Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರಿನಲ್ಲಿ ಕೊರೋನ ನಾಗಾಲೋಟ:...

ಚಿಕ್ಕಮಗಳೂರಿನಲ್ಲಿ ಕೊರೋನ ನಾಗಾಲೋಟ: ಒಂದೇ ದಿನ 41 ಪಾಸಿಟಿವ್, ಇಬ್ಬರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ19 July 2020 7:17 PM IST
share
ಚಿಕ್ಕಮಗಳೂರಿನಲ್ಲಿ ಕೊರೋನ ನಾಗಾಲೋಟ: ಒಂದೇ ದಿನ 41 ಪಾಸಿಟಿವ್, ಇಬ್ಬರು ಮೃತ್ಯು

ಚಿಕ್ಕಮಗಳೂರು, ಜು.19: ಕಾಫಿನಾಡಿನಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ರವಿವಾರದ ಲಾಕ್‍ಡೌನ್ ಮಧ್ಯೆ ಜಿಲ್ಲೆಯಲ್ಲಿ ಕೊರೋನ ಸ್ಪೋಟಗೊಂಡಿದ್ದು, ಒಂದೇ ದಿನ 41 ಪಾಸಿಟಿವ್ ಪ್ರಕರಣಗಳು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿರುವುದಲ್ಲದೇ ಶನಿವಾರ ರಾತ್ರಿ ಹಾಗೂ ರವಿವಾರ ಮಧ್ಯಾಹ್ನದ ನಡುವೆ 24 ಗಂಟೆಯೊಳಗೆ ಇಬ್ಬರು ವೃದ್ಧರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೋನ ಸೋಂಕು ಇತ್ತೀಚೆಗೆ ವ್ಯಾಪಕವಾಗುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ 100ಕ್ಕೂ ಹೆಚ್ಚು ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿದೆ. ಸೋಂಕಿತರ ಸಂಖ್ಯೆ 300ರ ಸನಿಹಕ್ಕೆ ತಲುಪಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದಲ್ಲದೇ ಮೃತರ ಸಂಖ್ಯೆಯೂ ಹೆಚ್ಚುತ್ತಿರುವುದು ಜಿಲ್ಲಾಡಳಿತ ಸೇರಿದಂತೆ ಜಿಲ್ಲೆಯ ಜನರಲ್ಲಿ ಭೀತಿ ಉಂಟು ಮಾಡಿದೆ.

ರವಿವಾರ ಜಿಲ್ಲೆಯಲ್ಲಿ ವರದಿಯಾಗಿರುವ 41 ಪಾಸಿಟಿವ್ ಪ್ರಕರಣಗಳ ಪೈಕಿ ಚಿಕ್ಕಮಗಳೂರು ತಾಲೂಕೊಂದರಲ್ಲೇ 18 ಪ್ರಕರಣಗಳು ಕಂಡು ಬಂದಿದ್ದರೆ, ಶೃಂಗೇರಿ ತಾಲೂಕಿನಲ್ಲಿ ಒಂದೇ ದಿನ 11 ಪ್ರಕರಣಗಳು ದಾಖಲಾಗಿವೆ. ಉಳಿದಂತೆ ತರೀಕೆರೆ, ಕೊಪ್ಪ, ಕಡೂರು, ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯಲ್ಲಿ ತಲಾ 3 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಚಿಕ್ಕಮಗಳೂರು ನಗರದ 18 ಪ್ರಕರಣಗಳಲ್ಲಿ ನಗರದ ಗೌರಿಕಾಲುವೆ, ಪೆನ್ಶನ್ ಮೊಹಲ್ಲಾ, ವಿಜಯಪುರ, ಅಂಜುಮಾನ್ ಸ್ಟ್ರೀಟ್, ಕಲ್ದೊಡ್ಡಿ, ನೆಹರುನಗರದ, ಬಸವನಹಳ್ಳಿ ಬಡಾವಣೆಯಗಳ ವ್ಯಾಪ್ತಿಯಲ್ಲಿ ವರದಿಯಾಗಿವೆ. ರವಿವಾರ ದಾಖಲಾಗಿರುವ ಪಾಸಿಟಿವ್ ಪ್ರಕರಣಗಳ ಪೈಕಿ ಬಹುತೇಕ ಪ್ರಕರಣಗಳು ಹಿಂದಿನ ಸೋಂಕಿತರ ಸಂಪರ್ಕಗಳಾಗಿವೆ.

