Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಮಾದರಿ ಕೋವಿಡ್ ಕೇರ್ ಸೆಂಟರ್...

ಮೈಸೂರು: ಮಾದರಿ ಕೋವಿಡ್ ಕೇರ್ ಸೆಂಟರ್ ಆಗಿ ಕೆಎಸ್‍ಒಯು ಅಕಾಡೆಮಿಕ್ ಭವನ

ಕೊರೋನ ಸೋಂಕಿತರ ಮನರಂಜನೆಗೆ ಚೆಸ್, ಬ್ಯಾಡ್ಮಿಂಟನ್, ಕೇರಂ ಬೋರ್ಡ್

ವಾರ್ತಾಭಾರತಿವಾರ್ತಾಭಾರತಿ27 July 2020 10:56 PM IST
share
ಮೈಸೂರು: ಮಾದರಿ ಕೋವಿಡ್ ಕೇರ್ ಸೆಂಟರ್ ಆಗಿ ಕೆಎಸ್‍ಒಯು ಅಕಾಡೆಮಿಕ್ ಭವನ

ಮೈಸೂರು,ಜು.27: ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು, ಆದರೂ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಪ್ರತಿದಿನ ಪತ್ತೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ಸೋಂಕಿತರಿಗೆ ಹಾಸಿಗೆಗಳ ಕೊರತೆ ಉಂಟಾಗಬಾರದು ಎಂಬ ಮುಂದಾಲೋಚನೆಯಿಂದ ಜಿಲ್ಲೆಯಲ್ಲಿ ಅನೇಕ ಕೋವಿಡ್ ಕೇರ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ.  

ಮೈಸೂರಿನ ಹೊರವಲಯದ ಮಂಡಕಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅಕಾಡೆಮಿಕ್ ಭವನದಲ್ಲೂ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದ್ದು, ಇಲ್ಲಿ ಗುಣಲಕ್ಷಣವಿಲ್ಲದ ಕೊರೋನ ಸೋಂಕಿತ ವ್ಯಕ್ತಿಗಳನ್ನು ದಾಖಲಿಸಿಕೊಂಡು ರುಚಿಯಾದ ಊಟೋಪಚಾರ, ಮನರಂಜನಾ ವ್ಯವಸ್ಥೆ ಮುಂತಾದ ಸೌಲಭ್ಯಗಳ ಜೊತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕೇಂದ್ರದಲ್ಲಿ ದಾಖಲಾಗಿರುವ ವ್ಯಕ್ತಿಗಳು ಆರಾಮದಾಯಕವಾಗಿ ಗುಣಪಡಿಸಿಕೊಂಡು ಬರುತ್ತಿದ್ದಾರೆ.

600 ಹಾಸಿಗೆಯ ಮಾದರಿ ಕೊವೀಡ್ ಕೇರ್ ಸೆಂಟರ್:
ಅಕಾಡೆಮಿಕ್ ಭವನದಲ್ಲಿ ಸುಮಾರು 53 ಸಭಾಂಗಣಗಳಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಎರಡು ಮೀಟರ್ ಅಂತರದಲ್ಲಿ ಒಂದೊಂದರಲ್ಲಿ 15 ರಿಂದ 20 ಹಾಸಿಗೆಯನ್ನು ವ್ಯವಸ್ಥೆ ಮಾಡಲಾಗಿದೆ. ಹಾಸಿಗೆ, ಹೊದಿಕೆ, ತಲೆದಿಂಬು, ಸ್ನಾನದ ಕೊಠಡಿ, ಶೌಚಾಲಯ, ಬಟ್ಟೆ ಸ್ವಚ್ಚಗೊಳಿಸಲು ಅಗತ್ಯ ವ್ಯವಸ್ಥೆ ಎಲ್ಲವೂ ಇವೆ. ಸ್ನಾನಕ್ಕೆ ಬಿಸಿಬಿಸಿ ನೀರು ಇರುತ್ತದೆ. ಎಲ್ಲಾ ಮೂಲಭೂತ ಸೌಕರ್ಯಗಳನ್ನೂ ಒದಗಿಸಲಾಗಿದೆ.

