ಒಂದು ವರ್ಷದ ಮಟ್ಟಿಗೆ ಆಸ್ತಿ ತೆರಿಗೆ ಮನ್ನಾ ಮಾಡುವಂತೆ ಡಿಕೆಶಿ ಒತ್ತಾಯ

ಬೆಂಗಳೂರು, ಜು.22: ಕೊರೋನ ಸಾಂಕ್ರಾಮಿಕದಿಂದಾಗಿ ಜನಸಾಮಾನ್ಯರು ಆರ್ಥಿಕವಾಗಿ ಸಾಕಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ನೆರವಿಗೆ ಸರಕಾರ ಧಾವಿಸಬೇಕು. ಆದುದರಿಂದ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳ ಎಲ್ಲ ಬಗೆಯ ಆಸ್ತಿ ತೆರಿಗೆಯನ್ನು ಮಾನವೀಯ ನೆಲೆಯಲ್ಲಿ ಒಂದು ವರ್ಷದ ಮಟ್ಟಿಗೆ ಮನ್ನಾ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
Next Story





