Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎನ್‌ಐಟಿಕೆ: 3ಡಿ ಮುದ್ರಣ ಕ್ಷೇತ್ರದಲ್ಲಿ...

ಎನ್‌ಐಟಿಕೆ: 3ಡಿ ಮುದ್ರಣ ಕ್ಷೇತ್ರದಲ್ಲಿ ಇಂಟರ್ನ್‌ಶಿಪ್‌ಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ18 July 2020 5:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಮಂಗಳೂರು, ಜು.18: ಎನ್‌ಐಆರ್‌ಎಫ್ ಶ್ರೇಯಾಂಕದಲ್ಲಿ ದೇಶದಲ್ಲಿ 13ನೇ ಸ್ಥಾನ ಹೊಂದಿರುವ ಕರ್ನಾಟಕದ ಪ್ರಮುಖ ತಾಂತ್ರಿಕ ಸಂಸ್ಥೆಯಾದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿಕೆ)ಯು ಹಗುರವಾದ ಸಂಯೋಜನೆಗಳ 3ಡಿ ಮುದ್ರಣ ಕ್ಷೇತ್ರದಲ್ಲಿ ಪರಿಣತಿಯನ್ನು ಸಾಬೀತುಪಡಿಸಿದೆ.

ನ್ಯೂಯಾರ್ಕ್ ವಿಶ್ವವಿದ್ಯಾಲಯ (ಎನ್‌ವೈಯು) ದೊಂದಿಗೆ ಎನ್‌ಐಟಿಕೆ ಸಹಯೋಗದ ಯೋಜನೆಯು ಯುನೈಟೆಡ್ ಸ್ಟೇಟ್ಸ್‌ನ ನ್ಯಾಷನಲ್ ಸೈನ್ಸ್ ಫೌಂಡೇಶನ್ (ಎನ್‌ಎಸ್‌ಎಫ್) ನಿಂದ ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಸಂಶೋಧನಾ ಅನುಭವ (ಐಆರ್‌ಇಎಸ್) ಅನುದಾನ ಪಡೆದಿದೆ.

ಈ ಮೂಲಕ ಪ್ರತಿ ಬೇಸಿಗೆ ಅವಧಿಯಲ್ಲಿ ಇಂಟರ್ನ್‌ಶಿಪ್‌ಗೆ ಎನ್‌ಐಟಿಕೆಯಲ್ಲಿ ಆರು ಯುಎಸ್‌ಎ ವಿದ್ಯಾರ್ಥಿಗಳಿಗೆ ಆತಿಥ್ಯ ವಹಿಸಲು ಮೂರು ವರ್ಷಗಳ ಅವಧಿಗೆ ಎರಡು ಕೋಟಿ ರೂ. ಅನುದಾನ ನೀಡಲಾಗುತ್ತದೆ.

ಸಾಮಾಜಿಕ ಅಗತ್ಯಗಳಿಗಾಗಿ ಕಾರ್ಯಸಾಧ್ಯವಾದ ಪರಿಹಾರಗಳನ್ನು ಅಭಿವೃದ್ಧಿಪಡಿಸುವತ್ತ ಗಮನಹರಿಸಿ 3ಡಿ ಮುದ್ರಣದಲ್ಲಿ ಹೊಸ ಮಾರ್ಗಗಳನ್ನು ಅನ್ವೇಷಿಸಲು ಎರಡೂ ದೇಶಗಳ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಡಾ.ಮೃತ್ಯುಂಜಯ ದೊಡ್ಡಮನಿ (ಎನ್‌ಐಟಿಕೆ) ಮತ್ತು ಪ್ರೊ. ನಿಖಿಲ್ ಗುಪ್ತಾ (ಎನ್‌ವೈಯು) ಆಯಾ ದೇಶಗಳಲ್ಲಿ ಈ ಕಾರ್ಯಕ್ರಮವನ್ನು ನಿರ್ದೇಶಿಸಲಿದ್ದಾರೆ. 3ಡಿ ಮುದ್ರಣ ಸಂಶೋಧನೆಯನ್ನು ಪ್ರಯೋಗಾಲಯದಿಂದ ಕೈಗಾರಿಕಾ-ಪ್ರಮಾಣದ ಸಾಕ್ಷಾತ್ಕಾರಕ್ಕೆ ತೆಗೆದುಕೊಳ್ಳುವ ಸಮಗ್ರ ಅನುಭವವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಉದ್ದೇಶ ಈ ಯೋಜನೆಯದ್ದಾಗಿದೆ.

ಈ ಸಹಕಾರಿ ಯೋಜನೆಯು ಎನ್‌ಐಟಿಕೆ; ಎನ್‌ವೈಯು, ನ್ಯೂಯಾರ್ಕ್, ಯುಎಸ್‌ಎ; ನ್ಯೂಯಾರ್ಕ್ ಸಿಟಿ ಕಾಲೇಜ್ ಆಫ್ ಟೆಕ್ನಾಲಜಿ (ಸಿಟಿಟೆಕ್), ಯುಎಸ್‌ಎ; ಐಐಟಿ ಕಾನ್ಪುರ್ (ಐಐಟಿಕೆ) ಮತ್ತು ಆಹಾ 3ಡಿ ಇನ್ನೋವೇಶನ್ಸ್ ಪ್ರೈ.ಲಿ., ಜೈಪುರ, ಇವುಗಳನ್ನು ಒಳಗೊಂಡಿದೆ.
ಡಾ.ಗಫರ್ ಗೈಲಾನಿ (ಸಿಟಿಟೆಕ್), ಡಾ.ಜಯರಾಜ್ ಪಿಚೈಮಾನಿ (ಎನ್‌ಐಟಿಕೆ), ಪ್ರೊ. ಆನಂದನ್ ಶ್ರೀನಿವಾಸನ್ (ಎನ್‌ಐಟಿಕೆ), ಪ್ರೊ. ಶಕ್ತಿ ಗುಪ್ತಾ (ಐಐಟಿಕೆ) ಮತ್ತು ಆಕಾಶ್ ಈ 3ಡಿ ಮುದ್ರಣ ಯೋಜನೆಯ ತಂಡದ ಇತರ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. 3ಡಿ ಮುದ್ರಣವು ಉತ್ಪಾದನಾ ಸನ್ನಿವೇಶವನ್ನು ಗಣನೀಯವಾಗಿ ವೃದ್ಧಿಪಡಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಎಂದು ಎನ್‌ಐಟಿಕೆ ನಿರ್ದೇಶಕ ಪ್ರೊ.ಕೆ. ಉಮಾಮಹೇಶ್ವರ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X