ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಜಪ್ತಿ: 600 ಚೀಲ ಅಕ್ಕಿ ವಶ
ಕಲಬುರಗಿ, ಜು.22: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಜಪ್ತಿ ಮಾಡಿದ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಸುಮಾರು 600 ಚೀಲ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಆಹಾರ ಇಲಾಖೆಯ ಇನ್‍ಸ್ಪೆಕ್ಟರ್ ಭಾರತಿ ಸೂರ್ಯಕಾಂತ ಪಾಟೀಲ್ ನೇತೃತ್ವದಲ್ಲಿ ತಂಡ ಖಚಿತ ಮಾಹಿತಿಯ ಮೇರೆಗೆ, ನಗರದ ರಾಮಮಂದಿರ ಬಳಿಯಲ್ಲಿ ನಿಂತಿದ್ದ ಲಾರಿಯನ್ನು ಪರಿಶೀಲಿಸಿದಾಗ ಅದರಲ್ಲಿ ಪಡಿತರ ಅಕ್ಕಿ ಇರುವುದು ಗೊತ್ತಾಗಿದೆ. ತಕ್ಷಣ ವಿಶ್ವವಿದ್ಯಾಲಯ ಠಾಣೆಗೆ ದೂರು ನೀಡಿ ಲಾರಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಈ ದಾಳಿಯ ಸಂದರ್ಭದಲ್ಲಿ ಲಾರಿ ಚಾಲಕ ಪರಾರಿಯಾಗಿದ್ದು, ಕ್ಲಿನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
Next Story





