Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್ ಚಿಕಿತ್ಸೆ: ಖಾಸಗಿ ವೈದ್ಯಕೀಯ...

ಕೋವಿಡ್ ಚಿಕಿತ್ಸೆ: ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ.50 ಹಾಸಿಗೆ ಒದಗಿಸಲು ಸಿಎಂ ಬಿಎಸ್‌ವೈ ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 July 2020 6:43 PM IST
share
ಕೋವಿಡ್ ಚಿಕಿತ್ಸೆ: ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ.50 ಹಾಸಿಗೆ ಒದಗಿಸಲು ಸಿಎಂ ಬಿಎಸ್‌ವೈ ಸೂಚನೆ

ಬೆಂಗಳೂರು, ಜು.18: ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳು ಇನ್ನೂ ಹೆಚ್ಚಿನ ಸಹಕಾರ ನೀಡುವ ಅಗತ್ಯವಿದೆ. ಕೆಲವೆಡೆ ಕೋವಿಡ್ ಹಾಗೂ ಕೋವಿಡ್ ಅಲ್ಲದ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಹಾಗೆಯೇ ಕೋವಿಡ್‍ಗೆ ಚಿಕಿತ್ಸೆ ಅಗತ್ಯವಿರುವವರು ಹಾಗೂ ಇತರ ಸಮಸ್ಯೆಗಳಿಂದ ಬಳಲುತ್ತಿರುವವರು ಸೂಕ್ತ ಚಿಕಿತ್ಸೆ ದೊರೆಯದೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವ ಹಾಗೂ ಹಲವರು ಪ್ರಾಣ ತ್ಯಾಗ ಮಾಡಿದ ದಾರುಣ ಘಟನೆಗಳ ಕುರಿತು ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.

ಕೋವಿಡ್ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿಯಾಗಿತ್ತು. ಮುಂದೆಯೂ ಮಾದರಿಯಾಗಿರಬೇಕು. ಹಿಂದಿನ ಸಭೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2 ಸಾವಿರ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 4,500 ಹಾಸಿಗೆಗಳು ದೊರೆಯುವುದು ಎಂದು ಒಮ್ಮತದ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಖಾಸಗಿ ವೈದ್ಯಕೀಯ ಕಾಲೇಜುಗಳು ಅಷ್ಟು ಸಂಖ್ಯೆಯ ಹಾಸಿಗೆಗಳನ್ನು ಒದಗಿಸದೆ ಇರುವುದು ಹಾಗೂ ಇನ್ನೂ ಅನೇಕ ಸಮಸ್ಯೆಗಳು ನಮ್ಮ ಸಚಿವರು ಕೆಲವು ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿದಾಗ ತಿಳಿದುಬಂದಿದೆ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಈ ತುರ್ತು ಸಂದರ್ಭದಲ್ಲಿ ಮಾನವೀಯತೆಯಿಂದ ಕೋವಿಡ್ ಚಿಕಿತ್ಸೆಗೆ ಸಹಕರಿಸಬೇಕು. ಕೋವಿಡ್ ಇಲ್ಲದ ಇತರ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸದೆ, ರಾಜ್ಯದ ವೈದ್ಯಕೀಯ ವ್ಯವಸ್ಥೆಯಲ್ಲಿ ಸಮತೋಲನ ಇರುವಂತೆ ಎಚ್ಚರ ವಹಿಸಬೇಕು ಎಂದು ಅವರು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಸಲಹೆ ಮಾಡಿದರು.

ಇದಲ್ಲದೆ, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ.50 ರಷ್ಟು ಹಾಸಿಗೆಗಳನ್ನು ನಾಳೆಯಿಂದಲೆ(ರವಿವಾರ) ಕೋವಿಡ್ ಚಿಕಿತ್ಸೆಗೆ ಒದಗಿಸುವಂತೆ ಮುಖ್ಯಮಂತ್ರಿ ತಿಳಿಸಿದರು.

ವೈದ್ಯರು, ನರ್ಸ್ ಗಳ ಕೊರತೆ ಇದ್ದರೆ, ಸರಕಾರವೆ ನೇಮಕ ಮಾಡುವುದು. ಯಾವುದೇ ರೀತಿಯ ಬೆಂಬಲ ಅಗತ್ಯವಿದ್ದರೂ ಸರಕಾರ ನೀಡಲಿದೆ ಎಂದು ಮುಖ್ಯಮಂತ್ರಿ ನೀಡಿದ ಭರವಸೆಗೆ ಸ್ಪಂದಿಸಿದ, ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ.50 ರಷ್ಟು ಇನ್ನು ಕೆಲ ಕಾಲೇಜುಗಳು ಶೇ.80 ರಷ್ಟು ಹಾಸಿಗೆಗಳನ್ನು ನೀಡುವುದಾಗಿ ಹಾಗೂ ಲಭ್ಯವಿರುವ ವೆಂಟಿಲೇಟರ್ ಗಳನ್ನು ಒದಗಿಸುವುದಾಗಿ ತಿಳಿಸಿದರು.

ಕಾಲೇಜುಗಳ ಹಾಸಿಗೆಗಳ ಲಭ್ಯತೆ ಮೇಲೆ ನಿಗಾ ಇಡಲು ಅಧಿಕಾರಿಗಳನ್ನು ಈಗಾಗಲೆ ನೇಮಕ ಮಾಡಲಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ, ಇಂದಿನ ಸಭೆಗೆ ಹಾಜರಾಗದ ವೈದೇಹಿ ವೈದ್ಯಕೀಯ ಕಾಲೇಜಿಗೆ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಡಾ.ಕೆ.ಸುಧಾಕರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಚಿವರಾದ ಆರ್.ಅಶೋಕ್, ಬಿ.ಶ್ರೀರಾಮುಲು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X