Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗರ್ಭಿಣಿಯರ ಚಿಕಿತ್ಸೆಗೆ ಅಲೆದಾಡಿಸಿದರೆ...

ಗರ್ಭಿಣಿಯರ ಚಿಕಿತ್ಸೆಗೆ ಅಲೆದಾಡಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ20 July 2020 7:21 PM IST
share
ಗರ್ಭಿಣಿಯರ ಚಿಕಿತ್ಸೆಗೆ ಅಲೆದಾಡಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

ಮಂಗಳೂರು, ಜು.20: ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರೆಂಬ ಕಾರಣಕ್ಕೆ ಗರ್ಭಿಣಿಯರಿಗೆ ಚಿಕಿತ್ಸೆ ನೀಡದೆ ಬೇರೆಡೆಗೆ ಕಳುಹಿಸುವಂತಿಲ್ಲ. ಹೆರಿಗೆ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಸತಾಯಿಸದೆ ಹೆರಿಗೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ನಗರದ ವೆನ್ಲಾಕ್ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು. ಗರ್ಭಿಣಿಯರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಸತಾಯಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ವ್ಯವಸ್ಥಿತವಾಗಿ ಹೆರಿಗೆ ಮಾಡಿಸಲು ಆಯಾ ಆಸ್ಪತ್ರೆಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಇದರಲ್ಲಿ ವಿಳಂಬ ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಲೇಡಿಗೋಷನ್ ಆಸ್ಪತ್ರೆಯಲ್ಲಿ ಕೋವಿಡ್ ಶಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡುಗಳ ನಿರ್ಮಾಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು. ಇದರಿಂದ ಅಂತಹ ರೋಗಿಗಳಿಗೆ ಲೇಡಿಗೋಷನ್‌ನಲ್ಲಿಯೇ ಚಿಕಿತ್ಸೆ ನೀಡಬಹುದಾಗಿದೆ ಎಂದು ಸಚಿವರು ಹೇಳಿದರು.

ವೆನ್ಲಾಕ್‌ನಲ್ಲಿ ವೈದ್ಯರು ಪರಸ್ಪರ ಹೊಂದಾಣಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ರೋಗಿಗಳಿಗೆ ಸಕಾಲಕ್ಕೆ ಊಟೋಪಚಾರ ಸರಬರಾಜು ಮಾಡಬೇಕು. ಉಪಹಾರದಲ್ಲಿ ದಿನನಿತ್ಯ ಬದಲಾವಣೆ ತಂದು, ಅಗತ್ಯವಿರುವವರಿಗೆ ಹೆಚ್ಚುವರಿ ಉಪಹಾರ ಒದಗಿಸಬೇಕು ಎಂದು ಸಚಿವರು ತಿಳಿಸಿದರು. ವೆನ್ಲಾಕ್ ಆಸ್ಪತ್ರೆಗೆ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ನೇಮಿಸಿ, ಯಾವುದೇ ರೋಗಿಗಳು ಬಂದರೂ ಅವರಿಗೆ ಸೂಕ್ತ ಚಿಕಿತ್ಸೆ ದೊರಕಿಸಲು ಕ್ರಮ ಕೈಗೊಳ್ಳಬೇಕು.

ವೆನ್ಲಾಕ್‌ನಲ್ಲಿ ಐಸಿಯು ಕೊಠಡಿಗಳ ವಿಸ್ತರಣೆ ಹಾಗೂ ಹೆಚ್ಚುವರಿ ವೆಂಟಿಲೇಟರ್‌ಗಳನ್ನು ಅಳವಡಿಸಲು ಕೂಡಲೇ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲು ತಿಳಿಸಿದ ಸಚಿವರು, ಹೆಚ್ಚುವರಿ ಪಿಪಿಇ ಕಿಟ್, ಎನ್-95 ಮಾಸ್ಕ್‌ಗಳನ್ನು ಬೇಡಿಕೆಯಷ್ಟು ಒದಗಿಸಲಾಗುವುದು. ಇನ್ನಷ್ಟು ವೈದ್ಯರು, ಪ್ರಯೋಗಶಾಲಾ ತಂತ್ರಜ್ಞರು, ಡಿ ಗ್ರೂಪ್ ಸಿಬ್ಬಂದಿಗಳ ನೇಮಕ, ಆ್ಯಂಬುಲೆನ್ಸ್‌ಗಳ ಖರೀದಿ ಸೇರಿದಂತೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸರಕಾರ ಅನುಮೋದನೆ ನೀಡಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ರೋಗಲಕ್ಷಣಗಳಿಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ರಾಜ್ಯ ಸರಕಾರ ಅವಕಾಶ ನೀಡಿರುವುದರಿಂದ ಅಂತಹವರಿಗೆ ತ್ವರಿತವಾಗಿ ಅನುಮತಿ ನೀಡಲು ಸಚಿವರು ಸೂಚಿಸಿದರು.

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಮಾತನಾಡಿ, ವೆನ್ಲಾಕ್ ಆಸ್ಪತ್ರೆಯಲ್ಲಿ ಗೊಂದಲವಾಗದಂತೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು. ಲೋಪವೆಸಗುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ವೆನ್ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವವರಿಗೆ ಯಾವುದೇ ತೊಂದರೆಯಾಗದಂತೆ ಮೇಲ್ವಿಚಾರಣೆ ನಡೆಸಲು ತಿಳಿಸಿದರು.

ಸಭೆಯಲ್ಲಿ ವೆನ್ಲಾಕ್ ಅಧೀಕ್ಷಕ ಡಾ.ಸದಾಶಿವ, ಲೇಡಿಗೋಷನ್ ಅಧೀಕ್ಷಕಿ ಡಾ.ಸವಿತಾ ಮತ್ತಿತರರು ಇದ್ದರು.

ನೆಲ್ಯಾಡಿ ಗರ್ಭಿಣಿ ಅಲೆದಾಟ: ತನಿಖೆಗೆ ಡಿಸಿಗೆ ಆದೇಶ
ಪುತ್ತೂರು ತಾಲೂಕಿನ ನೆಲ್ಯಾಡಿಯ ಗರ್ಭಿಣಿಯೊಬ್ಬರು ಚಿಕಿತ್ಸೆಗಾಗಿ ದಿನಪೂರ್ತಿ ಅಲೆದಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೂಡಲೇ ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗೆ ಆದೇಶಿಸಿದರು.

ಸಕಾಲಕ್ಕೆ ಮಹಿಳೆಗೆ ಚಿಕಿತ್ಸೆ ನೀಡಲು ವಿಳಂಭಿಸಿದ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ಅಂತಹವರನ್ನು ಸೇವೆಯಿಂದ ಅಮಾನತು ಮಾಡಲೂ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು. ನೆಲ್ಯಾಡಿಯ ಮಹಿಳೆಗೆ ಕೂಡಲೇ ಅಗತ್ಯ ಚಿಕಿತ್ಸೆ ನೀಡಲು ಸಚಿವರು ಆದೇಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X