ಕಾಸರಗೋಡು: ಕೊರೋನ ಸೋಂಕಿಗೆ ಮತ್ತೋರ್ವ ಮೃತ್ಯು

ಕಾಸರಗೋಡು, ಜು.26: ಕೊರೋನ ವೈರಸ್ ಸೋಂಕಿಗೆ ಕಾಸರಗೋಡು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ.
ಸೋಂಕಿಗೆ ಪಾಸಿಟಿವ್ ಆಗಿದ್ದ ಕುಂಬಳೆ ಆರಿಕ್ಕಾಡಿಯ 75 ವರ್ಷದ ವ್ಯಕ್ತಿಯೊಬ್ಬರು ಇಂದು ಬೆಳಗ್ಗೆ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿಡ್ನಿ ವೈಫ್ಯಲ್ಯದಿಂದ ಬಳಲುತ್ತಿದ್ದ ಇವರನ್ನು ಶುಕ್ರವಾರ ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದಾಗ ಕೂರೋನ ಸೋಂಕು ತಗಲಿರುವುದು ಪತ್ತೆಯಾಗಿತ್ತು. ನಿನ್ನೆ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.
ಜಿಲ್ಲೆಯಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ನಿಯಂತ್ರಣಗಳನ್ನು ಜಾರಿಗೆ ತರಲಾಗಿದೆ.
Next Story





