ಸುರಕ್ಷಿತ ಅಂತರ ಮರೆತು ಶಾಸಕ ಅಶೋಕ್ ನಾಯ್ಕ್ ರಿಂದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಶಿವಮೊಗ್ಗ, ಜು.23: ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕು ಹೆಚ್ಚಾಗುತ್ತಿದೆ. ಕೊರೋನ ಸೋಂಕುನಿಂದ ಬಚಾವ್ ಆಗಲು ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರ ಆದೇಶ ನೀಡಿದೆ. ಆದರೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರು ಮಾತ್ರ ಇದಕ್ಕೆ ಕ್ಯಾರೆ ಅನ್ನದೇ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ಸುರಕ್ಷಿತ ಅಂತರ ಮರೆತು ಗುದ್ದಲಿ ಪೂಜೆ ನೆರವೇರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕೊನಗವಳ್ಳಿ ಗ್ರಾಮದಲ್ಲಿ ಗುರುವಾರ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್ ನಾಯ್ಕ್ 25 ಲಕ್ಷ ರೂ. ಅನುದಾನದ ಕಾಂಕ್ರೀಟ್ ಕಾಮಗಾರಿಗೆ ಚಾಲನೆ ನೀಡಿದರು.
ಈ ವೇಳೆ ನೂರಾರು ಮಂದಿ ಸ್ಥಳೀಯರು, ಜನಪ್ರತಿನಿಧಿಗಳು ಗುಂಪುಗೂಡಿದ್ದರು. ಇದಕ್ಕೆ ಕ್ಯಾರೇ ಅನ್ನದ ಶಾಸಕರು ಜನರಿಗೆ ಬುದ್ದಿ ಹೇಳುವ ಬದಲಾಗಿ, ಸ್ವತಃ ತಾವೇ ಮಾಸ್ಕ್ ಧರಿಸದೆ, ಸುರಕ್ಷಿತ ಅಂತರವಿಲ್ಲದೇ ಗುದ್ದಲಿ ಪೂಜೆ ನೆರವೇರಿಸಿದ್ದಾರೆ ಎನ್ನಲಾಗಿದೆ.
Next Story





