Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ 19 ನಿಯಂತ್ರಣಕ್ಕೆ ನಿಯಮಗಳನ್ನು...

ಕೋವಿಡ್ 19 ನಿಯಂತ್ರಣಕ್ಕೆ ನಿಯಮಗಳನ್ನು ಪಾಲಿಸಿ: ಉಡುಪಿ ಡಿಸಿ ಜಿ. ಜಗದೀಶ್

ವಾರ್ತಾಭಾರತಿವಾರ್ತಾಭಾರತಿ23 July 2020 7:25 PM IST
share
ಕೋವಿಡ್ 19 ನಿಯಂತ್ರಣಕ್ಕೆ ನಿಯಮಗಳನ್ನು ಪಾಲಿಸಿ: ಉಡುಪಿ ಡಿಸಿ ಜಿ. ಜಗದೀಶ್

ಉಡುಪಿ, ಜು.23: ಜಿಲ್ಲೆಯಲ್ಲಿ ಕೋವಿಡ್-19 (ನೋವೆಲ್ ಕೊರೋನ ವೈರಸ್) ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್‌ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧನಗಳನ್ನು ಹೇರುವುದು ಮತ್ತು ಕಂಟೈನ್‌ಮೆಂಟ್ ಹೊರವಲಯಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅಗತ್ಯವೆಂದು ಕಂಡುಬಂದಿದ್ದು ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಜು.22ರಿಂದ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಗಳನ್ನು ಹೊರಡಿಸಿದ್ದಾರೆ.

ಇನ್ನು ಜಿಲ್ಲೆಯ ಕಂಟೈನ್‌ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಇರುತ್ತದೆ. ವೈದ್ಯಕೀಯ ತುರ್ತು ಸೇವೆಗಳು, ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾಗಿದೆ. ಇವುಗಳ ಹೊರತು ಕಂಟೈನ್‌ಮೆಂಟ್ ವಲಯದ ಒಳಗೆ ಹಾಗೂ ಹೊರಗೆ ಜನರ ಚಲನ ವಲನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಕೆಲವೊಂದು ಚಟುವಟಿಕೆಗಳನ್ನು ಹೊರತು ಪಡಿಸಿ, ಎಲ್ಲಾ ಚಟುವಟಿಕೆಗಳನ್ನು ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಲಕಾಲಕ್ಕೆ ಹೊರಡಿ ಸಿದ ಸೂಚನೆಗಳು ಮತ್ತು ಕಾರ್ಯಾಚರಣೆಯ ಕಾರ್ಯ ವಿಧಾನಗಳ ಷರತ್ತು ಗಳೊಂದಿಗೆ ನಡೆಸಲು ಅನುಮತಿ ನೀಡಲಾಗಿದೆ.

ರವಿವಾರ ಲಾಕ್‌ಡೌನ್: ಮುಂದಿನ ರವಿವಾರ ಪೂರ್ಣ ದಿನದ ಲಾಕ್‌ಡೌನ್ ಇರುತ್ತದೆ. ಅದರೆ ಅಗತ್ಯ ಸರಕು ಸಾಗಾಣಿಕೆಗೆ ಯಾವುದೇ ನಿರ್ಭಂಧವಿರು ವುದಿಲ್ಲ. ಪೆಟ್ರೋಲ್ ಪಂಪ್/ಮೆಡಿಕಲ್/ಕ್ಲಿನಿಕಲ್ ಲ್ಯಾಬ್ /ಆಸ್ವತ್ರೆ /ಹಾಲು /ದಿನಪತ್ರಿಕೆ ಮಾರಾಟಕ್ಕೆ ನಿರ್ಬಂಧವಿಲ್ಲ. ಹೊಟೇಲ್‌ಗಳಿಂದ ಪಾರ್ಸೆಲ್‌ಗಳಿಗೆ, ಪುಡ್ ಡೆಲಿವರಿಗೆ ಅವಕಾಶವಿದೆ.

ಕಳೆದ ಜು.15ರಿಂದ 29ರಿಂದ ವಿಧಿಸಲಾಗಿದ್ದ 14 ದಿನಗಳ ಜಿಲ್ಲೆಯ ಗಡಿಗಳ ಸೀಲ್‌ಡೌನ್ ತೆರವುಗೊಳಿಸಲಾಗಿದೆ. ಆದರೆ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸಲಿವೆ.ಅನಗತ್ಯವಾಗಿ ಜಿಲ್ಲೆಗೆ ಬರುವವರಿಗೆ ಅವಕಾಶವಿಲ್ಲ. ಅಗತ್ಯ ಕೆಲಸಗಳಿಗೆ ಜಿಲ್ಲೆಗೆ ಆಗಮಿಸುವವರು ಈ ಬಗ್ಗೆ ಅಗತ್ಯ ದಾಖಲೆಗಳನ್ನು ಇರಿಸಿಕೊಂಡು ಅದನ್ನು ಚೆಕ್‌ಪೋಸ್ಟ್‌ಗಳಲ್ಲಿ ಪರಿಶೀಲನೆಗೆ ನೀಡಬೇಕು. ಸಾರ್ವಜನಿಕ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಮಾಸ್ಕ್ ಕಡ್ಡಾಯ: ಸಾರ್ವಜನಿಕರು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸಬೇಕು. ಎಲ್ಲಾ ವ್ಯಕ್ತಿಗಳು ಸುರಕ್ಷಿತ ಅಂತರ ವನ್ನು ಕಾಪಾಡಬೇಕು. ಇವುಗಳ ಉಲ್ಲಂಘನೆಗಾಗಿ ಅಧಿಕಾರಿಗಳು ನಿಗದಿ ಪಡಿಸಿದ ದಂಡವನ್ನು ವಿಧಿಸಬಹುದಾಗಿದೆ. ಸ್ಥಳೀಯ ಪ್ರಾಧಿಕಾರಗಳು ಅದರ ಕಾನೂನು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದನ್ನು ನಿರ್ಬಂಧಿಸಿದೆ. ಇದರ ಉಲ್ಲಂಘನೆಗಾಗಿ ನಿಗದಿಪಡಿಸಿದ ದಂಡವನ್ನು ವಿಧಿಸಬಹುದಾಇದೆ.

ಸರಕಾರಿ ಆದೇಶದಂತೆ ಅನ್‌ಲಾಕ್-2.0 ಮಾರ್ಗಸೂಚಿಗಳಿಗೆ ಬದಲಾವಣೆ ಮಾಡಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ ರಾತ್ರಿ ಕರ್ಪ್ಯೂ ರಾತ್ರಿ 9:00ರಿಂದ ಬೆಳಗ್ಗೆ 5:00ರವರೆಗೆ ಜಾರಿಯಲ್ಲಿರುತ್ತದೆ. ಹಾಗೂ ರವಿವಾರದ ಲಾಕ್‌ಡೌನ್ ಪ್ರಸ್ತುತ ಚಾಲ್ತಿಯಲ್ಲಿರುವಂತೆ ಪ್ರತಿ ರವಿವಾರ ಮುಂದುವರಿಯಲಿದೆ. ಈ ಎಲ್ಲಾ ಆದೇಶ ಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ವಿಕೋಪ ನಿರ್ವಹಣೆ ಕಾಯ್ದೆ 2005, ಸಾಂಕ್ರಾಮಿಕ ರೋಗಗಳ ಕಾಯ್ದೆ-1897ಮತ್ತು ಐಪಿಸಿ ಸೆಕ್ಷನ್ 188ರ ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X