ಕುಂಬಳೆ ಠಾಣೆ ಪೊಲೀಸ್ ಸಿಬಂದಿಗೆ ಕೊರೋನ ಪಾಸಿಟಿವ್: 20 ಪೊಲೀಸರಿಗೆ ಕ್ವಾರಂಟೈನ್
ಕಾಸರಗೋಡು: ಪೊಲೀಸ್ ಸಿಬಂದಿಯೊಬ್ಬರಿಗೆ ಕೊರೋನ ಪಾಸಿಟಿವ್ ದೃಡಪಟ್ಟ ಹಿನ್ನಲೆಯಲ್ಲಿ ಕುಂಬಳೆ ಠಾಣೆಯ 20 ಪೊಲೀಸರು ಕ್ವಾರಂಟೈನ್ ಗೆ ತೆರಳಿದ್ದಾರೆ. ಗುರುವಾರ ಬಂದ ಆರೋಗ್ಯ ಇಲಾಖೆಯ ವರದಿಯಲ್ಲಿ ಕುಂಬಳೆ ಠಾಣೆಯ ಪೊಲೀಸ್ ಸಿಬಂದಿಗೆ ಸೋಂಕು ಪತ್ತೆಯಾಗಿತ್ತು.
ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗಾಗಲೇ 134 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 84 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬಹುತೇಕ ಮಂದಿಗೆ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿನಿಂದ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದೆ. ಅಗತ್ಯ ವಸ್ತುಗಳ ಅಂಗಡಿಗಳು ಎರಡು ದಿನಗಳಿಗೊಮ್ಮೆ ತೆರೆಯಲು ಅನುಮತಿ ನೀಡಲಾಗಿದೆ.
Next Story