Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ಸೀಲ್‌ಡೌನ್ ನಿಯಮ ಉಲ್ಲಂಘನೆ;...

ಪಡುಬಿದ್ರಿ: ಸೀಲ್‌ಡೌನ್ ನಿಯಮ ಉಲ್ಲಂಘನೆ; ಗುಜರಾತ್ ಮೂಲದ ಕಂಪೆನಿ ವಿರುದ್ಧ ಪ್ರಕರಣ ದಾಖಲು

ಒಟ್ಟು 63 ಮಂದಿ ನೌಕರರಲ್ಲಿ ಸೋಂಕು ಪತ್ತೆ

ವಾರ್ತಾಭಾರತಿವಾರ್ತಾಭಾರತಿ26 July 2020 7:50 PM IST
share
ಪಡುಬಿದ್ರಿ: ಸೀಲ್‌ಡೌನ್ ನಿಯಮ ಉಲ್ಲಂಘನೆ; ಗುಜರಾತ್ ಮೂಲದ ಕಂಪೆನಿ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರಿ, ಜು.26: ಕೋವಿಡ್-19 ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸದೆ, ಸೀಲ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಇನ್ನಾ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಗುಜರಾತಿ ಮೂಲದ ಕಂಪೆನಿಯೊಂದರ 13 ಮಂದಿ ವಿರುದ್ಧ ಶನಿವಾರ ಪಡುಬಿದ್ರಿ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಈ ಕಂಪೆನಿಯ ಒಟ್ಟು 63 ಮಂದಿ ನೌಕರರಿಗೆ ಕೋವಿಡ್ ಪಾಸಿಟಿವ್ ಆಗಿತ್ತು ಎಂದು ಹೇಳಲಾಗಿದೆ.

ಕಾರ್ಕಳ ತಾಲೂಕಿನ ಇನ್ನಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಜರಕಟ್ಟೆಯಲ್ಲಿ ಹೊರದೇಶಗಳಿಗೆ ರಫ್ತಾಗುವ ಪ್ಲಾಸ್ಟಿಖ್ ಬ್ಯಾಗ್‌ಗಳನ್ನು ತಯಾರಿಸುವ ಬ್ರೈಟ್ ಪ್ಲೆಕ್ಸ್ ಇಂಟರ್ ನ್ಯಾಷನಲ್ ಎಂಬ ಕಂಪೆನಿಯ ಕೆಲ ನೌಕರರಿಗೆ ಕೋವಿಡ್ ಸೋಂಕು ದೃಢಪಟ್ಟ ಕಾರಣ ಕಂಪೆನಿಯನ್ನು ಜು. 21 ರಂದು ಸೀಲ್‌ಡೌನ್ ಮಾಡಲಾಗಿತ್ತು. ಆದರೆ ಕಂಪೆನಿಯ ಕೆಲವರು ಸೀಲ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಬೇರೆಡೆ ತೆರಳಲು ಆಸ್ಪದ ನೀಡಿದ ಬಗ್ಗೆ ಇನ್ನ ಗ್ರಾಮ ಪಂಚಾಯಿತಿಗೆ ಬಂದ ದೂರಿನಂತೆ 24ರಂದು ಕಂಪೆನಿಗೆ ನೋಟಿಸ್ ನೀಡಲಾಗಿತ್ತು. ಅದೇ ದಿನ ಕೆಲವು ಕಾರ್ಮಿಕರನ್ನು ಕೋವಿಡ್ -19 ಪರೀಕ್ಷೆಗೂ ಒಳಪಡಿಸಲಾಗಿದ್ದು, 36 ಮಂದಿಗೆ ಸೋಂಕು ದೃಢಪಟ್ಟಿತ್ತು.

ನಿಯಮ ಉಲ್ಲಂಘಿಸಿ ಸೋಂಕು ಹರಡಲು ಕಂಪೆನಿಯ ಎ.ಕೆ ಬನ್ಸಾಲ್, ಅಂಕಿತ್‌ಕುಮಾರ್ ಬನ್ಸಾಲ್, ಅಭಿನವ್ ಕುಮಾರ್ ಬನ್ಸಾಲ್, ಮಹೇಂದ್ರ ಗಾಂಧಿ, ಟಿ.ಎಸ್ ಗುಪ್ತ, ಗಣೇಶ್ ಪೈ, ಅನಿಲ್ ಪಾಲನ್, ದುದೆರ್ ಶರ್, ಮುನ್ನಕುಮಾರ್, ಪ್ರತಾಪ್ ನ್ಯಾಯ್ಕ್, ಸಚಿನ್ ಕುಮಾರ, ಸಿಕಂದರ್ ರಾಯ್, ಬಬನ್ ನ್ಯಾಯ್ಕಾ ಕಾರಣವಾಗಿದ್ದಾರೆ ಎಂದು ಆರೋಪಿಸಿ ಕಾರ್ಕಳ ತಾಲೂಕು ಗ್ರಾಮೀಣ ಕೋವಿಡ್-19 ಜಾಗೃತ ದಳ ಅಧಿಕಾರಿ ಡಾ.ಹೆಚ್. ಸುಬ್ರಮಣ್ಯ ಪ್ರಸಾದ್ ಇಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಅದರಲ್ಲೂ ದುದೆರ್‌ಶರ್, ಮುನ್ನಕುಮಾರ್, ಪ್ರತಾಪ್ ನ್ಯಾಯ್ಕ್, ಸಚಿನ್ ಕುಮಾರ, ಶಿಕಂದರ್ ರಾಯ್, ಬಬ್ಬನ್ ನ್ಯಾಯ್ಕ್ ಕಂಪೆನಿ ಆವರಣದಿಂದ ನಾಪತ್ತೆಯಾಗಿದ್ದು ಅವರೆಲ್ಲರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಸೋಂಕು 51 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ರವಿವಾರ ಕಂಪೆನಿಯ ಇನ್ನೂ 12 ಮಂದಿಯಲ್ಲಿ ಸೋಂಕು ದೃಢವಾಗಿದ್ದು, ಎಲ್ಲಾ ಸೇರಿ ಕಂಪೆನಿಯ ಒಟ್ಟು 63 ಮಂದಿಯಲ್ಲಿ ಸೋಂಕು ದೃಢವಾದಂತಾಗಿದೆ. ಸೋಂಕು ದೃಢಪಟ್ಟವರಲ್ಲಿ ಹೆಚ್ಚಿನ ಕಾರ್ಮಿಕರು ಕಂಪೆನಿಯ ಒಳಗೇ ಇರುವ ರೂಮ್‌ಗಳಲ್ಲಿ ವಾಸ್ತವ್ಯವಿದ್ದರು. ಉಳಿದವರು ಬೇರೆ ಬೇರೆ ಬಾಡಿಗೆ ರೂಂನಲ್ಲಿ ಇದ್ದರು ಎಂದು ತಿಳಿದುಬಂದಿದೆ.

ಕಂಪೆನಿಯ ಕಾರ್ಮಿಕರಲ್ಲಿ ಸೋಂಕು ದೃಢವಾಗಿರುವ ಪರಿಣಾಮ ಕಾಂಜರಕಟ್ಟೆ ಪೇಟೆ ಲಾಕ್‌ಡೌನ್ ಆಗಿ ಮಾರ್ಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದ ಪರಿಣಾಮ ಜುಲೈ 21ರಿಂದ ಪೇಟೆಯಲ್ಲಿರುವ ಹೋಟೆಲ್, ಸೇರಿದಂತೆ ಕೆಲ ದಿನಸಿ ಅಂಗಡಿಗಳು ಮುಚ್ಚಲ್ಪಟ್ಟಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X