ಕೊಲೆಗಡುಕ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಬಿಎಸ್‌ವೈಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಜು. 20: 'ಮುಖ್ಯಮಂತ್ರಿ ಯಡಿಯೂರಪ್ಪನವರೇ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದು ಮಾಡುವ ಕಠಿಣ ಕ್ರಮಕೈಗೊಳ್ಳಿ, ನಿಮ್ಮ ಹುಸಿ ಬೆದರಿಕೆಗೆ ಅವರು ಜಗ್ಗುವುದಿಲ್ಲ' ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, `ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರಿಗಿಂತ ಹೆಚ್ಚು ಬೇರೆ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಸರಕಾರಿ ಆಸ್ಪತ್ರೆಗಳು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಸಾಯುತ್ತಿದ್ದಾರೆ' ಎಂದು ಗಮನ ಸೆಳೆದಿದ್ದಾರೆ.
ಹೆರಿಗೆಗಾಗಿ ಬೆಂಗಳೂರಿನ ಆಸ್ಪತ್ರೆಗಳೆಲ್ಲ ಸುತ್ತಾಡಿದ ಗರ್ಭಿಣಿಯೊಬ್ಬರು ಎಲ್ಲಿಯೂ ಸೇರಿಸಿಕೊಳ್ಳದೆ ಇದ್ದಾಗ ಕೊನೆಗೆ ಆಟೋ ರಿಕ್ಷಾದಲ್ಲಿಯೇ ಹಡೆದ ಪರಿಣಾಮ ಹಸುಕೂಸನ್ನು ಕಳೆದುಕೊಳ್ಳಬೇಕಾಯಿತು. ಮುಖ್ಯಮಂತ್ರಿ ಯಡಿಯೂರಪ್ಪನವರೇ ಮೊದಲು ಈ ನತದೃಷ್ಟ ತಾಯಿಯ ಮಗುವಿನ ಕೊಲೆಗಡುಕ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳಿ' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Next Story





