ಉಡುಪಿ: ರಸ್ತೆ ಭೂಸ್ವಾಧೀನಕ್ಕೆ ಗಜೆಟ್ ನೋಟಿಫೀಕೇಶನ್
ಉಡುಪಿ, ಜು.27: ಬಹುದಿನಗಳ ಬೇಡಿಕೆಯಾಗಿರುವ ಆದಿಉಡುಪಿ ಯಿಂದ ಮಲ್ಪೆವರೆಗಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಸಂಬಂಧಿಸಿ, 100 ಅಡಿ ಭೂಸ್ವಾಧೀನಕ್ಕೆ ಕೇಂದ್ರ ಸರಕಾರ ಗಜೆಟ್ ನೋಟಿಫಿಕೇಶನ್ ಹೊರಡಿಸಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಈ ಹೆದ್ದಾರಿ ಅಭಿವೃದ್ಧಿಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಗೆ ವಿಶೇಷವಾದ ಧನ್ಯವಾದವನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story





