Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಂಟೈನರ್ ನಲ್ಲಿ ಕೋವಿಡ್19 ಐಸಿಯು:...

ಕಂಟೈನರ್ ನಲ್ಲಿ ಕೋವಿಡ್19 ಐಸಿಯು: ಬೆಂಗಳೂರಿನಲ್ಲಿ ಮೊದಲ ಪ್ರಯೋಗ

ಪರಿಶೀಲಿಸಿದ ಡಿಸಿಎಂ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ18 July 2020 4:33 PM IST
share
ಕಂಟೈನರ್ ನಲ್ಲಿ ಕೋವಿಡ್19 ಐಸಿಯು: ಬೆಂಗಳೂರಿನಲ್ಲಿ ಮೊದಲ ಪ್ರಯೋಗ

ಬೆಂಗಳೂರು, ಜು.18: ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಕೊರತೆ ಆಗದಂತೆ ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ಬೆನ್ನಲ್ಲಿಯೇ, ಖಾಸಗಿ ಕಂಪನಿಯೊಂದು ಎಲ್ಲಿಗೆ ಬೇಕಾದರೂ ಸಾಗಿಸಿ ಬಳಸಬಹುದಾದ ’ಮಾಡ್ಯೂಲರ್ ಐಸಿಯು’ಗಳನ್ನು ಅಭಿವೃದ್ಧಿಪಡಿಸಿದೆ. ಇವಗಳನ್ನು ’ಮೊಬೈಲ್ ಐಸಿಯು’ಗಳೆಂದೂ ಕರೆಯಬಹುದಾಗಿದೆ.

ಸಾಮಾನ್ಯವಾಗಿ ಹಡಗುಗಳಲ್ಲಿ ಸರಕು ಸಾಗಣೆಗೆ ಬಳಸಲಾಗುವ ಬೃಹತ್ ಗಾತ್ರದ ಕಂಟೈನರುಗಳಲ್ಲಿ ಈ ಐಸಿಯುಗಳನ್ನು ಅಭಿವೃದ್ಧಿಪಡಿಸಿದ್ದು, ಬೆಂಗಳೂರಿನಲ್ಲಿ ಶನಿವಾರ, ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಇವುಗಳನ್ನು ಪರಿಶೀಲನೆ ಮಾಡಿದರು.

ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ರಿನ್ಯಾಕ್ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಕಂಪನಿಯ ತಜ್ಞರಿಂದ ಉಪ ಮುಖ್ಯಮಂತ್ರಿ ಮಾಹಿತಿ ಪಡೆದರಲ್ಲದೆ, ಕಂಟೈನರುಗಳಲ್ಲಿನ ಐಸಿಯುಗಳನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದರು.

ವಿನೂತನ ಪ್ರಯೋಗ ಎಂದ ಡಿಸಿಎಂ

ಸರಕು ಸಾಗಣೆ ಮಾಡುವ ಕಂಟೈನರುಗಳಲ್ಲಿ ಐಸಿಯು ಮಾಡಬಹುದು ಎಂಬ ಆಲೋಚನೆಯೇ ವಿನೂತನವಾಗಿದೆ. ದೇಶದಲ್ಲೇ ಮೊತ್ತಮೊದಲ ಬಾರಿಗೆ ಇಂಥ ತುರ್ತು ಚಿಕಿತ್ಸಾ ಘಟಕಗಳನ್ನು ನಮ್ಮ ರಾಜ್ಯದಲ್ಲಿ ಸಿದ್ಧಪಡಿಸಲಾಗಿದೆ. ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿವೆ ಎಂದು ಡಿಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಸಿಜೆಗೆ 10 ಕಂಟೈನರ್
ಪ್ರಾಯೋಗಿಕವಾಗಿ ಮೊದಲು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ಹತ್ತು ಕಂಟೈನರುಗಳನ್ನು ಒದಗಿಸಲಾಗುವುದು. ಅಲ್ಲಿನ ವೈದ್ಯರೇ ಇವುಗಳಲ್ಲಿ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆ ನೀಡುವರು. ಪ್ರತಿ ಕಂಟೈನರಲ್ಲಿ 5 ಹಾಸಿಗೆಗಳು ಇರುತ್ತವೆ. ರಿನ್ಯಾಕ್ ಕಂಪನಿ ತಮ್ಮದೇ ವೆಚ್ಚದಲ್ಲಿ ಎಕ್ಸ್’ಕ್ಲೂಸೀವ್ ಆಗಿ ನಮಗಾಗಿಯೇ ಇವುಗಳನ್ನು ತಯಾರಿಸಿ ಕೊಟ್ಟಿದೆ. ಕೋವಿಡ್ ನಂತರವೂ ಇವುಗಳನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಬಹುದು. ತುರ್ತು ಸಂದರ್ಭಗಳು, ಅದರಲ್ಲೂ ನೈಸರ್ಗಿಕ ವಿಕೋಪದಂಥ ದುರಂತಗಳು ಎದುರಾದಾಗ ಇಂಥ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಕೇವಲ 10ರಿಂದ 15 ದಿನಗಳಲ್ಲಿ ಇಷ್ಟು ಬೆಡ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಇದರಲ್ಲಿ ಏನೇನಿರುತ್ತದೆ?
ಜಾಗತಿಕ ಗುಣಮಟ್ಟವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿದೆ. ಆಮ್ಲಜನಕ ವ್ಯವಸ್ಥೆ ಇರುತ್ತದೆ. ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ಕ್ಯಾಮರಾ ಕೂಡ ಇದ್ದು, ಆನ್’ಲೈನ್ ಚಿಕಿತ್ಸೆ ನೀಡಲು ಬೇಕಾದ ಎಲ್ಲ ಪರಿಕರಗಳನ್ನು ಅಳವಡಿಸಲಾಗಿದೆ. ಪ್ರತಿ ಕಂಟೈನರ್’ಗೆ 5 ಬೆಡ್ ಇದ್ದು, ಅದಕ್ಕೆ ಇನ್ನೊಂದು ಕಂಟೈನರ್ ಸೇರಿದರೆ 10 ಬೆಡ್’ಗಳಾಗುತ್ತವೆ. ಆಗ ಅದನ್ನು ಪ್ರತ್ಯೇಕ ನರ್ಸಿಂಗ್ ಹಾಗೂ ಮಾನಿಟರಿಂಗ್ ಸ್ಟೇಷನ್ ಎಂದು ಪರಿಗಣಿಸಿ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ. ಅದು ಪ್ರತ್ಯೇಕವಾಗಿರುತ್ತದೆ. ಎಲ್ಲಿಗೆ ಬೇಕಾದರೂ ಈ ಐಸಿಯುಗಳನ್ನು ಸುಲಭವಾಗಿ ಸಾಗಿಸಿ ಇಡಬಹುದು. ಆಯಾ ಆಸ್ಪತ್ರೆಗಳ ವೈದ್ಯರೇ ಇವುಗಳಲ್ಲಿ ದಾಖಲಾಗಿರುವ ರೋಗಿಗಳಿಗೂ ಚಿಕಿತ್ಸೆ ನೀಡಬಹುದು ಎಂದು ರಿನ್ಯಾಕ್ ಕಂಪನಿ ಅಧಿಕಾರಿಗಳು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X