ಭಟ್ಕಳ: ಶನಿವಾರ 9 ಮಂದಿಗೆ ಕೊರೋನ ಸೋಂಕು ದೃಢ
ಭಟ್ಕಳ: ಭಟ್ಕಳ ತಾಲೂಕಿನಲ್ಲಿಂದು 78 ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 63 ಜನರ ವರದಿಯು ನೆಗೆಟಿವ್ ಮತ್ತು ಕೇವಲ 9 ಜನರ ವರದಿ ಕೋವಿಡ್-19 ಪಾಸಿಟಿವ್ ಆಗಿದೆ ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತ ಭರತ್ ಎಸ್. ತಿಳಿಸಿದ್ದಾರೆ.
ಭಟ್ಕಳದ ಕೋವಿಡ್ ಕೇರ್ ಸೆಂಟರ್ ನಲ್ಲಿ ದಾಖಲಾಗಿದ್ದ 64 ಸೋಂಕಿತರು ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 14 ಮಂದಿ ಕೋವಿಡ್ ಸೋಂಕಿತರು ಸೇರಿದಂತೆ ಒಟ್ಟು 78 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
9 ಮಂದಿಗೆ ಹೊಸದಾಗಿ ಸೋಂಕು ತಗುಲಿದ್ದು, ಗ್ರಾಮೀಣ ಪೊಲೀಸ್ ಠಾಣೆಯ 39 ವರ್ಷ ವಯಸ್ಸಿನ ಪೊಲೀಸ್ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮೀಣ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
Next Story





