Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ...

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ ಸಾಬೀತುಪಡಿಸಿದರೆ ರಾಜೀನಾಮೆ: ಸಚಿವ ಶ್ರೀರಾಮುಲು

ವಾರ್ತಾಭಾರತಿವಾರ್ತಾಭಾರತಿ20 July 2020 6:34 PM IST
share
ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ ಸಾಬೀತುಪಡಿಸಿದರೆ ರಾಜೀನಾಮೆ: ಸಚಿವ ಶ್ರೀರಾಮುಲು

ಬೆಂಗಳೂರು, ಜು. 20: ಮಾರಕ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರಕಾರ ಅವ್ಯವಹಾರ ನಡೆಸಿದೆ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರವಾಗಿದ್ದು, ಇಂತಹ ಯಾವುದೇ ಪ್ರಕರಣಗಳು ನಡೆದಿರುವುದಿಲ್ಲ, ಅವ್ಯವಹಾರ ಸಾಬೀತುಪಡಿಸಿದರೆ ತಕ್ಷಣವೇ ರಾಜೀನಾಮೆ ನೀಡಲು ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸವಾಲು ಹಾಕಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಹಾಗೂ ಸಚಿವ ಶ್ರೀರಾಮುಲು ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ ನಲ್ಲಿ ಇದ್ದ ರಾಜ್ಯದ ಪರಿಸ್ಥಿತಿಯನ್ನು ಅರಿತು ಆರೋಪ ಮಾಡಬೇಕು. 2020ರ ಮಾರ್ಚ್ ನಲ್ಲಿ ಕೋವಿಡ್ ರಾಜ್ಯಕ್ಕೆ ಕಾಲಿಟ್ಟಾಗ ಇಡಿ ದೇಶದಲ್ಲಿ ಪ್ರಪ್ರಥಮ ಸಾವು ನಮ್ಮ ರಾಜ್ಯದ ಕಲಬುರಗಿಯಲ್ಲಿ ಜರುಗಿತು. ಆ ಸಮಯದಲ್ಲಿ ಈ ರೋಗಕ್ಕೆ ತುತ್ತಾದವರಿಗೆ ಚಿಕೆತ್ಸೆ ನೀಡಲು ಅವಶ್ಯವಿರುವ ಸಾಮಾಗ್ರಿಗಳು ಮಾರುಕಟ್ಟೆಯಲ್ಲಿ ಹೇರಳವಾಗಿ ಲಭ್ಯವಿರಲಿಲ್ಲ ಹಾಗೂ ಅವುಗಳ ಬೆಲೆ ಇಂದಿಗಿಂತ ಹೆಚ್ಚಿತ್ತು ಎನ್ನುವುದನ್ನು ಅರಿತುಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು.

ಮೂರು ತಿಂಗಳ ಹಿಂದೆ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿರುವಾಗ ಮಾರುಕಟ್ಟೆಯಲ್ಲಿ ಲಭ್ಯವಿದ್ದ ಉತ್ಪನ್ನಗಳನ್ನು ಅಂದಿನ ಬೆಲೆಯಲ್ಲಿ ಖರೀದಿಸಲಾಗಿದೆ. ಅಂದಿನ ಮಾರುಕಟ್ಟೆಯ ಬೆಲೆಗಿಂತ ಇಂದು ಕಡಿಮೆ ಬೆಲೆಯಲ್ಲಿ ವೈದ್ಯಕೀಯ ಸಲಕರಣೆ ಹಾಗೂ ಉತ್ಪನ್ನಗಳನ್ನು ಖರೀದಿಸಬಹುದಾಗಿದ್ದು, ನಮ್ಮ ರಾಜ್ಯ ಸೇರಿದಂತೆ ದೇಶದಲ್ಲಿ ಪ್ರಸ್ತುತ ಎನ್-95 ಮಾಸ್ಕ್ ಹಾಗೂ ಪಿಪಿಇ ಕಿಟ್‍ಗಳನ್ನು ಉತ್ಪಾದಿಸಲಾಗುತ್ತಿದೆ. ಹಾಗಾಗಿ, ಬೆಲೆಗಳು ಈ ಹಿಂದಿಗಿಂತ ಈಗ ಕಡಿಮೆ ಬೆಲೆಯಲ್ಲಿ ದೊರಕುತ್ತಿವೆ ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿರುವಂತೆ ಆರೋಗ್ಯ ಇಲಾಖೆಯಲ್ಲಿ ಸಾವಿರಾರು ಕೋಟಿ ರೂ.ಗಳ ಅವ್ಯವಹಾರ ಸಾಧ್ಯವೇ ಇಲ್ಲ, ಇಲ್ಲಿಯವರೆಗೆ ಆರೋಗ್ಯ ಇಲಾಖೆ, ಔಷಧ ನಿಯಂತ್ರಣ ಇಲಾಖೆ ಮೂಲಕವೇ ಖರೀದಿಸಿರುವ ಕೋವಿಡ್ ಚಿಕಿತ್ಸೆ ಸಂಬಂಧಿತ ಉತ್ಪನ್ನಗಳ ಒಟ್ಟು ಬೆಲೆ 290 ಕೋಟಿ ರೂ.ಗಳು ಮಾತ್ರವಾಗಿದೆ ಎಂದು ಶ್ರೀರಾಮುಲು ಇದೇ ವೇಳೆ ಸ್ಪಷ್ಟಪಡಿಸಿದರು.

