Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್,...

ಕೋವಿಡ್ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್, ಬಿಜೆಪಿಗೆ ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆ

"ಹಗರಣದ ಬಗ್ಗೆ ದೂರು ನೀಡದೆ ಕಾಂಗ್ರೆಸ್ ಪ್ರಚಾರಕ್ಕಷ್ಟೆ ಸೀಮಿತವಾಗಿದೆ"

ವಾರ್ತಾಭಾರತಿವಾರ್ತಾಭಾರತಿ26 July 2020 7:36 PM IST
share
ಕೋವಿಡ್ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್, ಬಿಜೆಪಿಗೆ ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆ

ಬೆಂಗಳೂರು, ಜು. 26: ಕೊರೋನದಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂತಹ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್ ಭ್ರಷ್ಟಾಚಾರದ ಆರೋಪ ಕೇಳಿ ಬಂದಿರುವುದು ದುರ್ದೈವ ಎಂದು ಜೆಡಿಎಸ್ ಶಾಸಕಾಂಗ ಪಕ್ಷ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಟೀಕಿಸಿದ್ದಾರೆ.

ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್, ಹಗರಣದ ಬಗ್ಗೆ ಈವರೆಗೆ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡದೆ ಪ್ರಚಾರಕ್ಕಷ್ಟೆ ಸೀಮಿತವಾಗಿ, ಆರೋಪ ಹೊತ್ತಿರುವ ಆಡಳಿತ ಪಕ್ಷ ತನಿಖೆಯಿಂದ ಮುಕ್ತಿ ಪಡೆಯುವ ಯಾವ ಕ್ರಮಕ್ಕೂ ಮುಂದಾಗದೆ, ಹಗರಣ ನಡೆದಿರುವುದನ್ನು ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದೆ. ಜನರನ್ನು ರಕ್ಷಿಸಬೇಕಾದವರೇ ಕೆಸರೆರಚಾಟದ ಮೂಲಕ ಜನರ ಜೀವದ ಜೊತೆಗೆ ಚೆಲ್ಲಾಟ ಆಡುತ್ತಿರುವುದು ಅತ್ಯಂತ ಕ್ರೂರ ನಡವಳಿಕೆ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಬಳಿ ಉತ್ತರವಿದೆಯೇ?: ಕೋವಿಡ್ ಹಗರಣದ ಬಗ್ಗೆ ಸರಕಾರದ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಎಲ್ಲ ದಾಖಲೆ ಪತ್ರಗಳಿದ್ದೂ ಈವರೆಗೆ ಯಾರ ವಿರುದ್ಧವೂ ಯಾಕೆ ಒಂದೇ ಒಂದು ದೂರು ದಾಖಲಿಸಿಲ್ಲ? ದೂರು ದಾಖಲು ಮಾಡದೇ ನಿತ್ಯ ಪತ್ರಿಕಾಗೋಷ್ಠಿಯಲ್ಲಿ ಬಂದು ಏರುಧ್ವನಿಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರ ನಡೆಯ ಹಿಂದೆ ಪ್ರಚಾರ ಪ್ರಿಯತೆ ಅಡಗಿದೆಯೋ ಅಥವಾ ಸಾರ್ವಜನಿಕ ಹಣ ಅಪವ್ಯವಾಗುತ್ತಿದೆ ಎಂಬ ಪ್ರಮಾಣಿಕ ಕಾಳಜಿ ಇದೆಯೋ? ಎಂದು ಪ್ರಶ್ನಿಸಿದ್ದಾರೆ.

