ಕಾಪು: ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಚೆಕ್ ವಿತರಣೆ

ಕಾಪು: ಪ್ರಕೃತಿ ವಿಕೋಪದಲ್ಲಿ ಹಾನಿಗೊಳಗಾದ ಮನೆಯವರಿಗೆ ಪ್ರಕೃತಿ ವಿಕೋಪ ಪರಿಹಾರದ ಸುಮಾರು 9 ಫಲಾನುಭವಿಗಳಿಗೆ ಒಟ್ಟು 18.91 ಲಕ್ಷ ರೂ.ಗಳ ಚೆಕ್‍ನ್ನು ಗುರುವಾರ ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಕಾಪುವಿನ ತನ್ನ ಕಚೇರಿಯಲ್ಲಿ ವಿತರಿಸಿದರು.
ಮಳೆಗಾಲ ಆರಂಭದಲ್ಲಿ ಕಾಪು ತಾಲ್ಲೂಕಿನ ವಿವಿದೆಡೆಯ ಕೆಲವು ಮನೆಗಳು ಹಾನಿಯಾಗಿದ್ದವು. ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಮನೆಯವರಿಗೆ ಸೂಕ್ತ ಮೂಲಭೂತ ಸೌಕರ್ಯಗಳೊಂದಿಗೆ ಹೆಚ್ಚಿನ ಪರಿಹಾರ ದೊರಕಿಸುವ ಭರವಸೆಯನ್ನು ನೀಡಿದ್ದರು.
ಈ ಸಂದರ್ಭದಲ್ಲಿ ಮಾನ್ಯ ಶಾಸಕರೊಂದಿಗೆ ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್, ಕಾಪು ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ರಾವ್, ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ, ಪುರಸಭಾ ಸದಸ್ಯರಾದ ರಮೇಶ್ ಹೆಗ್ಡೆ, ಮಮತಾ ಕುಶಾ ಸಾಲ್ಯಾನ್ ಉಪಸ್ಥಿತರಿದ್ದರು
Next Story





