Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದ ಆಡಳಿತ ವೈಫಲ್ಯದಿಂದಾಗಿ ಹಿರಿಯ...

ಸರಕಾರದ ಆಡಳಿತ ವೈಫಲ್ಯದಿಂದಾಗಿ ಹಿರಿಯ ನಾಗರಿಕರಿಗೆ ಶೋಷಣೆ: ರೇಖಾ ಹುಲಿಯಪ್ಪಗೌಡ

ವೃದ್ಧಾಪ್ಯ, ವಿಧವಾ, ಅಂಗವಿಕಲರ ವೇತನ ಬಿಡುಗಡೆ ವಿಳಂಬ

ವಾರ್ತಾಭಾರತಿವಾರ್ತಾಭಾರತಿ23 July 2020 5:53 PM IST
share

ಚಿಕ್ಕಮಗಳೂರು, ಜು.23: ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳ ಬಿಡುಗಡೆಗೆ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ವಿಳಂಬ ಮಾಡುತ್ತಿದ್ದು, ಕಳೆದ 8 ತಿಂಗಳುಗಳಿಂದ ಹಿರಿಯ ನಾಗರಿಕರೂ ಸೇರಿದಂತೆ ಫಲಾನುಭವಿಗಳನ್ನು ಸತಾಯಿಸುತ್ತಿದೆ. ಸರಕಾರದ ಈ ನಿರ್ಲಕ್ಷ್ಯ ಧೋರಣೆಯಿಂದಾಗಿ ಫಲಾನುಭವಿಗಳು ಪ್ರತಿದಿನ ತಾಲೂಕು ಕಚೇರಿಗಳಿಗೆ ಸುಮ್ಮನೆ ಅಲೆದಾಡುವಂತಾಗಿದೆ ಎಂದು ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಆರೋಪಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳನ್ನು ಪಡೆಯುತ್ತಿರುವ ಫಲಾನುಭವಿಗಳಿದ್ದಾರೆ. ಈ ಪೈಕಿ ಕೆಲ ಹಿರಿಯ ನಾಗರಿಕರು, ಅಂಗವಿಕಲರು, ವಿಧವೆಯರಿಗೆ ಸರಕಾರದ ಈ ಯೋಜನೆಗಳ ಹಣವೇ ಜೀವನಾಧಾರವಾಗಿದೆ. ಆದರೆ ಜಿಲ್ಲಾಡಳಿತ ವೇತನ ಬಿಡುಗಡೆಗೆ ಕಳೆದ 8 ತಿಂಗಳುಗಳಿಂದ ಯಾವುದೇ ಕ್ರಮವಹಿಸಿಲ್ಲ. ಪರಿಣಾಮ ಫಲಾನುಭವಿಗಳು ತೀವ್ರ ಸಂಕಷ್ಟದಲ್ಲಿ ದಿನಕಳೆಯುವಂತಾಗಿದೆ. ಕೊರೋನ ಸೋಂಕಿನ ಪರಿಣಾಮ ಜಾರಿ ಮಾಡಲಾದ ಲಾಕ್‍ಡೌನ್‍ನಿಂದಾಗಿ ಈ ಫಲಾನುಭವಿಗಳ ಜೀವನ ಮೊದಲೇ ಸಂಕಷ್ಟಕ್ಕೆ ತಲುಪಿದೆ. ಇದೀಗ ಸರಕಾರ ಹಿರಿಯ ನಾಗರಿಕರು, ಅಂಗವಿಕಲರು, ವಿಧವೆಯರಿಗೆ ಈ ಯೋಜನೆಗಳ ಹಣ ನೀಡದೇ ಸತಾಯಿಸುತ್ತಿದೆ ಎಂದು ದೂರಿದರು.

