ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ: ಉಡುಪಿ ಡಿಸಿ

ಉಡುಪಿ, ಜು.23: ಕೋವಿಡ್ ಸಂದರ್ಭದಲ್ಲಿ ಯಾವುದೇ ಹಬ್ಬವನ್ನು ಸಾರ್ವಜನಿಕವಾಗಿ ಆಚರಣೆ ಮಾಡುವಂತಿಲ್ಲ. ಅವರವರ ಮನೆಯಲ್ಲಿ ನಾಗಪೂಜೆ ಮಾಡಲು, ನಾಗರಪಂಚಮಿ ಆಚರಣೆ ಮಾಡಲು ಯಾರ ಅನುಮತಿಯ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಆದರೆ, ಸಾರ್ವಜನಿಕರು ಒಟ್ಟಿಗೆ ಸೇರಿ ಯಾವುದೇ ಹಬ್ಬ ಆಚರಣೆ ಮಾಡಲು ಅವಕಾಶವಿಲ್ಲ ಎಂದೂ ಅವರು ಹೇಳಿದ್ದಾರೆ. ನಾಗರ ಪಂಚಮಿಯ ದಿನದಂದು (ಜು.25) ನಾಗರ ಪೂಜೆ ಮಾಡಬಾರದು ಎಂದು ಡಿಸಿ ಹೇಳಿದ್ದಾರೆ ಎಂಬ ತಪ್ಪು ಅಭಿಪ್ರಾಯದ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು, ಇದನ್ನು ಪಾರ್ವರ್ಡ್ ಮಾಡುವವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
Next Story