ಮನರಂಜನೆಗೂ ಅವಕಾಶ
ಕೊರೋನ ಸೋಂಕಿಗೆ ಒಳಗಾಗಿ ದಾಖಲಾದ ವ್ಯಕ್ತಿಗಳು ಅಲ್ಲೆ ಇರಬೇಕಾಗುವುದರಿಂದ ಏಕತಾನತೆ, ಬೇಸರ ಉಂಟಾಗಬಹುದು. ಅವರಿಗೆ ಯಾವುದೇ ರೀತಿಯಲ್ಲಿ ಬೇಸರ ಉಂಟಾಬಾರದು ಎಂಬ ಉದ್ದೇಶದಿಂದ ಮನರಂಜನೆಗಾಗಿ ಅಗತ್ಯವಿರುವ ಪೂರಕ ವಾತಾವರಣವನ್ನು ಮೈಸೂರು ಜಿಲ್ಲಾಡಳಿತ ಕಲ್ಪಿಸಿದೆ. ಸಭಾಂಗಣದಲ್ಲಿ ಒಳಾಂಗಣ ಕ್ರೀಡಾಪರಿಕರಗಳಾದ ಕೇರಂ ಬೋರ್ಡ್, ಚೆಸ್ ಹಾಗೂ ಬ್ಯಾಡ್ಮಿಂಟನ್ ಪರಿಕರಗಳನ್ನು ನೀಡಲಾಗಿದೆ. ಪ್ರತಿಯೊಂದು ಕೊಠಡಿಯಲ್ಲೂ ಕೇಬಲ್ ಸಂಪರ್ಕವಿರುವ ಟಿ.ವಿ, ವೈಫೈ ವ್ಯವಸ್ಥೆ ಒಳಗೊಂಡಿದೆ.

ವೈದ್ಯರಿಗೆ ಪ್ರತ್ಯೇಕ ವಿಭಾಗ
ರೋಗಿಗಳ ಸುರಕ್ಷತೆಯಷ್ಟೆ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಗೂ ಪ್ರಾಧಾನ್ಯತೆ ನೀಡಲಾಗಿದೆ. ಕೆಳ ಮಹಡಿಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆಂದೇ ಪ್ರತ್ಯೇಕ ವಿಭಾಗವನ್ನು ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಗ್ರೀನ್ ಝೋನ್ ಎಂದು ಹೆಸರಿಡಲಾಗಿದೆ. ಇಲ್ಲಿ ವೈದ್ಯರು, ಸ್ಟಾಫ್ ನರ್ಸ್ ಹಾಗೂ ಆಡಳಿತ ಸಿಬ್ಬಂದಿಗಳು ಇರುತ್ತಾರೆ.

ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ
ಇಲ್ಲಿ ಶುಚಿತ್ವಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಶುಚಿತ್ವದ ಕೊರತೆ ನಿಭಾಯಿಸಲು ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಶೌಚಾಲಯ ನಿರ್ವಹಣೆ ಸೇರಿದಂತೆ ಕೊವೀಡ್ ಔಷಧೀಯ ತ್ಯಾಜ್ಯವನ್ನು ಅತ್ಯಂತ ಜಾಗರೂಕತೆಯಿಂದ ವಿಲೇವಾರಿ ಮಾಡಲಾಗುತ್ತಿದೆ.

ಜಿಲ್ಲಾಧಿಕಾರಿ ಪ್ರತಿಕ್ರಿಯೆ
ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ಅತ್ಯುತ್ತಮವಾದ ವ್ಯವಸ್ಥೆ ಇದ್ದು, ಅತ್ಯಂತ ಕಡಿಮೆ ಅವಧಿಯಲ್ಲಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ ಶ್ರೇಯಸ್ಸು ಇಲ್ಲಿನ ನೋಡಲ್ ಅಧಿಕಾರಿ ಡಾ.ಅಶೋಕ್ ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಎಂ.ಟಿ.ಮಂಜುನಾಥ್ ಹಾಗೂ ಈ ಕೇಂದ್ರದಲ್ಲಿ ಕೆಲಸ ನಿರ್ವಹಿಸುವ ಎಲ್ಲರಿಗೂ ಸಲ್ಲಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X