ಈ ಯೋಜನೆಗಳ ಹಣಕ್ಕಾಗಿ ಚಿಕ್ಕಮಗಳೂರು ತಾಲೂಕು ಸೇರಿದಂತೆ ಪ್ರತಿದಿನ ಜಿಲ್ಲೆಯ ವಿವಿಧ ತಾಲೂಕು ಕಚೇರಿಗಳಿಗೆ ನೂರಾರು ಹಿರಿಯ ನಾಗರಿಕರು, ಅಂಗವಿಕಲರು ವಿಧವೆಯರು ಸೌಲಭ್ಯ ಕೋರಿ ಅಲೆದಾಡುತ್ತಿದ್ದಾರೆ. ಅಧಿಕಾರಿಗಳು ಇವರಿಗೆ ಇಲ್ಲದ ಸಬೂಬು ಹೇಳಿ ಹಿಂದಕ್ಕೆ ಕಳುಹಿಸುತ್ತಿದ್ದಾರೆ. ಜಿಲ್ಲೆಯಲ್ಲಿನ ವಿವಿಧ ತಾಲೂಕು ವ್ಯಾಪ್ತಿಯಲ್ಲಿನ ದೂರದ ಗ್ರಾಮಗಳಿಂದ ತಾಲೂಕು ಕಚೇರಿಗೆ ಅಲೆಯುತ್ತಿರುವ ಈ ಫಲಾನುಭವಿಗಳು ಹಣ, ಸಮಯ ವ್ಯರ್ಥ ಮಾಡಿಕೊಂಡು ಅಲೆದಾಡುತ್ತಿದ್ದಾರಾದರೂ ಸೌಲಭ್ಯಗಳು ಸಿಗುತ್ತಿಲ್ಲ ಎಂದು ದೂರಿದರು.

ಸದ್ಯ ಜಿಲ್ಲೆಯಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂತಹ ಸಂದರ್ಭಗಳಲ್ಲಿ ಸೋಂಕು ಹಿರಿಯ ನಾಗರಿಕರಿಗೆ ತಗುಲಿದರೆ ಅವರು ಬದುಕುವುದೇ ಕಷ್ಟ. ಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು ಸುಮ್ಮನೆ ಕಚೇರಿಗಳಿಗೆ ಅಲೆದಾಡಬಾರದು. ಮನೆಗಳಿಂದ ಹೊರಗೆ ಬರಬಾರದು ಎಂದು ಈ ಹಿಂದೆಯೇ ಆದೇಶ ನೀಡಿದೆ. ಆದರೆ ಜಿಲ್ಲಾಡಳಿತ ಮತ್ತು ಸರಕಾರದ ಆಡಳಿತದ ವೈಫಲ್ಯದ ಫಲವಾಗಿ ಹಿರಿಯ ನಾಗರಿಕರು ವೃದ್ಧಾಪ್ಯ ವೇತನಕ್ಕಾಗಿ ಕಚೇರಿಗಳಿಗೆ ಅಲೆಯುವಂತಾಗಿದೆ. ಸರಕಾರದ ಈ ಕಾರ್ಯವೈಖರಿಯಿಂದಾಗಿ ಜಿಲ್ಲೆಯಲ್ಲಿ ಸಾವಿರಾರು ಫಲಾನುಭವಿಗಳ ಬದುಕು ಅತಂತ್ರಗೊಂಡಿದೆ ಎಂದು ರೇಖಾ ಹುಲಿಯಪ್ಪಗೌಡ ಟೀಕಿಸಿದರು.

