ಅಪರಿಚತ ವಾಹನ ಢಿಕ್ಕಿ: ಇಬ್ಬರು ಮೃತ್ಯು

ಕಲಬುರಗಿ, ಜು.20: ಅಪರಿಚತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಹೊರವಲಯದ ನಾಗನಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ.
ಶಾಂತಿನಗರದ ನಿವಾಸಿ ಯುಸೂಫ್(35) ಹಾಗೂ ಬೈಕ್ ಹಿಂಬದಿ ಸವಾರ 32 ವರ್ಷದ ವ್ಯಕ್ತಿ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಈ ಘಟನೆ ನಡೆದಿದ್ದು, ಮೃತ ಹಿಂಬದಿ ಸವಾರನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





