Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ವಿಶ್ವಸಂಸ್ಥೆಯಲ್ಲಿ ‘ಜಮ್ಮುಕಾಶ್ಮೀರ ’...

​ವಿಶ್ವಸಂಸ್ಥೆಯಲ್ಲಿ ‘ಜಮ್ಮುಕಾಶ್ಮೀರ ’ ಕೆದಕಲು ಪಾಕ್ ವಿಫಲ ಯತ್ನ

ಭದ್ರತಾ ಮಂಡಳಿಯ ವಿಸ್ತರಣೆಗೂ ವಿರೋಧ

ವಾರ್ತಾಭಾರತಿವಾರ್ತಾಭಾರತಿ18 July 2020 11:36 PM IST
share
​ವಿಶ್ವಸಂಸ್ಥೆಯಲ್ಲಿ ‘ಜಮ್ಮುಕಾಶ್ಮೀರ ’ ಕೆದಕಲು ಪಾಕ್ ವಿಫಲ ಯತ್ನ

ವಿಶ್ವಸಂಸ್ಥೆ, ಜು.15: ಕೋವಿಡ್-19ನಂತಹ ಜಾಗತಿಕ ಬಿಕ್ಕಟ್ಟಿಗೆ ಪರಿಣಾಮಕಾರಿಯಾದ ಪ್ರತಿಕ್ರಿಯಾತ್ಮಕ ಕ್ರಮಗಳನ್ನು ರೂಪಿಸಲು ಶುಕ್ರವಾರ ಆಯೋಜಿಸಲಾಗಿದ್ದ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನವು ಜಮ್ಮುಕಾಶ್ಮೀರ ವಿವಾದವನ್ನು ಕೆದಕಲು ವಿಫಲ ಯತ್ನ ನಡೆಸಿದೆ ಮತ್ತು ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವದ ರಾಷ್ಟ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಸ್ತಾವಕ್ಕೂ ವಿರೋಧ ವ್ಯಕ್ತಪಡಿಸಿದೆ.

ಕೋವಿಡ್ 19 ಆನಂತರದ ಬಹುಪಕ್ಷೀಯವಾದ: ‘75ನೇ ವರ್ಷಾಚರಣೆ ಸಂದರ್ಭದಲ್ಲಿ ಯಾವ ರೀತಿಯ ವಿಶ್ವಸಂಸ್ಥೆಯ ಅಗತ್ಯ ನಮಗಿದೆ’ ಎಂಬ ಶೀರ್ಷಿಕೆಯಡಿ ಉನ್ನತ ಮಟ್ಟದ ವಿಚಾರ ಸಂಕಿರಣವನ್ನು ವಿಶ್ವಸಂಸ್ಥೆ ಏರ್ಪಡಿಸಿತ್ತು.
 ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಶಾ ಮಹಮೂದ್ ಖುರೇಷಿ ಅವರು ಸಮಾವೇಶದಲ್ಲಿ ಮಾತನಾಡಿ, ‘‘ ಜಮ್ಮುಕಾಶ್ಮೀರದ ಜನತೆಯ ಮೇಲೆ ಎಸಗಲಾಗುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯಗಳ ಬಗ್ಗೆ ಪಾಕಿಸ್ತಾನವು ಕಳವಳಗೊಂಡಿದೆ ’’ಎಂದರು.
  ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರಗಳಿಗೆ ಭಾರತದ ಸೇರ್ಪಡೆಯ ಪ್ರಸ್ತಾವವನ್ನು ಕೂಡಾ ಖುರೇಷಿ, ಪರೋಕ್ಷವಾಗಿ ವಿರೋಧಿಸಿದರು. ಅಧಿಕಾರ ಹಾಗೂ ಸವಲತ್ತುಗಳನ್ನು ಬಯಸುವವರ ಸಂಕುಚಿತ ಆಕಾಂಕ್ಷ್ಷೆಗಳನ್ನು ಈಡೇರಿಸುವುದಕ್ಕಾಗಿ ಭದ್ರತಾ ಮಂಡಳಿಯನ್ನು ವಿಸ್ತರಿಸುವುದರಿಂದ ವಿಶ್ವಸಂಸ್ಥೆ ಬಲಯುತವಾಗಲಾರದು ಬದಲಾಗಿ ನಿಷ್ಕ್ರಿಯವಾಗಲಿದೆ ಎಂದವರು ಅಭಿಪ್ರಾಯಿಸಿದರು.

  ವಿಶ್ವಸಂಸ್ಥೆ ನೇತೃತದ ಜಾಗತಿಕ ಸುವ್ಯವಸ್ಥೆಯಲ್ಲಿ ಸಣ್ಣ ಹಾಗೂ ಮಧ್ಯಮ ಗಾತ್ರದ ದೇಶಗಳಿಗೆ ಅತಿ ಹೆಚ್ಚಿನ ಭಾದ್ಯತೆಯಿದ್ದು, ಅವು ಅಂತಾರಾಷ್ಟ್ರೀಯ ಶಾಂತಿ ಹಾಗೂ ಸುಭದ್ರತೆಯನ್ನು ಉತ್ತೇಜಿಸಲು ಪರಿಣಾಮಕಾರಿಯಾಗಿ ನೆರವಾಗಬಲ್ಲವು ಎಂದು ಖುರೇಷಿ ಪ್ರತಿಪಾದಿಸಿದರು.
ಭದ್ರತಾ ಮಂಡಳಿಯನ್ನು ಸುಧಾರಣೆಗೊಳಿಸಬೇಕಿದ್ದು, ಖಾಯಂ ಸದಸ್ಯ ರಾಷ್ಟ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಬಲವಾಗಿ ಆಗ್ರಹಿಸುತ್ತಿರುವ ರಾಷ್ಟ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯನಾಗಲು ತಾನು ಸೂಕ್ತವಾದ ಅರ್ಹತೆಯನ್ನು ಹೊಂದಿರುವುದಾಗಿ ಭಾರತದ ವಾದವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X