Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಸ್ಸಾಂ ಪರಿಸ್ಥಿತಿಯ ಬಗ್ಗೆ ತುರ್ತು ಗಮನ...

ಅಸ್ಸಾಂ ಪರಿಸ್ಥಿತಿಯ ಬಗ್ಗೆ ತುರ್ತು ಗಮನ ಹರಿಸಲು ಪ್ರಧಾನಿಗೆ ದೇವೇಗೌಡ ಮನವಿ

ವಾರ್ತಾಭಾರತಿವಾರ್ತಾಭಾರತಿ17 July 2020 5:22 PM IST
share
ಅಸ್ಸಾಂ ಪರಿಸ್ಥಿತಿಯ ಬಗ್ಗೆ ತುರ್ತು ಗಮನ ಹರಿಸಲು ಪ್ರಧಾನಿಗೆ ದೇವೇಗೌಡ ಮನವಿ

ಬೆಂಗಳೂರು, ಜು. 17: ಕೋವಿಡ್-19 ಸಾಂಕ್ರಾಮಿಕ ರೋಗವು ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವಾಗ ಅಸ್ಸಾಂನ ಜನರು ಪ್ರವಾಹ ಮತ್ತು ಅದರಿಂದ ಉಂಟಾದ ಸಾವು-ನೋವುಗಳ ಜೊತೆ ಹೋರಾಡುತ್ತಿದ್ದಾರೆ. ಈ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶದಿಂದ ಸ್ಥಳಾಂತರಗೊಳ್ಳಲು ಹೋರಾಡುತ್ತಿರುವುದು ನೋಡಿದರೆ ಮನಸ್ಸಿಗೆ ನೋವುಂಟಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಉದಯೋನ್ಮುಖ ರಾಜ್ಯವಾದ ಅಸ್ಸಾಂನ ಸ್ಥಿತಿಯ ಬಗ್ಗೆ ತುರ್ತು ಗಮನ ಹರಿಸಬೇಕು. ಅಲ್ಲಿನ ಸರಕಾರಕ್ಕೆ ಗರಿಷ್ಠ ನೆರವು ನೀಡಬೇಕು ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

ಅಸ್ಸಾಂನಲ್ಲಿನ ಪ್ರವಾಹದ ವರದಿಗಳಿಂದ ನಾನು ತೀವ್ರವಾಗಿ ನೊಂದಿದ್ದೇನೆ. ಕೆಲವು ದಿನಗಳಿಂದ ಅಲ್ಲಿನ ಪರಿಸ್ಥಿತಿ ಸ್ಥಿರವಾಗಿ ಹದಗೆಡುತ್ತಿದೆ ಎಂದು ನನ್ನ ಗಮನಕ್ಕೆ ಬಂದಿದೆ. ಇತ್ತೀಚಿನ ವರದಿಗಳಲ್ಲಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದು ನೋವಿನ ಸಂಗತಿ. ಈ ಪ್ರವಾಹದಿಂದ ಸುಮಾರು ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಸುಮಾರು 480 ಪರಿಹಾರ ಶಿಬಿರಗಳನ್ನು ಈಗಾಗಲೇ ಅಲ್ಲಿನ ರಾಜ್ಯ ಸರಕಾರ ಸ್ಥಾಪಿಸಿದ್ದರೂ ಸಾರ್ವಜನಿಕರ ಮೂಲಸೌಕರ್ಯಗಳಿಗೆ ದೊಡ್ಡ ಪ್ರಮಾಣದ ಪೆಟ್ಟು ಬಿದ್ದಿದೆ.

ಜೊತೆಗೆ ಸುಮಾರು 60ಕ್ಕೂ ಹೆಚ್ಚು ಪ್ರಾಣಿಗಳು ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಸಾವನ್ನಪ್ಪಿರುವುದು ಬಹಳ ದುಃಖಕರವಾಗಿದೆ. ನಾನು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮತ್ತು ಅದಾದ ನಂತರವೂ ಅಸ್ಸಾಂ ಜನತೆ ಮತ್ತು ಈಶಾನ್ಯ ರಾಜ್ಯಗಳ ಜನರು ನನ್ನ ಬಗ್ಗೆ ಅತೀವ ಪ್ರೀತಿ ಮತ್ತು ವಿಶ್ವಾಸ  ತೋರಿಸಿದ್ದಾರೆ, ಅಲ್ಲಿನ ಜನರು ಆದಷ್ಟು ಬೇಗ ಈ ಸಂಕಷ್ಟದಿಂದ ಹೊರ ಬರಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ದೇವೇಗೌಡ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X