ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ದಂಧೆ: ವಿದೇಶಿ ಪ್ರಜೆ ಸೇರಿ 15 ಮಂದಿ ಬಂಧನ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.26: ಮಾದಕ ವಸ್ತು ಮಾರಾಟ ಆರೋಪದಡಿ ಓರ್ವ ವಿದೇಶಿ ಪ್ರಜೆ ಸೇರಿ 15 ಜನರನ್ನು ಇಲ್ಲಿನ ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ನಗರದ ಬಾಣಸವಾಡಿ, ಹೆಣ್ಣೂರು, ಕೆ.ಜಿ ಹಳ್ಳಿ, ಹಲಸೂರು, ಭಾರತಿನಗರ, ಶಿವಾಜಿನಗರ, ಇಂದಿರಾನಗರ ಸೇರಿದಂತೆ ಸಿಟಿಯ ಬಹುತೇಕ ಕಡೆಗಳಲ್ಲಿ, ಲಾಕ್ಡೌನ್ ಸಮಯದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮೊಬೈಲ್ ಮೂಲಕ ಸಂಪರ್ಕ ಮಾಡಿಕೊಂಡು ಮಾದಕ ವಸ್ತುಗಳನ್ನ ಮಾರಾಟ ಮಾಡುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ಇವರಿಂದ 5 ಗ್ರಾಂ ಎಂಡಿಎಂಎ, 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಶರಣಪ್ಪ ತಿಳಿಸಿದರು.
Next Story





