Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಮಣಿಸಲು ಕೇಂದ್ರದಿಂದ ರಾಜ್ಯಕ್ಕೆ...

ಕೊರೋನ ಮಣಿಸಲು ಕೇಂದ್ರದಿಂದ ರಾಜ್ಯಕ್ಕೆ ಎಲ್ಲ ನೆರವು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ17 July 2020 11:47 PM IST
share
ಕೊರೋನ ಮಣಿಸಲು ಕೇಂದ್ರದಿಂದ ರಾಜ್ಯಕ್ಕೆ ಎಲ್ಲ ನೆರವು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು, ಜು. 17: ಕೊರೋನ ಮಹಾಮಾರಿಯನ್ನು ಮಣಿಸಲು ರಾಜ್ಯ ಸರಕಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಎಲ್ಲ ನೆರವು ನೀಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಕರ್ನಾಟಕದಲ್ಲಿ ವಿಶೇಷವಾಗಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಮಹಾಮಾರಿ ನಿಯಂತ್ರಸುವ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ನಡೆಸಿದ ಸಚಿವರು, ಸಂಸದರು ಮತ್ತು ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಕೊರೋನ ವಿರುದ್ಧದ ಹೋರಾಟದ ವಿಚಾರವಾಗಿ ಕೇಂದ್ರವು ರಾಜ್ಯದೊಂದಿಗೆ ಸತತ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿದೆ. ಇನ್ನೂ ಏನೆಲ್ಲ ಅಗತ್ಯವೋ ಅದನ್ನು ಮಾಡಲು ನಾವು ಸಿದ್ಧರಿದ್ದೇವೆ ಎಂದರು.

ಔಷಧೋದ್ಯಮವೂ ನನ್ನ ಇಲಾಖೆಯ ಅಧೀನದಲ್ಲಿಯೇ ಬರುತ್ತದೆ. ಹಾಗಾಗಿ ನಾನು ಪ್ರತಿದಿನ ಖುದ್ದಾಗಿ ಔಷಧ ಉತ್ಪಾದನೆ, ವಿತರಣೆ ಹೇಗಾಗುತ್ತಿದೆ ಎಂದು ಪರಿಶೀಲಿಸುತ್ತೇನೆ. ಈ ವಿಚಾರದಲ್ಲಿ ಸದಾ ನಿಗಾ ಇಡಲಾಗುತ್ತದೆ. ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ಹೈಡ್ರೊಕ್ಸಿಕ್ಲೋರೊಕ್ವಿನ್, ಪೆರಾಸೆಟಾಮೊಲ್ ಮುಂತಾದ ಔಷಧಗಳು ಸಾಕಷ್ಟು ದಾಸ್ತಾನಿದೆ. ಹಾಗೆಯೇ ದೇಶಾದ್ಯಂತ ಇರುವ ನಮ್ಮ ಇಲಾಖೆಯ ಜನೌಷಧಿ ಕೇಂದ್ರಗಳಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಜೀವರಕ್ಷಕ ಔಷಧಗಳು ಲಭ್ಯವಿವೆ. ಕರ್ನಾಟಕ ರಾಜ್ಯವೊಂದರಲ್ಲೇ 600ಕ್ಕಿಂತ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸದಾನಂದ ಗೌಡ ಹೇಳಿದರು.

ಔಷಧಗಳ ಕೊರತೆ, ಕಾಳಸಂತೆಯಂತಹ ಏನಾದರು ದೂರುಗಳಿದ್ದರೆ ನಮ್ಮ ಜನೌಷಧಿ ಸಹಾಯವಾಣಿ ಸಂಖ್ಯೆ-18001808080 ಅಥವಾ ಎನ್‍ಪಿಪಿಎ ಸಹಾಯವಾಣಿ 18001112550/011-23345118/011-23345122 ನಂಬರುಗಳಿಗೆ ಕರೆ ಮಾಡಬಹುದು. ಅಥವಾ ಖುದ್ದು ನನ್ನ ಗಮನಕ್ಕೂ ತರಬಹುದು. ಏನೇ ಸಮಸ್ಯೆಯಿದ್ದರೂ ಅದನ್ನು ಇತ್ಯರ್ಥಪಡಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಅದೇ ರೀತಿ ಸರಕಾರಿ ಅಥವಾ ಖಾಸಗಿ ಸಂಸ್ಥೆಗಳು ತುರ್ತು ಔಷಧ, ವೈದ್ಯಕೀಯ ಉಪಕರಣಗಳ ಆಮದು ಮಾಡಿಕೊಳ್ಳುವ ವಿಚಾರವಾಗಿ ತೊಡಕುಗಳು ಇದ್ದರೆ ನಮ್ಮ ಇಲಾಖೆಯ ಅಥವಾ ನನ್ನ ಗಮನಕ್ಕೆ ತರಬಹುದು. ಅಗತ್ಯ ಅನುಮತಿಯನ್ನು ಸ್ವಲ್ಪವೂ ವಿಳಂಬವಿಲ್ಲದೆ ದೊರಕಿಸಿಕೊಡಲಾಗುವುದು ಎಂದು ಅವರು ಹೇಳಿದರು.

ಮಹಾಮಾರಿ ಕೊರೋನ ರೋಗವು ಜಗತ್ತಿನ ಆರೋಗ್ಯ, ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ನಾವೆಲ್ಲ ಒಟ್ಟಾಗಿ ಸಂಘಟಿತ ಪ್ರಯತ್ನ ಮಾಡಿದಾಗಲೇ ಇದನ್ನು ಮಣಿಸಲು ಸಾಧ್ಯ. ಸಾರ್ವಜನಿಕರೂ ಈ ಹೋರಾಟದಲ್ಲಿ ಕೈಜೋಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳು, ವೈದ್ಯರು ಸೇರಿದಂತೆ ಕೊರೋನ ಯೋಧರ ಜತೆ ಎಲ್ಲ ರೀತಿಯಿಂದ ಸಹಕರಿಸಿ ಎಂದು ವಿನಂತಿಸುತ್ತೇನೆ ಎಂದು ಸದಾನಂದ ಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X