ಇನ್ನು ಶೃಂಗೇರಿ ತಾಲೂಕಿನ 11 ಪಾಸಿಟಿವ್ ಪ್ರಕರಣಗಳ ಪೈಕಿ 9 ಪ್ರಕರಣಗಳು ಕೆರೆಕಟ್ಟೆ ಗ್ರಾಮದಲ್ಲಿ ವರದಿಯಾಗಿದ್ದು, ಎರಡು ಪ್ರಕರಣಗಳು ಶೃಂಗೇರಿ ಪಟ್ಟಣದ ಶಾರದಾ ನಗರದಲ್ಲಿ ವರದಿಯಾಗಿವೆ. ಕೆರೆಕಟ್ಟೆ ಗ್ರಾಮದ 9 ಪ್ರಕರಣಗಳು ಒಂದೇ ಕುಟುಂಬದವರಲ್ಲಿ ಕಂಡು ಬಂದಿದ್ದು, ಓರ್ವ ಸೋಂಕಿತನಿಂದ ಉಳಿದ ಎಂಟು ಮಂದಿಗೆ ಸೋಂಕು ಹರಡಿದೆ ಎಂದು ತಿಳಿದು ಬಂದಿದೆ.

ಕೊಪ್ಪ ತಾಲೂಕಿನ 3 ಪ್ರಕರಣಗಳ ಪೈಕಿ ಕೊರಾಡಿ ಹಿತ್ಲು, ಮಾರಿತೊಟ್ಟಲು, ಸೋಮಲಾಪುರ ಗ್ರಾಮಗಳಲ್ಲಿ ತಲಾ ಒಂದೊಂದು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ನರಸಿಂಹರಾಜಪುರ ತಾಲೂಕಿನ ಕೆಎಚ್‍ಬಿ ಕಾಲನೊಯೊಂದರಲ್ಲೇ 3 ಪ್ರಕರಣಗಳು ವರದಿಯಾಗಿವೆ. ಕಡೂರು ತಾಲೂಕಿನಲ್ಲಿ ಹಲುವನಹಳ್ಳಿಯಲ್ಲಿ 1 ಹಾಗೂ ಕಡೂರು ಪಟ್ಟಣದಲ್ಲಿ 2 ಪ್ರಕರಣಗಳು ವರದಿಯಾಗಿವೆ. ಇನ್ನು ತರೀಕೆರೆ ತಾಲೂಕಿನ ಹುರುಳಿಹಟ್ಟಿ ಗ್ರಾಮದಲ್ಲಿ 1 ಮತ್ತು ಭೋವಿ ಕಾಲನಿಯಲ್ಲಿ 2 ಪ್ರಕರಣಗಳು ವರದಿಯಾಗಿವೆ.

