ಸಯ್ಯದ್ ಖಲೀಲ್
ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರು ಪಂಜ ನಿವಾಸಿ ನೂರ್ ಮುಹಮ್ಮದ್ ಎಂಬವರ ಪುತ್ರ ಸಯ್ಯದ್ ಖಲೀಲ್ (50) ಎಂಬವರು ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ದಫನ ಕಾರ್ಯ ಶುಕ್ರವಾರ ಮದ್ಯಾಹ್ನ ಒಳತ್ತಡ್ಕ ಮಸೀದಿ ವಠಾರದ ಲ್ಲಿ ನಡೆಸಲಾಯಿತು.
Next Story





