ಚಿಕ್ಕಮಗಳೂರು: ಕೊರೋನ ಸೋಂಕಿಗೆ 8ನೇ ಬಲಿ

ಚಿಕ್ಕಮಗಳೂರು, ಜು.19: ಜಿಲ್ಲೆಯಲ್ಲಿ ಕೊರೋನ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ಸೋಂಕಿಗೆ ಎಂಟನೇ ಬಲಿಯಾಗಿದೆ.
ಕೋವಿಡ್-19 ಸೋಂಕಿತ ಕೊಪ್ಪ ತಾಲೂಕಿನ 70 ವರ್ಷದ ಹಿರಿಯ ಮಹಿಳೆಯೊಬ್ಬರು ಶನಿವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗಲಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿರಿಯ ಮಹಿಳೆಯು ಮಧುಮೇಹ, ಬಿಪಿ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದೆ.
ಈ ವೃದ್ಧೆಯ ಪುತ್ರಿ ಹಾಗೂ ಅಳಿಯ ಕೊರೋನ ಸೋಂಕಿಗೆ ಪಾಸಿಟಿವ್ ಆಗಿದ್ದಾರೆ.
Next Story






