Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಲಿವುಡ್‍ಗೆ 'ಗುಡ್‍ಬೈ' ಹೇಳಿದ ಖ್ಯಾತ...

ಬಾಲಿವುಡ್‍ಗೆ 'ಗುಡ್‍ಬೈ' ಹೇಳಿದ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ

ವಾರ್ತಾಭಾರತಿವಾರ್ತಾಭಾರತಿ22 July 2020 12:26 PM IST
share
ಬಾಲಿವುಡ್‍ಗೆ ಗುಡ್‍ಬೈ ಹೇಳಿದ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ

ಮುಂಬೈ: ತಾವು ಈಗಾಗಲೇ ಸಾಕಷ್ಟು ಕಷ್ಟ ಅನುಭವಿಸಿರುವುದರಿಂದ ಬಾಲಿವುಡ್‍ಗೆ ರಾಜೀನಾಮೆ ನೀಡುವುದಾಗಿ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ ಹೇಳಿದ್ದಾರೆ. 'ಥಪ್ಪಡ್' ಖ್ಯಾತಿಯ ಸಿನ್ಹಾ ಅವರ ಹೇಳಿಕೆಯ ಬೆನ್ನಲ್ಲೇ ಸುಧೀರ್ ಮಿಶ್ರಾ ಹಾಗೂ ಹನ್ಸಲ್ ಮೆಹ್ತಾ ಕೂಡ ಅಂತಹುದೇ ಟ್ವೀಟ್ ಮಾಡಿದ್ದರೆ.

"ಸಾಕು, ನಾನು ಈ ಮೂಲಕ ಬಾಲಿವುಡ್‍ಗೆ ರಾಜೀನಾಮೆ ನೀಡುತ್ತೇನೆ. ಅದು ಏನು ಬೇಕಾದರೂ ಅರ್ಥ ನೀಡಲಿ,'' ಎಂದು ಸಿನ್ಹಾ ಬರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿದ ಇನ್ನೊಬ್ಬ ನಿರ್ದೇಶಕ ಸುಧೀರ್ ಮಿಶ್ರಾ, "ಬಾಲಿವುಡ್ ಅಂದರೇನು? ನಾನು ಸತ್ಯಜಿತ್ ರೇ, ರಾಜ್ ಕಪೂರ್, ಗುರುದತ್ತ್, ರಿತ್ವಿಕ್ ಘಟಕ್, ಬಿಮಲ್ ರಾಯ್, ಮೃಣಾಲ್ ಸೇನೆ, ಹೃಷಿಕೇಶ್ ಮುಖರ್ಜಿ, ಕಾಸಿಫ್, ವಿಜಯ್ ಆನಂದ್, ಜಾವೇದ್ ಅಖ್ತರ್, ತಪನ್ ಸಿನ್ಹಾ, ಗುಲ್ಜಾರ್, ಶೇಖರ್ ಕಪೂರ್, ಕೇತನ್ ಮೆಹತಾ,  ಭರತನ್ ಮತ್ತು ಅರವಿಂದನ್ ಮತ್ತಿತರರಿಂದ ಸ್ಫೂರ್ತಿ ಪಡೆದು ಸಿನೆಮಾದ ಭಾಗವಾಗಲು ಬಂದೆ. ನಾನು ಅಲ್ಲೇ ಯಾವತ್ತೂ ಇರುತ್ತೇನೆ," ಎಂದು ಬರೆದಿದ್ದಾರೆ.

ಇದನ್ನು ರಿಟ್ವೀಟ್ ಮಾಡಿದ ಅನುಭವ್ "ಜನರೇ, ನಾವು ಬಾಲಿವುಡ್‍ನಿಂದ ಹೊರಹೋಗೋಣ, ನಾವು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿ ಚಿತ್ರಗಳನ್ನು ನಿರ್ಮಿಸುವುದನ್ನು ಮುಂದುವರಿಸೋಣ,'' ಎಂದು ಬರೆದು ಕವಿ  ಸೂರದಾಸ್ ಅವರ 'ಮಯ್ಯಾ ಮೋರಿ ಮೈ ನಹೀನ್ ಮಾಖನ್ ಖಾಯೋ' ಎಂಬ  ಕವನದ ಒಂದು ಭಾಗ `ಯೇ ಲೇತಿ ಅಪ್ನಿ ಲಕೂಟಿ ಕಮರಿಯಾ ಬಹುತಹೀನ್ ನಾಚ್ ನಚಾಯೊ'' ತೆಗೆದುಕೊಳ್ಳಿ ನಿಮ್ಮ ಕೋಲು ಮತ್ತು ಚಾದರ, ನೀವು ನನ್ನನ್ನು ಬಹಳ ಕುಣಿಸಿದ್ದೀರಿ, ಎಂಬರ್ಥ ನೀಡುವ ಒಂದು  ಭಾಗವನ್ನು ಉಲ್ಲೇಖಿಸಿದ್ದಾರೆ.

ಇದಾದ ಸ್ವಲ್ಪ ಹೊತ್ತಿನಲ್ಲಿಯೇ ನಿರ್ದೇಶಕ ಹನ್ಸಲ್ ಮೆಹ್ತಾ ಟ್ವೀಟ್ ಮಾಡಿ "ಛೋಡ್ ದಿಯಾ,  ಮೊದಲನೆಯದಾಗಿ ಅದು ಅಸ್ತಿತ್ವದಲ್ಲಿಯೇ ಇರಲಿಲ್ಲ,'' ಎಂದು ಬಾಲಿವುಡ್ ಅನ್ನು ಉಲ್ಲೇಖಿಸಿ ಬರೆದಿದ್ದಾರೆ.

ಅನುಭವ್ ಸಿನ್ಹಾ ತಮ್ಮ ಟ್ವಿಟ್ಟರ್ ಹೆಸರನ್ನು ಅನುಭವ್ ಸಿನ್ಹಾ (ನಾಟ್ ಬಾಲಿವುಡ್) ಎಂದು ಬದಲಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X