Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ನಿಯಂತ್ರಣದಲ್ಲಿ ವೈಫಲ್ಯಕ್ಕೆ...

ಕೊರೋನ ನಿಯಂತ್ರಣದಲ್ಲಿ ವೈಫಲ್ಯಕ್ಕೆ ಸರಕಾರದ ಏಕಪಕ್ಷೀಯ, ಅಪ್ರಬುದ್ದ ಧೋರಣೆಯೇ ಕಾರಣ: ವೆಲ್ಪೇರ್ ಪಾರ್ಟಿ

ವಾರ್ತಾಭಾರತಿವಾರ್ತಾಭಾರತಿ19 July 2020 11:04 AM IST
share

ಮಂಗಳೂರು, ಜು.19: ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಸಾಕಷ್ಟು ಮುಂಜಾಗ್ರತೆಗಳನ್ನು, ಸಮರ್ಪಕವಾಗಿ ಕೈಗೊಳ್ಳದ ಕಾರಣದಿಂದಲೇ ಇಂದು ಇದು ಕೈಮೀರಿ ಹೋಗುವ ಹಂತಕ್ಕೆ ತಲುಪಿದೆ ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕ ತೀವ್ರ ಕಳವಳ ವ್ಯಕ್ತಪಡಿಸಿದೆ.

ಕೊರೋನ ವೈರಸ್ ಜಿಲ್ಲೆಯಲ್ಲಿ ವ್ಯಾಪಿಸುವ ಮೊದಲೇ ಅಂದರೆ ಪ್ರಥಮ ಲಾಕ್ ಡೌನ್ ಆರಂಭದಲ್ಲೇ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಕೆಲವು ನಿರ್ದೇಶನಗಳನ್ನು  ನೀಡಿತ್ತು. ಆದರೆ ಅವೆಲ್ಲವನ್ನೂ ಅಂದು ಜಿಲ್ಲಾಡಳಿತ ಸಂಪೂರ್ಣ ನಿರ್ಲಕ್ಷಿಸಿತು ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ದ. ಕ. ಜಿಲ್ಲಾ ಅಧ್ಯಕ್ಷ ಸುಲೈಮಾನ್ ಕಲ್ಲರ್ಪೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದ. ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಸಂಬಂಧಿಸಿ ಬಂಟ್ವಾಳದ ಪ್ರಥಮ ಪ್ರಕರಣ ವರದಿಯಾದಗಲೇ, ಜಿಲ್ಲಾಡಳಿತ ತುರ್ತಾಗಿ ಪ್ರತಿ ತಾಲೂಕು ಮಟ್ಟದಲ್ಲಿ ಕೊರೋನ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಿ, ಕೇವಲ ರೋಗ ಲಕ್ಷಣಗಳನ್ನು ಹೊಂದಿರುವ ಜನಗಳಿಗೆ ಮಾತ್ರವಲ್ಲದೆ ಅವರ ಸಂಪರ್ಕವನ್ನು ಹೊಂದಿರುವ ಸರ್ವರಿಗೂ ಉಚಿತ ಪರೀಕ್ಷಾ ಸೌಲಭ್ಯವನ್ನು ಕಲ್ಪಿಸುವಂತೆ ವೆಲ್ಪೇರ್ ಪಾರ್ಟಿ ಜಿಲ್ಲಾಡಳಿತವನ್ನು ಒತ್ತಾಯಿಸಿತ್ತು. ಆದರೆ ಇದನ್ನು ವಿಳಂಬ ನೀತಿ ಅನುಸರಿಸುವ ಮೂಲಕ ಜಿಲ್ಲಾಡಳಿತ ನಿಷ್ಕ್ರಿಯ ಸ್ಪಂದನೆ ವ್ಯಕ್ತಪಡಿಸಿತು. ಆದ್ದರಿಂದ ಇನ್ನಾದರೂ ಸರ್ಕಾರ ತಕ್ಷಣ ಗಮನಹರಿಸಿ ಪ್ರಸಕ್ತವಾಗಿ ಕೊರೋನ ಕ್ಷಿಪ್ರಗತಿಯಲ್ಲಿನ  ಬೆಳವಣಿಗೆಗೆ ತಡೆಯಲ್ಪಡುವ  ಯೋಜನೆಯ ಬಗ್ಗೆ ಹೆಚ್ಚು ಮುತುವರ್ಜಿವಹಿಸಿ ಇದು ಪಸರಿಸುವ ವೇಗದ ನಿಯಂತ್ರಣಕ್ಕೆ ಸಜ್ಜಾಗಬೇಕು ಮತ್ತು ತನ್ಮೂಲಕ ಸಮೂಹ   ಹರಡುವಿಕೆಗೆ ತಲುಪದಂತೆ ಜಾಗೃತರಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 ಕೊರೋನ ಸೋಂಕಿತರನ್ನು  ಖಾಸಗಿ ಆಸ್ಪತ್ರೆಗಳು ಮಾಡುವ ಲೂಟಿಯ ಕಡಿವಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಕಟಿಬದ್ದತೆಯನ್ನು ತೋರಬೇಕು ಮತ್ತು  ಈಗಾಗಲೇ ಸರಕಾರ ನೀಡಿರುವ ಸುತ್ತೋಲೆಯಂತೆ, ಕೊರೋನ ಪೀಡಿತರಿಗೆ ಉಚಿತ ಸೇವೆಯನ್ನು  ಒದಗಿಸುವ ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಜನರಿಗೆ ಸರಿಯಾದ ರೀತಿಯಲ್ಲಿ ಉಚಿತ ಶುಶ್ರೂಷೆ ದೊರೆಯುತ್ತಿದೆಯೇ ಎಂಬುವುದನ್ನು ಖಾತ್ರಿಪಡಿಸಿಕೊಳ್ಳಲು ಅಧಿಕಾರಿಗಳನ್ನು ನೇಮಿಸಬೇಕು ಎಂದು ಸುಲೈಮಾನ್ ಕಲ್ಲರ್ಪೆ ಪ್ರಕಟನೆಯ ಮೂಲಕ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X