ವೆಂಟಿಲೆಟರ್ ಗಳಲ್ಲಿ ವಿವಿಧ ರೀತಿಯ ಮಾದರಿಗಳಿದ್ದು, ಪ್ರತಿ ಮಾದರಿಗೂ ಪ್ರತ್ಯೇಕ ದರವಿದೆ. ಈಗಾಗಲೇ ಕೇಂದ್ರ ಸರಕಾರಿ ಸ್ವಾಮ್ಯದ ಎಚ್‍ಎಎಲ್ ವೆಂಟಿಲೆಟರ್ ಗಳನ್ನು ಉತ್ಪಾದಿಸಲು ಆರಂಭಿಸಿದ್ದು, ಕೇಂದ್ರ ಸರಕಾರ ರಾಜ್ಯಕ್ಕೆ ಒಟ್ಟು 2,145 ವೆಂಟಿಲೆಟರ್ ಗಳನ್ನು ನೀಡಲು ಸಮ್ಮತಿಸಿದ್ದು ಈಗಾಗಲೇ 640 ವೆಂಟಿಲೆಟರ್ ಗಳನ್ನು ಉಚಿತವಾಗಿ ಪೂರೈಸಿದೆ. ವಿವಿಧ ರೀತಿಯ ಗುಣಮಟ್ಟದ ಹಾಗೂ ನಾವೀನ್ಯತೆ ಹೊಂದಿರುವ ವೆಂಟಿಲೆಟರ್ ಗಳನ್ನು ಖರೀದಿಸುವ ಉದ್ದೇಶದಿಂದ ಈಗಾಗಲೇ ಕೇಂದ್ರ ಸರಕಾರ ಗುರುತಿಸಿರುವ ಸರಬರಾಜುದಾರರಿಂದ ಮಾತ್ರ ಖರೀದಿಸಲಾಗಿದ್ದು, ಹೆಚ್ಚಿನ ಮಟ್ಟದಲ್ಲಿ ಖರೀದಿಸಿದ್ದರಿಂದ ಮಾರುಕಟ್ಟೆಯ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಸಲಾಗಿದೆ ಎಂದು ಹೇಳಿದರು.

ಈ ಹಿಂದೆ ಸ್ಯಾನಿಟೈಸರನ್ನು ಅತ್ಯಂತ ಕಡಿಮೆ ಮಟ್ಟದಲ್ಲಿ ಉತ್ಪಾದಿಸಲಾಗುತ್ತಿತ್ತು, ಕೋವಿಡ್-19 ಹಿನ್ನಲೆಯಲ್ಲಿ ಬೇಡಿಕೆ ಹೆಚ್ಚಾದ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ತಮ್ಮಲ್ಲಿರುವ ಕಚ್ಚಾವಸ್ತುವನ್ನು ಬಳಸಿಕೊಂಡು ಸ್ಯಾನಿಟೈಸರ್ ಉತ್ಪಾದಿಸುವಂತೆ ಕರೆ ನೀಡಿದಾಗ ರಾಜ್ಯದಲ್ಲಿ ಸ್ಯಾನಿಟೈಸರ್ ಉತ್ಪಾದನೆ ಜಾಸ್ತಿಯಾಗಿ ಪ್ರಸ್ತುತ ಅದರ ಬೆಲೆ ಕುಸಿದಿದೆ ಎಂದರು.

