Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಾಸಕರ ಖರೀದಿಯಲ್ಲಿ ಕಾಂಗ್ರೆಸ್ ನಿಪುಣ,...

ಶಾಸಕರ ಖರೀದಿಯಲ್ಲಿ ಕಾಂಗ್ರೆಸ್ ನಿಪುಣ, ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್‌ನಿಂದ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 July 2020 12:14 PM IST
share
ಶಾಸಕರ ಖರೀದಿಯಲ್ಲಿ ಕಾಂಗ್ರೆಸ್ ನಿಪುಣ, ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್‌ನಿಂದ: ಕುಮಾರಸ್ವಾಮಿ

ಬೆಂಗಳೂರು, ಜು.28: ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. ’ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್‌ನಿಂದ ಎಂದು ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ ಮುಂದೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

‘‘ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ‘ಪ್ರಜಾಪ್ರಭುತ್ವ ಉಳಿಸಿ ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರಕಾರ ರಚಿಸಲು ಬೆಂಬಲ ನೀಡಿದ ಬಿಎಸ್ಪಿಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ?’’ ಎಂದು ಅವರು ಪ್ರಶ್ನಿಸಿದ್ದಾರೆ.

‘‘ಸರಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ?’’ ಎಂದು ಕಾಂಗ್ರೆಸ್ಸನ್ನು ಟೀಕಿಸಿದ್ದಾರೆ.

‘‘ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ ’ಅಪರಾಧಿ’ಗಳೇ ಎಂದು ಅಭಿಪ್ರಾಯಿಸಿದ್ದಾರೆ.

ಎಸ್.ಎಂ.ಕೃಷ್ಣ ಅವರ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾಂಗ್ರೆಸ್ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ? 2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಹೊಂಚು ಹಾಕಿರಲಿಲ್ಲವೇ? ಕಾಂಗ್ರೆಸ್ ಬಳಿ ಈ ಪ್ರಶ್ನೆಗಳಿಗೆ ಉತ್ತರಿಸಲು ನೈತಿಕತೆ ಇದೆಯೇ?

2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. ’ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್‌ನಿಂದ.

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ. ಆದ್ದರಿಂದಲೇ ಈ ಪ್ರಜಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ. ಇದರತ್ತ ಚರ್ಚೆಗಳಾದರೂ ನಡೆಯಲಿ. ಪ್ರಜಾಪ್ರಭುತ್ವ ಉಳಿಯಲಿ.

ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು. ಸ್ವಾಮಿ, ಜೀವ ಅಮೂಲ್ಯ. ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ. ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSPಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ?
1/7

— H D Kumaraswamy (@hd_kumaraswamy) July 28, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X