Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್‌ಇಝೆಡ್ ಅಧೀನದ ಮೀನು ಸಂಸ್ಕರಣಾ...

ಎಸ್‌ಇಝೆಡ್ ಅಧೀನದ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಜೀತಗಾರಿಕೆ: ಡಿವೈಎಫ್‌ಐ ಆರೋಪ

ವಾರ್ತಾಭಾರತಿವಾರ್ತಾಭಾರತಿ17 July 2020 3:26 PM IST
share
ಎಸ್‌ಇಝೆಡ್ ಅಧೀನದ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಜೀತಗಾರಿಕೆ: ಡಿವೈಎಫ್‌ಐ ಆರೋಪ

ಮಂಗಳೂರು, ಜು.17: ಎಸ್‌ಇಝೆಡ್ ಅಧೀನದ ಮೀನು ಸಂಸ್ಕರಣಾ ಘಟಕವೊಂದರಲ್ಲಿರುವ ಕಾರ್ಮಿಕರಿಗೆ ಸರಿಯಾಗಿ ಸಂಬಳ, ವಸತಿ, ಆಹಾರ ವ್ಯವಸ್ಥೆ ಕಲ್ಪಿಸದೆ ನೀಡದೆ ಜೀತಗಾರಿಕೆ ಮಾಡಲಾಗುತ್ತಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಇಲ್ಲಿನ ಖಾಸಗಿ ಕಂಪೆನಿಯಲ್ಲಿ ಮುನ್ನೂರಕ್ಕೂ ಅಧಿಕ ಕಾರ್ಮಿಕರಿದ್ದಾರೆ. ಆ ಪೈಕಿ ಅಸ್ಸಾಂ ರಾಜ್ಯದ ಅಧಿಕ ಮಂದಿ ಇದ್ದಾರೆ. ಜೋಕಟ್ಟೆಯ ಸಣ್ಣ ಕೊಠಡಿಗಳಲ್ಲಿ ಮಹಿಳೆಯರ ಸಹಿತ 16 ಮಂದಿ ನೆಲೆಸಿದ್ದಾರೆ. ಈ ಕಾರ್ಮಿಕರಿಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ಆಹಾರವನ್ನೂ ನೀಡುತ್ತಿಲ್ಲ. ಕೆಲವು ದಿನಗಳ ಹಿಂದೆ ಇವರು ಹಸಿವಿನಿಂದ ಬಳಲುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಅದರಂತೆ ವಿವರ ಕಲೆ ಹಾಕಿದಾಗ ಆಘಾತಕಾರಿ ಸಂಗತಿಗಳು ಹೊರಗೆ ಬಂದಿವೆ ಎಂದು ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 ಅಸ್ಸಾಂ ಮೂಲದ ಈ ಕಾರ್ಮಿಕರನ್ನು ಉತ್ತರ ಭಾರತ ಮೂಲದ ಗುತ್ತಿಗೆದಾರ ದಂಪತಿಯ ಮೂಲಕ ಇಲ್ಲಿ ಕೆಲಸಕ್ಕೆ ನಿಯುಕ್ತಿಗೊಳಿಸಲಾಗಿದೆ. ಇವರು ದಿನಕ್ಕೆ 12 ಗಂಟೆ ದುಡಿಯಬೇಕು. ಮಾಸಿಕ 7,500 ರೂ. ಸಂಬಳ ನಿಗದಿಪಡಿಸಲಾಗಿದೆ. ಅವಧಿ ಮೀರಿ ಕೆಲಸ ಮಾಡಿದರೆ ಹೆಚ್ಚುವರಿ ಸಂಬಳವಿಲ್ಲ, ಪಿಎಫ್, ಇಎಸ್‌ಐ ಕೂಡ ಇಲ್ಲ. ಹಾಜರಾತಿ ಎಂಬುದು ಇಲ್ಲವೇ ಇಲ್ಲ. ಹಾಗಾಗಿ ಇವರು ಈ ಕಂಪೆನಿಯಲ್ಲಿ ಕೆಲಸ ಮಾಡಿದ್ದಕ್ಕೆ ದಾಖಲೆಯೇ ಇಲ್ಲ. ಅಕಸ್ಮಾತ್ ಒಂದು ದಿನ ರಜೆ ಮಾಡಿದರೆ, ಸಂಬಳದಲ್ಲಿ 300 ರೂ. ಕಡಿತಗೊಳಿಸಲಾಗುತ್ತದೆ. ಉಳಿದುಕೊಳ್ಳುವ ಸ್ಥಳದಿಂದ ಕೆಲಸ ಮಾಡುವ ಸ್ಥಳಕ್ಕೆ ಗುತ್ತಿಗೆದಾರನೇ ಸಾಗಿಸುತ್ತಾನೆ. ಹೊರಗಿನ ಜನರ ಸಂಪರ್ಕ ಇಲ್ಲದಂತೆ ವಸ್ತುಶಃ ಜೀತದಾಳುಗಳಂತೆ ಇವರನ್ನು ಕಾಣಲಾಗುತ್ತಿದೆ ಎಂದು ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿ ಮೊದಲು ಕೆಲವು ದಿನ ಕೆಲಸವಿರಲಿಲ್ಲ. ಬಳಿಕ ಕೆಲಸ ನೀಡಲಾಗಿದೆ. ಕಳೆದ ಮೂರು ತಿಂಗಳಿನಿಂದ ಸಂಬಳವನ್ನೂ ಕೊಟ್ಟಿಲ್ಲ. ಸಂಬಳ ಕೇಳಿದರೆ ಗುತ್ತಿಗೆದಾರ ಬೆದರಿಸುತ್ತಾನೆ. ಸಂಬಳ ಕೊಡದ ಕಾರಣ ಇವರು ಇದೀಗ ಕೆಲಸಕ್ಕೆ ಹೋಗುತ್ತಿಲ್ಲ. ಹಾಗಾಗಿ ಮಕ್ಕಳ ಸಹಿತ ಎಲ್ಲರೂ ಹಸಿವಿನಿಂದ ಕಂಗೆಟ್ಟಿದ್ದಾರೆ. ತಕ್ಷಣ ಡಿವೈಎಫ್‌ಐ ಕಾರ್ಯಕರ್ತರಾದ ಅಬೂಬಕ್ಕರ್ ಬಾವ, ರಾಜು, ಇಕ್ಬಾಲ್ ಮತ್ತಿತರರು ಇವರಿಗೆ ಆಹಾರದ ವ್ಯವಸ್ಥೆ ಕಲ್ಪಿಸಿದ್ದಾರೆ. ಅಲ್ಲದೆ ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ. ಆದರೆ, ಪ್ರಯೋಜನವಾಗಲಿಲ್ಲ. ಹಾಗಾಗಿ ಎಸ್‌ಇಝೆಡ್ ಮತ್ತು ಇವರನ್ನು ಜೀತದಾಳುಗಳಂತೆ ದುಡಿಸುವ ಕಂಪೆನಿ ನ್ಯಾಯ ದೊರಕಿಸಿಕೊಡದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X