Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್: ಚಿಕಿತ್ಸೆ ನೀಡದೇ ವಾಪಸ್...

ಕೋವಿಡ್: ಚಿಕಿತ್ಸೆ ನೀಡದೇ ವಾಪಸ್ ಕಳುಹಿಸುವಂತಿಲ್ಲ; ಖಾಸಗಿ ಆಸ್ಪತ್ರೆಗಳಿಗೆ ಸಚಿವ ಕೋಟ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ20 July 2020 7:15 PM IST
share
ಕೋವಿಡ್: ಚಿಕಿತ್ಸೆ ನೀಡದೇ ವಾಪಸ್ ಕಳುಹಿಸುವಂತಿಲ್ಲ; ಖಾಸಗಿ ಆಸ್ಪತ್ರೆಗಳಿಗೆ ಸಚಿವ ಕೋಟ ನಿರ್ದೇಶನ

ಮಂಗಳೂರು, ಜು.20: ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿಗೆ ಬಂದ ಕೊರೋನ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡದೆ ಯಾವುದೇ ಕಾರಣಕ್ಕೂ ವಾಪಸ್ ಕಳುಹಿಸುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕೊರೋನ ರೋಗಿಗಳ ನಿರ್ವಹಣೆ ಕುರಿತು ಸೋಮವಾರ ಸಭೆ ನಡೆಸಿ, ಬಳಿಕ ಅವರು ಮಾಹಿತಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಹೀಗಿರುವಾಗ, ಕೋವಿಡ್ ಸೋಂಕಿತರು ಅಥವಾ ಇತರ ಯಾವುದೇ ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಅಲೆದಾಡುವುದನ್ನು ಸರಕಾರ ಸಹಿಸುವುದಿಲ್ಲ. ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಪ್ರವೇಶ ನೀಡಲು ನಿರಾಕರಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲೇಬೇಕಾಗಿದೆ ಎಂದು ತಿಳಿಸಿದರು.

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುವ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಎಲ್ಲ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಲು ಆದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ರೋಗಿಗಳ ಹಣಕಾಸು ಸಾಮರ್ಥ್ಯವನ್ನು ಖಾಸಗಿ ಆಸ್ಪತ್ರೆಗಳು ಪರಿಗಣಿಸುವಂತಿಲ್ಲ. ಬಿಪಿಎಲ್ ಅಥವಾ ಎಪಿಎಲ್ ಸೇರಿದಂತೆ ಚಿಕಿತ್ಸೆಗೆ ಬರುವ ಜನಸಾಮಾನ್ಯರಿಗೆ ಆಯುಷ್ಮಾನ್ ಯೋಜನೆ ಜತೆ ಸಂಯೋಜಿಸಿ ಸರಕಾರ ನಿಗದಿಪಡಿಸಿದ ದರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಪ್ರತೀ ಆಸ್ಪತ್ರೆಯಲ್ಲಿರುವ ಕೋವಿಡ್ ಸೋಂಕಿತ ರೋಗಿಗಳ ನಿರ್ವಹಣೆಯ ಮೇಲೆ ನಿಗಾ ಇಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಕೊರತೆ ಇರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಕಡಿಮೆ ವೆಚ್ಚದ ವೆಂಟಿಲೇಟರ್‌ಗಳನ್ನು ಪೂರೈಸುವ ಬಗ್ಗೆ ಪರಿಶೀಲನೆ ನಡೆಸಲು ಸಚಿವರು ಆರೋಗ್ಯ ಇಲಾಖೆಗೆ ಸೂಚಿಸಿದರು. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಗೆ 25,000 ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್ ಹಾಗೂ 50 ವೆಂಟಿಲೇಟರ್‌ಗಳ ಪೂರೈಕೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದ್ದು, ಶೀಘ್ರವೇ ಜಿಲ್ಲೆಗೆ ಪೂರೈಕೆಯಾಗಲಿದೆ. ಕೊರೋನ ಬಾಧಿತ ಆರೋಪಿಗಳ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲು ಕ್ರಮ ಜರುಗಿಸಲಾಗಿದೆ ಎಂದು ಸಚಿವರು ಹೇಳಿದರು.

ತಾಲೂಕಲ್ಲೂ ಕೋವಿಡ್ ಕೇಂದ್ರ: ಸಂಸದ
ದ.ಕ. ಜಿಲ್ಲೆಯ ಇತರ ತಾಲೂಕು ಕೇಂದ್ರಗಳಲ್ಲಿಯೂ ಕೋವಿಡ್ ಸೋಂಕಿತರಿಗೆ ಆರೈಕೆ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲು ಸೂಚಿಸಿದ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ರೋಗಲಕ್ಷಣಗಳಿಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ರಾಜ್ಯ ಸರಕಾರ ಅವಕಾಶ ನೀಡಿರುವುದರಿಂದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಿದರು.

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ನಿರ್ದೇಶಕ ರಿಚರ್ಡ್ ಕೊಯೆಲ್ಹೋ ಮಾತನಾಡಿ, ತಮ್ಮ ಆಸ್ಪತ್ರೆಯಲ್ಲಿ ಎಲ್ಲ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸರಕಾರದ ಎಲ್ಲ ನಿರ್ದೇಶನಗಳನ್ನು ಪೂರ್ಣವಾಗಿ ಅನುಸರಿಸಲಾಗುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರ) ಡಾ.ರತ್ನಾಕರ್, ಫಾದರ್ ಮುಲ್ಲರ್ ಆಸ್ಪತ್ರೆ ಆಡಳಿತಾಧಿಕಾರಿ ರುಡಾಲ್ಫ್ ರವಿ ಡೇಸಾ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X