ಮೈಸೂರಿನಲ್ಲಿ 2 ಸಾವಿರ ದಾಟಿದ ಕೊರೋನ ಸೋಂಕಿತರ ಸಂಖ್ಯೆ

ಮೈಸೂರು,ಜು.23: ಮೈಸೂರಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದ್ದು, ಇಂದು ಒಂದೇ ದಿನ 116 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.
ದಿನೇ ದಿನೇ ಕೊರೋನ ಸೋಂಕು ಹೆಚ್ಚುತಿದ್ದು, ಇಂದು 8 ಮಂದಿ ಸಾವನ್ನಪ್ಪಿದ್ದು ಇದುವರೆಗೆ ಕೊರೋನ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 93ಕ್ಕೆ ಏರಿದೆ.
ಇಂದು 116 ಮಂದಿಗೆ ಕೊರೋನ ಸೋಂಕು ದೃಡಪಟ್ಟಿದ್ದು, ಇದುವರೆಗೆ ಕೊರೋನ ಸೋಂಕಿತರ ಸಂಖ್ಯೆ 2,169ಕ್ಕೆ ಏರಿದಂತಾಗಿದೆ. ಇಂದು 38 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 731 ಮಂದಿ ಕೊರೋನ ಸೋಂಕಿತರು ಗುಣಮುಖರಾಗಿದ್ದಾರೆ. 1345 ಸಕ್ರಿಯ ಪ್ರಕರಣಗಳಯ ಇವೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