ರವಿವಾರ ವರದಿಯಾಗಿರುವ 41 ಸೋಂಕಿತರ ಪೈಕಿ 3 ಮಂದಿ ಬಾಲಕರು, ಓರ್ವ ಬಾಲಕಿ ಸೇರಿದ್ದು, 23 ಮಂದಿ ಪುರುಷರು, 14ಮಂದಿ ಮಹಿಳೆಯರು ಸೋಂಕಿಗೆ ತುತ್ತಾಗಿದ್ದಾರೆ. ಸೋಂಕಿತ 41 ಮಂದಿಯನ್ನು ಚಿಕ್ಕಮಗಳೂರು ನಗರದಲ್ಲಿರುವ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಗಳ ಪತ್ತೆಗೆ ಅಧಿಕಾರಿಗಳ ತಂಡವನ್ನು ನೇಮಕ ಮಾಡಲಾಗಿದೆ. ಸೋಂಕಿತರು ಪತ್ತೆಯಾದ ಸ್ಥಳಗಳಲ್ಲಿ ಸೀಲ್ಡೌನ್, ಕಂಟೈನ್‍ಮೆಂಟ್ ಝೋನ್‍ಗಳನ್ನು ಗುರುತಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದು, ಆಯಾ ಪ್ರದೇಶಗಳಿಗೆ ಸ್ಥಳೀಯ ತಹಶೀಲ್ದಾರ್ ಗಳನ್ನು ಘಟನಾ ಕಮಾಂಡರ್ ಗಳನ್ನಾಗಿ ನೇಮಕ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ರವಿವಾರ ದಾಖಲಾಗಿರುವ 41 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 291 ಆಗಿದೆ. ರವಿವಾರ ಸೋಂಕಿತರ ಪೈಕಿ ಗುಣಮುಖರಾದ 6 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಆಸ್ಪತ್ರೆಯಿಂದ ಇದುವರೆಗೂ ಬಿಡುಗಡೆ ಹೊಂದಿದವರ ಸಂಖ್ಯೆ 130 ಆಗಿದೆ. ಸದ್ಯ ಚಿಕ್ಕಮಗಳೂರು ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಕ್ರೀಯ ಪ್ರಕರಣಗಳ ಸಂಖ್ಯೆ 147ಕ್ಕೇರಿಕೆಯಾಗಿದೆ.

24 ಗಂಟೆಯಲ್ಲಿ ಇಬ್ಬರು ಮೃತ್ಯು
ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದಂತೆ ಸೋಂಕಿಗೆ ತುತ್ತಾಗಿ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಶನಿವಾರ ರಾತ್ರಿ ಕೊಪ್ಪ ತಾಲೂಕಿಗೆ ಸೇರಿದ್ದ 70 ವರ್ಷದ ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಈ ವೃದ್ಧೆಗೆ ಉಸಿರಾಟದ ಸಮಸ್ಯೆ, ಬಿಪಿ, ಶುಗರ್ ಸಂಬಂಧಿತ ಕಾಯಿಲೆ ಇತ್ತು. ಕಳೆದ ಮೂರು ದಿನಗಳ ಹಿಂದೆ ವೃದ್ಧೆಗೆ ಸೋಂಕು ಇರುವುದು ಪತ್ತೆಯಾಗಿದ್ದು, ವೃದ್ಧೆಗೆ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಶನಿವಾರ ರಾತ್ರಿ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನಗರಸಭೆ ಮಾಜಿ ಸದಸ್ಯ ಮೃತ್ಯು
ಸೋಂಕಿಗೆ ತುತ್ತಾಗಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಗರಸಭೆಯ ಮಾಜಿ ಸದಸ್ಯ 72 ವರ್ಷದ ವೃದ್ಧರೊಬ್ಬರು ರವಿವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿ ಹಿಂದಿರುಗಿದ್ದ ಇವರಿಗೆ ಪಾಸಿಟಿವ್ ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿತ್ತು. ಇವರು ಸಕ್ಕರೆ ಕಾಯಿಲೆ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರೆಂದು ತಿಳಿದು ಬಂದಿದೆ.

ಶನಿವಾರ ಹಾಗೂ ರವಿವಾರ ಸೋಂಕಿಗೆ ತುತ್ತಾಗಿದ್ದ ಇಬ್ಬರು ಮೃತಪಟ್ಟ ಘಟನೆಯಿಂದಾಗಿ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ 9ಕ್ಕೇರಿದಂತಾಗಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲಾಡಳಿತ ಹಾಗೂ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X