Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯಲ್ಲಿ ಕೊರೋನ ಲಕ್ಷಣಗಳಿರುವ...

ಉಡುಪಿಯಲ್ಲಿ ಕೊರೋನ ಲಕ್ಷಣಗಳಿರುವ ಪ್ರಕರಣಗಳು ಹೆಚ್ಚಳ: ಜಿಲ್ಲಾಧಿಕಾರಿ ಜಗದೀಶ್

ವಾರ್ತಾಭಾರತಿವಾರ್ತಾಭಾರತಿ21 July 2020 9:03 PM IST
share
ಉಡುಪಿಯಲ್ಲಿ ಕೊರೋನ ಲಕ್ಷಣಗಳಿರುವ ಪ್ರಕರಣಗಳು ಹೆಚ್ಚಳ: ಜಿಲ್ಲಾಧಿಕಾರಿ ಜಗದೀಶ್

ಉಡುಪಿ, ಜು.21: ಉಡುಪಿ ಜಿಲ್ಲೆಯಲ್ಲಿ ದಿನೇ ದಿನೇ ಕೊರೋನ ಲಕ್ಷಣಗಳಿರುವ ಪ್ರಕರಣಗಳು ಅಧಿಕವಾಗಿ ಕಂಡುಬರುತ್ತಿವೆ. ಜ್ವರ, ಶೀತ, ಉಸಿರಾಟ ತೊಂದರೆಗಳಂತಹ ಲಕ್ಷ್ಮಣಗಳಿರುವ ಶೇ.50ರಷ್ಟು ಪ್ರಕರಣಗಳು ಕಳೆದ ಎರಡು ದಿನಗಳಲ್ಲಿ ವರದಿಯಾಗಿದೆ. ಹಾಗಾಗಿ ನಮಗೆ ಕೋವಿಡ್ ಕೇರ್ ಸೆಂಟರ್‌ಗಳಿ ಗಿಂತ ಆಸ್ಪತ್ರೆಗಳ ಅಗತ್ಯ ಹೆಚ್ಚಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಶೇ.98ರಷ್ಟು ಲಕ್ಷ್ಮಣಗಳಿಲ್ಲದ ಪ್ರಕರಣಗಳು ಕಂಡಬರುತ್ತಿದ್ದವು. ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಯ 21 ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ, 1200 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಸಿದ್ದಪಡಿಸಿ ಇಟ್ಟುಕೊಳ್ಳುವಂತೆ ಈ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಹಂತಹಂತವಾಗಿ ಈ ಆಸ್ಪತ್ರೆಗಳನ್ನು ಬಳಸಿಕೊಳ್ಳಲಾಗುವುದು ಎಂದರು.

ಸಾರ್ವಜನಿಕರ ಬೇಡಿಕೆಯಂತೆ ಮುಂದಿನ ದಿನಗಳಲ್ಲಿ ಬಸ್ ಸಂಚಾರವನ್ನು ಆರಂಭಿಸುವ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರೂಟ್ ಸರ್ವೆ ನಡೆಸಲು ಸೂಚಿಸಲಾಗಿದೆ. ಆದರೆ ಬಸ್ ಆರಂಭಗೊಂಡ ಬಳಿಕ ಯಾವುದೇ ಕಾರಣಕ್ಕೂ ಒಂದು ಬಸ್‌ನಲ್ಲಿ 30 ಮಂದಿಗಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸಿದರೆ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಂಪರ್ಕ ಪತ್ತೆ ಅಸಾಧ್ಯ
ಕೊರೋನ ಜಿಲ್ಲೆಯಲ್ಲಿ ಸಮುದಾಯಕ್ಕೆ ಹರಡಿದೆಯೇ ಎಂಬುದನ್ನು ತಜ್ಞರು ಹೇಳಬೇಕಾಗಿದೆ. ನಮ್ಮಲ್ಲಿ ಇಂದು ಜ್ವರ, ಶೀತ, ಉಸಿರಾಟದ ತೊಂದರೆಗಳ ಪ್ರಕರಣಗಳು ಹೆಚ್ಚುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ಸಂಪರ್ಕವನ್ನು ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಅಂತಹ ಪ್ರಕರಣಗಳು ನಮ್ಮಲ್ಲಿ ಸಾಕಷ್ಟು ಕಂಡು ಬರುತ್ತಿವೆ. ಆದುದರಿಂದ ಸಾರ್ವಜನಿಕರು ಬಹಳ ಜಾಗೃತೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ವೆಂಟಿಲೇಟರ್, ಆಕ್ಸಿಜನ್, ಐಸಿಯು ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಗಳಿರುವ 150 ಬೆಡ್ ಗಳ ಪ್ರತ್ಯೇಕ ವಿಭಾಗವನ್ನು ಆರಂಭಿಸಲಾಗಿದೆ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಒಟ್ಟು 1200 ಬೆಡ್‌ಗಳ ವ್ಯವಸ್ಥೆಗಳಿದ್ದು, ಇನ್ನು 1200 ಬೆಡ್‌ಗಳನ್ನು ಗುರುತಿಸಲಾಗಿದೆ. ಒಟ್ಟು 2400 ಬೆಡ್‌ಗಳು ಕೇರ್ ಸೆಂಟರ್‌ನಲ್ಲಿವೆ ಎಂದರು.

ಕುಂದಾಪುರ ಮತ್ತು ಕಾರ್ಕಳ ಸರಕಾರಿ ಕೋವಿಡ್ ಆಸ್ಪತ್ರೆಗಳಲ್ಲೂ ಐಸಿಯು ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಜಿಲ್ಲೆಯಲ್ಲಿ 50 ಸರಕಾರಿ ವೆಂಟಿಲೇಟರ್ ಗಳಲ್ಲಿ ಆರು ಮಾತ್ರ ಬಳಕೆ ಆಗುತ್ತಿದೆ. ಅದೇ ರೀತಿ ಜಿಲ್ಲೆಯಲ್ಲಿ ಒಟ್ಟು 400 ಐಪ್ಲೋ ಆಕ್ಸಿಜನ್ ವ್ಯವಸ್ಥೆ ಇದೆ. ಆದುದರಿಂದ ನಮ್ಮಲ್ಲಿ ಐಸಿಯು, ಆಕ್ಸಿಜನ್, ವೆಂಟಿಲೇಟರ್‌ಗಳ ಯಾವುದೇ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕೆಎಂಸಿಯವರಿಂದ ಹೋಮ್ ಐಸೋಲೇಶನ್
ಈಗಾಗಲೇ ಜಿಲ್ಲಾಡಳಿತ ಜಿಲ್ಲೆಯಲ್ಲಿ ಹೋಮ್ ಐಸೋಲೇಶನ್ ವ್ಯವಸ್ಥೆಯನ್ನು ಆರಂಭಿಸಿದ್ದು, ಅದರಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಮೂಲಕವೂ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ತಜ್ಞ ವೈದ್ಯರ ಮೂಲಕ ಹೋಮ್ ಐಸೋಲೇಶನ್‌ಗೆ ಪ್ಯಾಕೇಜ್ ಸಿದ್ಧಪಡಿಸುವಂತೆ ಈಗಾಗಲೇ ಮಣಿಪಾಲ ಕೆಎಂಸಿಯವರಿಗೆ ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಈ ರೀತಿ ವ್ಯವಸ್ಥೆಯನ್ನು ಆರಂಭಿಸಿದ್ದಾರೆ. ಅದೇ ರೀತಿ ಇಲ್ಲೂ ಕೂಡ ಆರಂಭಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X