ಕಾಪು ಶಾಸಕ ಲಾಲಾಜಿ ಮೆಂಡನ್ ನಿಗಮ ಮಂಡಳಿ ನೇಮಕ ರದ್ದುಗೊಳಿಸಿದ ಸರಕಾರ
ಉಡುಪಿ, ಜು.27: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಅವರನ್ನು ನೇಮಕ ಮಾಡಿದ ಕೆಲವೇ ಗಂಟೆಗಳಲ್ಲಿ ರಾಜ್ಯ ಸರಕಾರ ಆದೇಶವನ್ನು ಹಿಂಪಡೆದುಕೊಂಡಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ದಿಢೀರ್ ನಿರ್ಧಾರಕ್ಕೆ ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಶಾಸಕರ ಅಸಮಾಧಾನದಿಂದ ಈ ಆದೇಶವನ್ನು ವಾಪಾಸ್ಸು ಪಡೆಯಲಾಗಿದೆಯೇ ಅಥವಾ ಈ ಬೆಳವಣಿಗೆಯಿಂದ ಶಾಸಕರು ಅಸಮಾಧಾನ ಪಟ್ಟಿದ್ದಾರೆಯೇ ಎಂಬುದು ಇನ್ನು ಕೂಡ ಸ್ಪಷ್ಟವಾಗಿಲ್ಲ.
ಈ ಬಗ್ಗೆ ಸ್ಪಷ್ಟನೆ ನೀಡಬೇಕಾದ ಶಾಸಕ ಲಾಲಾಜಿ ಮೆಂಡನ್, ಸಂಪರ್ಕಕ್ಕೆ ಸಿಗುತ್ತಿಲ್ಲ. ಕಾಪು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಲಾಲಾಜಿ ಮೆಂಡನ್ 2004, 2008, 2018ರಲ್ಲಿ ಮೂರು ಬಾರಿ ಶಾಸಕರಾಗಿ ಗೆಲುವು ಸಾಧಿಸಿ ದ್ದರು. 2013ರ ಚುನಾವಣೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.
Next Story





