ಉಡುಪಿ: ತಾಪಂ ಎದುರು ರೈತ, ಕೃಷಿ ಕೂಲಿಕಾರರ ಪ್ರತಿಭಟನೆ

ಉಡುಪಿ, ಜು.23: ಗುರುವಾರ ದೇಶ ವ್ಯಾಪಿ ನಡೆದಿರುವ ರೈತ, ಕೃಷಿ ಹಾಗೂ ಕೂಲಿಕಾರರ ಪ್ರತಿಭಟನೆಯ ಭಾಗವಾಗಿ ಉಡುಪಿಯಲ್ಲೂ ತಾಲೂಕು ಪಂಚಾಯತ್ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಉಡುಪಿ ಜಿಲ್ಲಾ ಸಿಐಟಿಯು ಹಾಗೂ ಕೃಷಿ ಕೂಲಿಕಾರರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಪ್ರತಿಭಟನೆಯ ಕೊನೆಗೆ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಿಐಟಿಯು ಹಾಗೂ ಕೃಷಿ ಕೂಲಿಕಾರರ ಸಂಘದ ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್ ಎಸ್, ಕೋಶಾಧಿಕಾರಿ ಉಮೇಶ್ ಕುಂದರ್, ಜಿಲ್ಲಾ ಸಿಐಟಿಯು ಉಪಾಧ್ಯಕ್ಷ ಪಿ ವಿಶ್ವನಾಥ್ ರೈ, ಕಟ್ಟಡ ಸಂಘದ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಸಿಐಟಿಯು ತಾಲೂಕು ಅಧ್ಯಕ್ಷ ರಾಮ ಕಾರ್ಕಡ, ಶಶಿಧರ ಗೊಲ್ಲ, ನಳಿನಿ, ಮೋಹನ್, ವಿದ್ಯಾರಾಜ್ ಮುಂತಾದವರು ಉಪಸ್ಥಿತರಿದ್ದರು.

Next Story