ಪ್ರಸ್ತುತ ರಾಜ್ಯದಲ್ಲಿ ಕಾರ್ಪೊರೇಟ್ ಕಂಪನಿಗಳು ತಮ್ಮ ಸಿ.ಎಸ್.ಆರ್ ಯೋಜನೆಯಡಿಯಲ್ಲಿ ನೀಡಿರುವ 2 ಲಕ್ಷ ಲೀಟರ್ ಸ್ಯಾನಿಟೈಸರ್ ಬಳಸಲಾಗುತ್ತಿದೆ. ಕೋವಿಡ್ ಆರಂಭದ ದಿನಗಳಲ್ಲಿ ಮಾತ್ರ ಸ್ಯಾನಿಟೈಸರ್ ಖರೀದಿಸಲಾಗಿತ್ತು. ಪಿಪಿಇ ಕಿಟ್‍ಗಳು ಸಹ ಅಷ್ಟೇ, ಕೋವಿಡ್ ಆರಂಭದ ಕಾಲದಲ್ಲಿ ಅಷ್ಟೇನು ಬಳಕೆಯಲ್ಲಿರದಿದ್ದ ಪಿಪಿಇ ಕಿಟ್‍ಗಳ ಬೆಲೆ ಹೆಚ್ಚಾಗಿತ್ತು. ಕೋವಿಡ್ ಬಂದಾದ ಮೇಲೆ ಸರಕಾರ ಪ್ರತಿ ಕಿಟ್‍ಗೂ 1,444 ರೂ.ಗಳನ್ನು ನೀಡಿತ್ತು, ಇತ್ತೀಚಿಗೆ ನಮ್ಮ ದೇಶದಲ್ಲಿಯೇ ಉತ್ಪಾದನೆ ಆರಂಭವಾದ ಕಾರಣಕ್ಕೆ ಇಂದು ಪ್ರತಿ ಪಿಪಿಇ ಕಿಟ್‍ಗೆ ಕೇವಲ 540 ರೂ.ಗಳಿಗೆ ಒಂದರಂತೆ ಖರೀದಿಸಲಾಗಿದೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಮಾತನಾಡಿ, ಪ್ರಸ್ತುತ ರಾಜ್ಯ ಸರಕಾರದಲ್ಲಿರುವ ಸಚಿವರುಗಳಲ್ಲಿ ಅನೇಕರು ವೈದ್ಯರಿದ್ದು, ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಉತ್ಪನ್ನಗಳನ್ನು ಖರೀದಿಸುವಾಗ ಗುಣಮಟ್ಟ ಕುರಿತು ಅತ್ಯಂತ ಹೆಚ್ಚು ಕಾಳಜಿ ವಹಿಸಲಾಗಿದೆ. ಪ್ರತಿಪಕ್ಷಗಳು ಆರೋಪಿಸಿರುವಂತೆ ಯಾವುದೇ ಅವ್ಯವಹಾರಗಳು ನಡೆದಿಲ್ಲ, ಅವರು ನಮ್ಮ ಸರಕಾರ ಖರೀದಿಸಿರುವ ಉತ್ಪನ್ನಗಳ ನಾವೀನ್ಯತೆಯನ್ನು ಅರಿತು ಇತರ ರಾಜ್ಯಗಳು ಖರೀದಿಸಿರುವ ಬೆಲೆಗಳನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿ ನೋಡಲಿ ಎಂದು ಹೇಳಿದರು.

ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸರಕಾರದೊಂದಿಗೆ ಬೆಂಬಲ ನೀಡಿ ಸಾರ್ವಜನಿಕರನ್ನು ರಕ್ಷಿಸುವುದನ್ನು ಬಿಟ್ಟು ಹೀಗೆ ನಿರಾದಾರ ಆರೋಪಗಳನ್ನು ಮಾಡುವುದನ್ನು ನಿಲ್ಲಿಸಬೇಕು. ಇಂದು ದೇಶದಲ್ಲಿ ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ತನ್ನದೇ ಆದ ಸ್ಥಾನವನ್ನು ಉಳಸಿಕೊಂಡಿದೆ. ಇತರೆ ರಾಜ್ಯಗಳಿಗೆ ಹೋಲಿಸದಲ್ಲಿ ನಮ್ಮ ರಾಜ್ಯ ಉತ್ತಮವಾಗಿದೆ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್ ಮಾತನಾಡಿ ಕೋವಿಡ್ ಚಿಕಿತ್ಸಗೆ ಸಂಬಂಧಿಸಿದಂತೆ ಯಾವುದೇ ವಸ್ತುಗಳನ್ನು ಖರೀದಿಸಲು ಸರಕಾರ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ. ಅಗತ್ಯವಿರುವ ವಸ್ತುಗಳನ್ನು ಗುರುತಿಸುವ ಹಾಗೂ ತಾಂತ್ರಿಕ ವಿಶ್ಲೇಷಕರ ಸಮಿತಿಗಳಿದ್ದು, ಯಾವುದೇ ಖರೀದಿ ಈ ಎರಡು ಸಮಿತಿಗಳ ಮೂಲಕವೆ ಆಗುತ್ತದೆ ಎಂದು ತಿಳಿಸಿದರು.

ರಾಜ್ಯ ಸರಕಾರ ಅತ್ಯಂತ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದು, ಯಾವುದನ್ನು ಮರೆಮಾಚುವುದಿಲ್ಲ. ಎಲ್ಲಕ್ಕೂ ನಾವು ಸ್ಪಷ್ಟವಾಗಿ ಉತ್ತರ ಕೊಡುತ್ತೇವೆ. ವಿಪಕ್ಷ ನಾಯಕ ಸಿದ್ಧರಾಮಯ್ಯನವರ ಆರೋಪದ ಹಿನ್ನಲೆಯಲ್ಲಿ ಜನ ಬೀದಿಯಲ್ಲಿ ಮಾತಾಡುತ್ತಿದ್ದಾರೆ. ಹೀಗಾಗಿ ರಾಜ್ಯದ ಜನರಿಗೆ ಉತ್ತರ ನೀಡುತ್ತಿದ್ದೇವೆ
-ಡಾ.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X