Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೌರ ಕಾರ್ಮಿಕರಿಗೆ ವಿಮೆ ಕಲ್ಪಿಸುತ್ತಿರುವ...

ಪೌರ ಕಾರ್ಮಿಕರಿಗೆ ವಿಮೆ ಕಲ್ಪಿಸುತ್ತಿರುವ ಎಂಬ ಬಗ್ಗೆ ವಿವರಣೆ ನೀಡಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 July 2020 11:01 PM IST
share
ಪೌರ ಕಾರ್ಮಿಕರಿಗೆ ವಿಮೆ ಕಲ್ಪಿಸುತ್ತಿರುವ ಎಂಬ ಬಗ್ಗೆ ವಿವರಣೆ ನೀಡಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು, ಜು.3: ಕೊರೋನ ಸೋಂಕು ದೃಢಪಟ್ಟು ಮೃತರಾಗುವ ಪೌರ ಕಾರ್ಮಿಕರಿಗೆ ಗರೀಬ್ ಕಲ್ಯಾಣ್ ಯೋಜನೆ ಅಡಿ ಕಾರ್ಮಿಕರಿಗೆ ವಿಮೆ ಕಲ್ಪಿಸಲಾಗುತ್ತಿದೆಯೇ, ಕೊರೋನ ವಾರಿಯರ್ಸ್ ಗಳಿಗೆ ನೀಡುತ್ತಿರುವಂತೆ ಇವರಿಗೂ 50 ಲಕ್ಷ ಪರಿಹಾರ ನೀಡಲು ಅವಕಾಶವಿದೆಯೇ ಎಂಬುದರ ಬಗ್ಗೆ ವಿವರಣೆ ನೀಡಲು ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ.

ಕೊರೋನ ಸೋಂಕು ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲರು, ಪೌರ ಕಾರ್ಮಿಕರಿಗೆ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಸೇರಿ ಅಗತ್ಯ ಸುರಕ್ಷತಾ ಸಾಧನಗಳನ್ನು ನೀಡಿಲ್ಲ. ಹೀಗಾಗಿಯೇ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವರು ಸೋಂಕಿಗೆ ಒಳಗಾಗಿದ್ದಾರೆ. ಶಿವಾಜಿನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಎರಡು ತಿಂಗಳಿಂದ ವೇತನವನ್ನೇ ಪಾವತಿಸಿಲ್ಲ. ಕನಿಷ್ಠ ವಿಮೆ ಕೂಡ ನೀಡಿಲ್ಲ ಎಂದು ಆರೋಪಿಸಿದರು.

ಪಾಲಿಕೆ ಪರ ವಾದಿಸಿದ ವಕೀಲ ಶ್ರೀನಿಧಿ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ 17,419 ಪೌರ ಕಾರ್ಮಿಕರಿಗೂ ಪಿಪಿಇ ಕಿಟ್ ಕೊಡಲಾಗಿದೆ. ಇವರಿಗೆ ತಲಾ 18,200 ರೂಪಾಯಿ ಪ್ರತಿ ತಿಂಗಳೂ ವೇತನ ನೀಡಲಾಗುತ್ತಿದೆ. ಆದರೂ ಕೊರೋನ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, 15 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ಹತ್ತು ಲಕ್ಷ ಪರಿಹಾರ ಮತ್ತು ಅಂತ್ಯಕ್ರಿಯೆ ವೆಚ್ಚವಾಗಿ ತಲಾ 20 ಸಾವಿರ ನೀಡಲಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪೌರ ಕಾರ್ಮಿಕರಿಗೆ ಪಿಪಿಇ ಕಿಟ್ ನೀಡದಿರುವ ಕುರಿತು ಆರೋಪಗಳಿದ್ದು ಇದಕ್ಕೆ ಸ್ಪಷ್ಟನೆ ನೀಡಬೇಕು. ವಿಮೆ ನೀಡುವ ವಿಚಾರದಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ವಿಮೆ ಲಭ್ಯವಿರುವ ಬಗ್ಗೆ ಮತ್ತು ಈಗಾಗಲೇ ಕೊರೋನ ವಾರಿಯರ್ಸ್ ಗೆ ಘೋಷಿಸಲಾಗಿರುವ 50 ಲಕ್ಷ ವಿಮೆ ಪರಿಹಾರ ಇವರಿಗೂ ನೀಡಲು ಸಾಧ್ಯವಿರುವ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡಬೇಕು. ಈ ಯೋಜನೆಯ ಲಾಭ ಪಾಲಿಕೆಯ ಗುತ್ತಿಗೆ ಕಾರ್ಮಿಕರಿಗೂ ಅನ್ವಯಿಸುತ್ತದೆಯೇ ಎಂಬುದರ ಕುರಿತು ಮಾಹಿತಿ ನೀಡಬೇಕೆಂದು ಸೂಚಿಸಿ ವಿಚಾರಣೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X