ಬಿಬಿಎಂಪಿ ಸದಸ್ಯನಿಗೆ ಕೊರೋನ ದೃಢ

ಬೆಂಗಳೂರು, ಜು.19: ಬಿಬಿಎಂಪಿ ಸದಸ್ಯ ಆರ್ಯ ಶ್ರೀನಿವಾಸ್ ಅವರಿಗೆ ಕೊರೋನ ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ.
ಸೋಂಕು ಹೇಗೆ ಬಂದಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ. ಎಲ್ಲರೂ ಎಚ್ಚರಿಕೆ ವಹಿಸಿ ಮನೆಯಲ್ಲಿಯೇ ಇರುವಂತೆ ಅವರು ಎಚ್ಚರಿಕೆ ನೀಡಿದ್ದಾರೆ.
ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸಂಪರ್ಕಿದಲ್ಲಿದ್ದ ಹಲವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
Next Story





