Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸ್ಪತ್ರೆಯಲ್ಲಿ ಮೂತ್ರದಿಂದ...

ಆಸ್ಪತ್ರೆಯಲ್ಲಿ ಮೂತ್ರದಿಂದ ಒದ್ದೆಯಾಗಿದ್ದ ಹಾಸಿಗೆಯಲ್ಲಿ ಮಲಗಿದ್ದ ವರವರ ರಾವ್: ಕುಟುಂಬಸ್ಥರ ಆರೋಪ

ವಾರ್ತಾಭಾರತಿವಾರ್ತಾಭಾರತಿ17 July 2020 1:28 PM IST
share
ಆಸ್ಪತ್ರೆಯಲ್ಲಿ ಮೂತ್ರದಿಂದ ಒದ್ದೆಯಾಗಿದ್ದ ಹಾಸಿಗೆಯಲ್ಲಿ ಮಲಗಿದ್ದ ವರವರ ರಾವ್: ಕುಟುಂಬಸ್ಥರ ಆರೋಪ

ಮುಂಬೈ :  ಭೀಮಾ ಕೋರೆಗಾಂವ್ ಪ್ರಕರಣದಲ್ಲಿ 2018ರಿಂದ ಬಂಧನದಲ್ಲಿರುವ ಹಿರಿಯ ಕವಿ ಮತ್ತು ಹೋರಾಟಗಾರ 79 ವರ್ಷದ ವರವರ ರಾವ್ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ರಾವ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವಿಚಾರ  ಜೈಲಿನ ಅಧಿಕಾರಿಗಳು ಅವರ ಕುಟುಂಬಕ್ಕೆ ತಿಳಿಸಿರಲಿಲ್ಲ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಕೊನೆಗೆ ಜುಲೈ 15ರಂದು ಅವರ ಮೂವರು ಪುತ್ರಿಯರು, ಸೋದರಳಿಯ ವೇಣುಗೋಪಾಲ್ ಹಾಗೂ ಪತ್ನಿ ಹೇಮಲತಾ ಆಸ್ಪತ್ರೆಗೆ ತೆರಳಿದಾಗ ಅಲ್ಲಿ ರಾವ್ ಅವರು ಮೂತ್ರದಿಂದ ಒದ್ದೆಯಾಗಿದ್ದ ಹಾಸಿಗೆಯಲ್ಲಿ ಮಲಗಿರುವುದನ್ನು ಗಮನಿಸಿ ಆಘಾತಗೊಂಡಿದ್ದರು. ಆ ಸ್ಥಳದಲ್ಲಿ ದುರ್ನಾತ ಬರುತ್ತಿತ್ತು. ಅವರ ಆರೈಕೆಯನ್ನು ಯಾರೂ ಮಾಡಿರಲಿಲ್ಲ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.

ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ನಂತರ ಈಗ ಅವರನ್ನು ಸರಕಾರದ ಕೋವಿಡ್ ಆಸ್ಪತ್ರೆಯಾಗಿರುವ ಸೈಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾವ್ ಅವರನ್ನು  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಬೇಕೆಂದು ಕೋರಿ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ  ಹ್ಯೂಮನ್ ರೈಟ್ಸ್ ಡಿಫೆಂಡರ್ಸ್  ಅಲರ್ಟ್ ಇದರ ರಾಷ್ಟ್ರೀ ಯ ಕಾರ್ಯದರ್ಶಿ ಹೆನ್ರಿ ತಿಫಗ್ನೆ ಪತ್ರ ಬರೆದಿದ್ದಾರೆ.

ನವಿ ಮುಂಬೈನ ತಾಲೋಜ ಕಾರಾಗೃಹದಲ್ಲಿ ಇರಿಸಲಾಗಿದ್ದ ರಾವ್ ಅವರ ಆರೋಗ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಜುಲೈ 13ರಂದು ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿ ಅವರ ಕುಟುಂಬ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿದ ನಂತರ ಈ ಬೆಳವಣಿಗೆ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X