಲು ಕೊರೋನ ಸಂಕಷ್ಟದ ಕಾಲದಲ್ಲೂ ರಾಜಕೀಯ ಮಾಡುತ್ತಿದ್ದಾರೆಂದು ದೂರಿದರು.

ಸಿಎಂ ವಿವೇಚನೆಗೆ: ಮೇಲ್ಮನೆ ಸದಸ್ಯರಾದ ಎಂಟಿಬಿ ನಾಗರಾಜ್, ಆರ್.ಶಂಕರ್ ಸೇರಿ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ವಿಚಾರ ಸಿಎಂ ಬಿಎಸ್‍ವೈ ಅವರ ಪರಮಾಧಿಕಾರ. ಈ ನಿಟ್ಟಿನಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು ಹಾಗೂ ಯಾರನ್ನು ಕೈಬಿಡಬೇಕೆಂಬ ಬಗ್ಗೆ ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸೋಮಶೇಖರ್ ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X