ತೊಕ್ಕೊಟ್ಟು: ಬೈಕ್-ಕಾರು ಅಪಘಾತ; ಇಬ್ಬರಿಗೆ ಗಂಭೀರ ಗಾಯ
ಉಳ್ಳಾಲ,ಜು.19: ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಬಳಿ ರವಿವಾರ ಬೆಳಿಗ್ಗೆ ಸಂಭವಿಸಿದೆ.
ಚೆಂಬುಗುಡ್ಡೆ ನಿವಾಸಿಗಳಾದ ಚರಣ್ ಮತ್ತು ಮಂಜುನಾಥ್ ಗಂಭೀರವಾಗಿ ಗಾಯಗೊಂಡವರು.
ಕೂಲಿ ಕಾರ್ಮಿಕರಾಗಿದ್ದ ಇಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಸಂದರ್ಭ ಮುಂದೆ ಇದ್ದ ಕಾರು ಬಲಭಾಗಕ್ಕೆ ತಿರುಗಲು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಕಾರು ಚಾಲಕ ಮಹಮ್ಮದ್ ಅಜ್ಮಲ್ ವಿರುದ್ಧ ಪ್ರಕರಣ ದಾಖಲಾಗಿದೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





