ದ್ವಿತೀಯ ಪಿಯು: ಗುರುಪುರ ಸರಕಾರಿ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಗುರುಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಶ್ವೇತಾ (552), ಫಾತಿಮತ್ ಶಿಫಾನಾ (551) ಅಂಕ ಗಳಿಸಿ ಕಾಲೇಜಿಗೆ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಾಗಿರುತ್ತಾರೆ.
ವಾಣಿಜ್ಯ ವಿಭಾಗದ ವಿದ್ಯಾರ್ಥಿ ಲಿಖಿತಾ(549) ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ.91, ವಾಣಿಜ್ಯ ವಿಭಾಗದಲ್ಲಿ ಶೇ.75 ಮತ್ತು ಕಲಾ ವಿಭಾಗದಲ್ಲಿ ಶೇ.75 ಫಲಿತಾಂಶ ದಾಖಲಾಗಿದೆ. ಶ್ವೇತಾ ಮತ್ತು ರಮೀಝಾ ಗಣಿತ ವಿಷಯದಲ್ಲಿ ತಲಾ 100 ಅಂಕ ಗಳಿಸಿ ಕಾಲೇಜಿನಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.
Next Story