ಸೌಲಭ್ಯಗಳಿಗಾಗಿ ತಾಲೂಕು ಕಚೇರಿಗಳಿಗೆ ಅಲೆಯುತ್ತಿರುವ ಫಲಾನುಭವಿಗಳಿಗೆ ಕಚೇರಿ ಸಿಬ್ಬಂದಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಫಲಾನುಭವಿಗಳು ತಾಲೂಕು ಕಚೇರಿ ಅಧಿಕಾರಿಗಳನ್ನು ವಿಚಾರಿಸಿದರೇ, ಈ ಸೌಲಭ್ಯಗಳ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲು ಸರಕಾರ ಆದೇಶ ನೀಡಿದ್ದು, ಅದರಂತೆ ಫಲಾನುಭವಿಗಳ ಮಾಹಿತಿ, ಆಧಾರ್ ಕಾರ್ಡ್‍ಗಳನ್ನು ಲಿಂಕ್ ಮಾಡುವ ಕೆಲಸ ನಡೆಯುತ್ತಿರುವುದರಿಂದ ಹಣ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಹಿರಿಯ ನಾಗರಿಕರನ್ನು ಕಚೇರಿಗೆ ಅಲೆದಾಡಿಸುವುದರಿಂದ ಇವರಿಗೂ ಸೋಂಕು ತಗುಲುವ ಸಾಧ್ಯತೆ ಇದೆ. ಅಧಿಕಾರಿಗಳು ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿದ ಮಾಹಿತಿ ಸಂಗ್ರಹಿಸಲು ಕ್ರಮವಹಿಸಬೇಕು. ಈ ಸಮಸ್ಯೆ ಇಡೀ ರಾಜ್ಯಕ್ಕೆ ಸಂಬಂಧಿಸಿರುವುದರಿಂದ ಈ ಮಾಹಿತಿಗಳ ಸಂಗ್ರಹಕ್ಕೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ನಿಗದಿತ ಕಾಲಾವಧಿಯ ಗಡುವು ನೀಡಿ ಸರಕಾರವೇ ಆದೇಶ ಹೊರಡಿಸಬೇಕೆಂದು ಆಗ್ರಹಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆದರೆ ಇನ್ನೂ ಸೋಂಕು ಪರೀಕ್ಷೆಯ ಲ್ಯಾಬ್ ನಿರ್ಮಾಣ ಕೆಲಸ ಪೂರ್ಣಗೊಂಡಿಲ್ಲ. ಲ್ಯಾಬ್ ಇಲ್ಲದ ಪರಿಣಾಮ ಸ್ವಾಬ್ ಪರೀಕ್ಷೆಯ ವರದಿ ತಡವಾಗಿ ಬರುತ್ತಿದ್ದು, ಸೋಂಕು ಹೆಚ್ಚಲು ಕಾರಣವಾಗಿದೆ. ಅಲ್ಲದೇ ಕ್ವಾರಂಟೈನ್ ಕೇಂದ್ರ, ಕೊರೋನ ಚಿಕಿತ್ಸಾ ಘಟಕಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸದೇ ಇರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದ್ದು, ಜಿಲ್ಲಾಡಳಿತ ಸೋಂಕಿತರಿಗೆ ಸೌಲಭ್ಯ ನೀಡುವ ನಿಟ್ಟಿನಲ್ಲಿ ಸರಕಾರದ ಮಾರ್ಗಸೂಚಿಗಳಂತೆಯೇ ಸೌಲಭ್ಯಗಳನ್ನು ಕಲ್ಪಿಸಬೇಕು. ಕೊರೋನ ಹೆಚ್ಚುತ್ತಿರುವ ಸಂದರ್ಭ ಜಿಲ್ಲಾಡಳಿತ ವೈದ್ಯರು, ನರ್ಸ್ ಗಳು, ಇತರ ಸಿಬ್ಬಂದಿಯನ್ನು ಸೀಮಿತ ಅವಧಿಗೆ ನೇಮಕ ಮಾಡಲು ಮುಂದಾಗಿರುವುದು ಸರಿಯಲ್ಲ. ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಖಾಯಂ ಆಗಿ ನೇಮಿಸಿಕೊಳ್ಳಬೇಕೆಂದು. ಆಶಾ ಕಾರ್ಯಕರ್ತೆರ ವೇತನ ಹೆಚ್ಚಳ ಮಾಡಿ ಅವರು ಸೇವೆಗೆ ತೊಡಗಿಸಿಕೊಳ್ಳುವಂತೆ ರಾಜ್ಯ ಸರಕಾರ ಕ್ರಮಕೈಗೊಳ್ಳಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮುಖಂಡರಾದ ಸುರೇಖಾ ಸಂಪತ್, ನಗೀನಾ ಹಾಗೂ ಲಕ್ಯಾ ಗ್ರಾಪಂ ಮಾಜಿ ಅಧ್ಯಕ್ಷ ಕಾಂತರಾಜ್ ಉಪಸ್ಥಿತರಿದ್ದರು.

ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗಲಿಕಲರಿಗೆ ನೀಡುತ್ತಿರುವ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಈ ಯೋಜನೆಗೆ ಯಾವುದೇ ತಿದ್ದುಪಡಿ ಮಾಡದೇ ಹಳೇ ವಿಧಾನದಲ್ಲೇ ಸೌಲಭ್ಯವನ್ನು ಶೀಘ್ರ ಬಿಡುಗಡೆ ಮಾಡಬೇಕು. ತಪ್ಪಿದಲ್ಲಿ ಜಿಲ್ಲೆಯ ಪ್ರತೀ ಹೋಬಳಿ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಫಲಾನುಭವಿಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು.
- ಕಾಂತರಾಜ್, ಗ್ರಾಪಂ ಮಾಜಿ ಅಧ್ಯಕ್ಷ, ಲಕ್ಯಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X