ಬೆಂಗಳೂರಿನಲ್ಲಿ 2,036 ಕೊರೋನ ಪ್ರಕರಣ ದೃಢ; 30 ಜನರು ಮೃತ

ಬೆಂಗಳೂರು, ಜು.25: ನಗರದಲ್ಲಿ ಶನಿವಾರ 2,036 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 30 ಜನರು ಮೃತರಾಗಿದ್ದಾರೆ.
ನಗರದಲ್ಲಿ ಒಟ್ಟು 43,503 ಸೋಂಕಿತರು ಧೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 862 ಜನರು ಸೋಂಕಿಗೆ ಬಲಿಯಾಗಿದ್ದು, 10,758 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 31,882 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 40,759 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಶನಿವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5ಗಂಟೆಯ ವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಅಗತ್ಯ ಸೇವೆಗಳಿಗೆ ಹೊರತು ಪಡಿಸಿ, ಅನವಶ್ಯಕವಾಗಿ ಓಡಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
-ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಯುಕ್ತ
Next Story