'ಲೆಕ್ಕ ಕೊಡಿ' ಎಂದು ಕಾಂಗ್ರೆಸ್ ನ ಸಿಎಲ್ಪಿ ನಾಯಕರು ಕೇಳುತ್ತಾರೆ. `ಉತ್ತರ ಕೊಡಿ ಬಿಜೆಪಿ' ಎಂದು ಪಕ್ಷದ ಅಧ್ಯಕ್ಷರು ಕೇಳುತ್ತಾರೆ. ನಿಮಗೆ ಉತ್ತರ, ಲೆಕ್ಕ ಕೊಟ್ಟರೆ ಸಾಕೆ? ಹಗರಣವನ್ನು ಕಾನೂನಾತ್ಮಕ ಹೋರಾಟದ ದಿಕ್ಕಿಗೆ ಕೊಂಡೊಯ್ಯುವ ಯಾವುದಾದರೂ ನಿಶ್ಚಿತ, ನಿಖರ ಯೋಜನೆ ಇದೆಯೇ? ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಲೋಕಾಯುಕ್ತ ಸಂಸ್ಥೆಯ ರಕ್ತ, ಮಾಂಸವನ್ನು ಹೀರಿ, ತಿಂದು ಇದೇ ಕಾಂಗ್ರೆಸ್ ಸರಕಾರ ಎಸಿಬಿ ರಚಿಸಿತ್ತು. ಹಗರಣದ ಸಂಬಂಧ ಇದೇ ಸಂಸ್ಥೆಗೆ ಕಾಂಗ್ರೆಸ್ ದೂರು ನೀಡಬಹುದಿತ್ತಲ್ಲ? ಯಾಕೆ ಎಸಿಬಿ ಮೇಲೆ ಕಾಂಗ್ರೆಸ್ ಗೆ ನಂಬಿಕೆ ಇಲ್ಲವೇ? ಕೋವಿಡ್ ಅಕ್ರಮದ ಆರೋಪ ಮಾಡಿದಾಗಿನಿಂದ ಕಾಂಗ್ರೆಸ್ ನಾಯಕರು ಹೇಳಿಕೆ, ಟ್ವೀಟ್, ಟ್ವಿಟರ್ ಟ್ರೆಂಡ್, ಪತ್ರ ಚಳವಳಿಗೆ ಮಾತ್ರ ಸೀಮಿತವಾಗಿರುವುದನ್ನು ನೋಡುತ್ತಿದ್ದರೆ ಇದು ಕೇವಲ ಪ್ರಚಾರಕ್ಕಾಗಿ, ಸುದ್ದಿಯಲ್ಲಿರಲ್ಲಿಕ್ಕಾಗಿ ಮಾಡುತ್ತಿರುವ ಪ್ರಹಸನ ಎನಿಸುತ್ತಿದೆ. ಇದಕ್ಕೆ ನಿಮ್ಮ ಉತ್ತರವೇನು? ಜವಾಬ್ದಾರಿಯುತ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಗೆ ಸಾರ್ವಜನಿಕರ ಹಣದ ಮೇಲೆ ಅಷ್ಟು ಕಾಳಜಿ ಇದ್ದರೆ ಮೊದಲು ಯಾವುದಾದರೂ ತನಿಖಾ ಸಂಸ್ಥೆಗೆ ಅಧಿಕೃತವಾಗಿ ದೂರು ದಾಖಲಿಸಲಿ. ಇದು ನನ್ನ ಸವಾಲು' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಬಿಜೆಪಿ ಉತ್ತರಿಸುವುದೇ?: `ಸುಮಾರು 2 ಸಾವಿರ ಕೋಟಿ ರೂ.ಮೊತ್ತದ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡಿದರೂ ಬಿಜೆಪಿ ಏಕೆ ತನಿಖೆಯ ಆಗ್ರಹಗಳಿಗೆ ಕಿವಿಗೊಡುತ್ತಿಲ್ಲ. ತನಿಖೆಯ ಕಡೆಗೆ ಗಮನವನ್ನೇ ನೀಡದೆ ನಿಂದನೆಯನ್ನು ಏಕೆ ಹೊತ್ತು ತಿರುಗುತ್ತಿದೆ?, ನಿರ್ದಿಷ್ಟ ಸಚಿವರ ಮೇಲೆ ಗಂಭೀರ ಆರೋಪಗಳು ಬಂದರೂ ಅವರಿಂದ ರಾಜೀನಾಮೆ ಪಡೆದಿಲ್ಲ ಏಕೆ? ಇದೇನಾ ಜನರಿಗೆ ಯಡಿಯೂರಪ್ಪನವರ ಉತ್ತರದಾಯಿತ್ವ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

'ಸಚಿವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿಗೆ ರಾಜಕೀಯದ ಒತ್ತಡ ಇರಬಹುದು. ಆದರೆ, ಅಧಿಕಾರಿಗಳ ವಿರುದ್ಧವಾದರೂ ಕ್ರಮ ಕೈಗೊಳ್ಳಬಹುದಿತ್ತು. ಈವರೆಗೆ ಒಬ್ಬನೇ ಒಬ್ಬ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡ ವರದಿ ಇಲ್ಲ. ಅಧಿಕಾರಿಗಳನ್ನು ಅಲ್ಲಲ್ಲಿಯೇ ಬಿಟ್ಟು ಸಾಕ್ಷ್ಯ ನಾಶಕ್ಕೇನಾದರೂ ಪ್ರಯತ್ನಿಸುತ್ತಿದ್ದೀರಾ? ಕಾಂಗ್ರೆಸ್ ಮಾಡುತ್ತಿರುವ ಸುದ್ದಿಗೋಷ್ಠಿಗೆ ಪ್ರತಿಯಾಗಿ ಸಚಿವರಿಂದ ಪತ್ರಿಕಾಗೋಷ್ಠಿ ಮಾಡಿಸುತ್ತಿರುವ ಸರಕಾರ ಇಲ್ಲಿ ಪ್ರಚಾರ ಪಡೆಯಲೇನಾದರೂ ಪ್ರಯತ್ನಿಸುತ್ತಿದೆಯೇ? ಅದೂ ಐವರು ಸಚಿವರು ಒಟ್ಟೊಟ್ಟಿಗೆ ಬಂದು ಮಾಧ್ಯಮಗಳ ಮುಂದೆ ನಿಲ್ಲುವುದನ್ನು ನೋಡಿದರೆ ಮಂತ್ರಿಮಂಡಲದ ಸಹೋದ್ಯೋಗಿಗಳಲ್ಲಿ ಪ್ರಚಾರದ ದಾಹ ತೀವ್ರವಾಗಿರುವಂತೆ ಕಾಣದೇ?' ಎಂದು ಕಿಡಿಕಾರಿದ್ದಾರೆ.

ಹಗರಣದ ಬಗ್ಗೆ ಈವರೆಗೆ ಪ್ರತಿ ಹೇಳಿಕೆಗಳನ್ನೇ ನೀಡುತ್ತಿರುವ ಸರಕಾರ ತನಿಖೆಗೆ ಹಿಂದೇಟು ಹಾಕುತ್ತಿರುವುದು ನೋಡಿದರೆ, ಹಣ ಕದಿಯಲಾಗಿದೆ ಎಂದು ಅನಿಸದೇ? ಆಪರೇಷನ್ ಕಮಲಕ್ಕೆ ಮಾಡಿದ್ದ ಸಾಲ ತೀರಿಸಲು ಈ ಹಗರಣ ಮಾಡಿದ್ದೀರಾ? ದೇಶದ ಅತಿಸ್ವಚ್ಛ, ಭ್ರಷ್ಟಾಚಾರ ರಹಿತ, ದೇಶವನ್ನು ವಿಶ್ವಗುರು ಪಟ್ಟಕ್ಕೇರಿಸಲು ಹೊರಟಿರುವ ಬಿಜೆಪಿ ಆರೋಪದಿಂದ ಮುಕ್ತಿ ಪಡೆಯಲು ಸೂಕ್ತ ನಡೆ ಅನುಸರಿಸಬೇಕು' ಎಂದು ಕುಮಾರಸ್ವಾಮಿ ಪ್ರಕಟಣೆಯಲ್ಲಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X