ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್ ನೇಮಕಾತಿ ಪರೀಕ್ಷೆಗೆ ಆನ್‍ಲೈನ್ ತರಬೇತಿ
ಬೆಳಗಾವಿ, ಜು.27: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‍ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ಆಯೋಜಿಸಿದೆ.
ಆಸಕ್ತರು ಆಗಸ್ಟ್ 7(ರಜಾ ದಿನಗಳನ್ನು ಹೊರತುಪಡಿಸಿ)ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





