ಕೋವಿಡ್-19: ಸ್ವಯಂಸೇವೆಗೆ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನೀಷಿಯನ್ಸ್ ನೊಂದಾಯಿಸಿ; ಉಡುಪಿ ಡಿಸಿ
ಉಡುಪಿ, ಜು.18: ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ರೋಗಿಗಳ ಚಿಕಿತ್ಸೆಗೆ ಹಾಲಿ ಇರುವ ವ್ಯವಸ್ಥೆ ಯನ್ನು ಉನ್ನತೀಕರಿಸಬೇಕಾದ ಅಗತ್ಯವಿದೆ. ಇದಕ್ಕಾಗಿ ವೈದ್ಯರು ಹಾಗೂ ಸ್ಟಾಫ್ ನರ್ಸ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಅಗತ್ಯವಿರುತ್ತದೆ.
ಅಲ್ಲದೇ ಲ್ಯಾಬ್‌ಗಳಲ್ಲಿ ಲ್ಯಾಬ್ ಟೆಕ್ನೀಷಿಯನ್‌ಗಳ ಅಗತ್ಯವೂ ಬಹಳಷ್ಟಿದೆ. ಆದ್ದರಿಂದ ಸ್ವಯಂಪ್ರೇರಿತರಾಗಿ ಕಾರ್ಯ ನಿರ್ವಹಿಸಲು ಇಚ್ಚಿಸುವ ವೈದ್ಯರು, ನರ್ಸ್‌ಗಳು ಹಾಗೂ ಲ್ಯಾಬ್ ಟೆಕ್ನೀಷಿಯನ್‌ಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉಡುಪಿ ಇವರನ್ನು ಸಂಪರ್ಕಿಸುವಂತೆ ಕೇಳಿಕೊಳ್ಳಲಾಗಿದೆ.
ಜಿಲ್ಲೆಯ ಸರಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ವೆಂಟಿಲೇಟರ್‌ಗಳು ಹಾಗೂ ಹೈಪ್ರೆಷರ್ ಆಮ್ಲಜನಕ ವ್ಯವಸ್ಥೆ ತೀರಾ ಅಗತ್ಯವಿರುವುದರಿಂದ ವೆಂಟಿಲೇಟರ್ ಹಾಗೂ ಹೈಪ್ರೆಷರ್ ಆಮ್ಲಜನಕ ಸಿಸ್ಟಮ್‌ಗಳನ್ನು ನೀಡಲು ಇಚ್ಚಿಸುವ ದಾನಿಗಳು /ಸಂಘ ಸಂಸ್ಥೆಗಳು ಜಿಲ್ಲಾಧಿಕಾರಿ ಕಚೇರಿಗೆ ಅವುಗಳನ್ನು ಹಸ್ತಾಂತರಿಸಿ ಕೋವಿಡ್-19 ನಿಯಂತ್ರಣದಲ್ಲಿ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.





