ಕೊರೋನ ವಿರುದ್ಧದ ಹೋರಾಟಕ್ಕೆ ಉಪಕರಣ ಖರೀದಿಸಲು ಸೇನಾ ಆಸ್ಪತ್ರೆಗೆ 20 ಲಕ್ಷ ರೂ. ನೀಡಿದ ರಾಷ್ಟ್ರಪತಿ

ಹೊಸದಿಲ್ಲಿ, ಜು. 26: ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೊರೋನ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ನೆರವಾಗುವ ಉಪಕರಣಗಳನ್ನು ಖರೀದಿಸಲು ಇಲ್ಲಿನ ಸೇನಾ ಆಸ್ಪತ್ರೆಗೆ ರವಿವಾರ 20 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಶಸ್ತ್ರಚಿಕಿತ್ಸೆ ಸಂಬಂರ್ಧ ವೈದ್ಯಕೀಯ ಸಿಬ್ಬಂದಿ ಉಸಿರಾಡಲು ಅನುವಾಗುವ ಹಾಗೂ ಸೋಂಕಿನಿಂದ ಅವರನ್ನು ರಕ್ಷಿಸುವ ಉಪಕರಣಗಳಾದ ಪಿಎಪಿಆರ್ ಅನ್ನು ಹೊಂದಲು ರಾಷ್ಟ್ರಪತಿ ಅವರು ನೀಡಿದ ದೇಣಿಗೆಯನ್ನು ಬಳಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಹಾಗೂ ಪ್ರಾಣಾರ್ಪಣೆ ಮಾಡಿದ ಯೋಧರಿಗೆ ಗೌರವ ಸಲ್ಲಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೊರೋನಾ ವಿರುದ್ಧ ಸಮರ್ಥವಾಗಿ ಹೋರಾಡಲು ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ನೆರಾಗುವ ಉಪಕರಣಗಳನ್ನು ಖರೀದಿಸಲು 20 ಲಕ್ಷ ರೂಪಾಯಿ ಚೆಕ್ ಅನ್ನು ದಿಲ್ಲಿಯ ಸೇನಾ ಆಸ್ಪತ್ರೆಗೆ ನೀಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ರವಿವಾರ ಭಾರತ ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ ದಿನ. ಈ ದಿನವನ್ನು ‘ಕಾರ್ಗಿಲ್ ವಿಜಯ ದಿವಸ್’ ಎಂದು ಆಚರಿಸಲಾಗುತ್ತದೆ.







